AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ನಗರದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಳ: 3 ತಿಂಗಳಲ್ಲಿ 35 ರಸ್ತೆ ಅಪಘಾತ, ನಾಲ್ವರ ಸಾವು

ಬಳ್ಳಾರಿ ನಗರದಲ್ಲಿ ಕಳೆದ ಮೂರು ತಿಂಗಳಲ್ಲಿ 35 ರಸ್ತೆ ಅಪಘಾತಗಳು ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ. ಕೇವಲ ಮೂರು ದಿನಗಳ ಅಂತರದಲ್ಲಿ ಇಬ್ಬರು ಯುವಕರು ಲಾರಿ ಅಪಘಾತದಲ್ಲಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ನಗರದಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ಕಟ್ಟುನಿಟ್ಟಿನ ನಿಷೇಧ ಹೇರಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬಳ್ಳಾರಿ ನಗರದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಳ: 3 ತಿಂಗಳಲ್ಲಿ 35 ರಸ್ತೆ ಅಪಘಾತ, ನಾಲ್ವರ ಸಾವು
ಬಳ್ಳಾರಿ ನಗರದಲ್ಲಿ ಭಾರಿ ವಾಹನಗಳ ಸಂಚಾರ (ಸಾಂದರ್ಭಿಕ ಚಿತ್ರ)
ವಿನಾಯಕ ಬಡಿಗೇರ್​
| Edited By: |

Updated on:Nov 04, 2026 | 7:39 AM

Share

ಮುಖ್ಯಾಂಶಗಳು

  • ಮೂರು ತಿಂಗಳಲ್ಲಿ 35 ರಸ್ತೆ ಅಪಘಾತಗಳು ದಾಖಲು
  • ಮೂರು ದಿನದಲ್ಲಿ ಇಬ್ಬರು ಯುವಕರ ಸಾವು
  • ಭಾರೀ ವಾಹನ ಸಂಚಾರ ನಿಷೇಧಕ್ಕೆ ಸಾರ್ವಜನಿಕರ ಒತ್ತಾಯ

ಬಳ್ಳಾರಿ, ನವೆಂಬರ್ 4: ಗಣಿನಾಡು ಬಳ್ಳಾರಿ ನಗರದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ನಗರದೊಳಗೆ ಭಾರೀ ಗಾತ್ರದ ವಾಹನಗಳು ಹಾಗೂ ಲಾರಿಗಳ ಸಂಚಾರ ಹೆಚ್ಚಾಗುತ್ತಿರುವುದರಿಂದ ಅಪಘಾತಗಳು ಸಂಭವಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ 35 ರಸ್ತೆ ಅಪಘಾತಗಳು ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ. ಅದರಲ್ಲೂ ಕೇವಲ ಮೂರು ದಿನಗಳ ಅಂತರದಲ್ಲಿ ಇಬ್ಬರು ಯುವಕರು ಲಾರಿ ಅಪಘಾತದಲ್ಲಿ ಮೃತಪಟ್ಟಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಬಳ್ಳಾರಿ ನಗರದ ರೇಡಿಯೋ ಪಾರ್ಕ್ ಬಳಿ ಮೂರು ದಿನಗಳ ಹಿಂದೆ 23 ವರ್ಷದ ಅಬೂ ಎಂಬ ಯುವಕ ಲಾರಿ ಅಡಿಗೆ ಸಿಲುಕಿ ಮೃತಪಟ್ಟಿದ್ದರು. ಇದೀಗ ಈದ್ಗಾ ಸಮೀಪ 28 ವರ್ಷದ ಇಮ್ರಾನ್ ಎಂಬ ಯುವಕ ಲಾರಿ ಅಡಿಗೆ ಸಿಲುಕಿ ಮೃತಪಟ್ಟಿದ್ದಾರೆ. ನಗರದಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಇಂತಹ ಅಪಘಾತಗಳಿಂದ ಸಾರ್ವಜನಿಕರು ಆತಂಕಗೊಂಡಿದ್ದು, ನಗರದೊಳಗೆ ಲಾರಿ ಹಾಗೂ ಇತರ ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಬೇಕು ಎಂದು ಒತ್ತಾಯಿಸಿದ್ದಾರೆ.

ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಕ್ಕೆ ಸಾರ್ವಜನಿಕರ ಆಗ್ರಹ

ಕಳೆದ ಮೂರು ತಿಂಗಳ ಅವಧಿಯಲ್ಲಿ ಬಳ್ಳಾರಿ ನಗರದಲ್ಲಿ 35 ರಸ್ತೆ ಅಪಘಾತಗಳು ಸಂಭವಿಸಿದ್ದು, ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ. ನಗರದೊಳಗೆ ಹೆಚ್ಚುತ್ತಿರುವ ಭಾರೀ ವಾಹನಗಳ ಸಂಚಾರದಿಂದ ದ್ವಿಚಕ್ರ ವಾಹನ ಸವಾರರು ಹೆಚ್ಚಿನ ಅಪಾಯ ಎದುರಿಸುತ್ತಿದ್ದಾರೆ ಎಂಬ ಆತಂಕವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಮೂರು ದಿನಗಳ ಅಂತರದಲ್ಲಿ ಇಬ್ಬರು ಯುವಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗಿದೆ. ಯಾವುದೇ ಕಾರಣಕ್ಕೂ ನಗರ ವ್ಯಾಪ್ತಿಯಲ್ಲಿ ಲಾರಿಗಳ ಅನಿಯಂತ್ರಿತ ಸಂಚಾರಕ್ಕೆ ಅವಕಾಶ ನೀಡಬಾರದು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಜಿಲ್ಲಾಧಿಕಾರಿ ಆದೇಶ ಉಲ್ಲಂಘನೆ ಆರೋಪ

ಬಳ್ಳಾರಿ ನಗರದೊಳಗೆ ಗಣಿಗಾರಿಕೆ ಲಾರಿಗಳ ಸಂಚಾರ ದಟ್ಟಣೆ ಹೆಚ್ಚಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಹಿಂದೆ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಲಾರಿ ಸೇರಿದಂತೆ ಭಾರೀ ಗಾತ್ರದ ವಾಹನಗಳು ನಗರದೊಳಗೆ ಸಂಚರಿಸದಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು ಎಂದು ತಿಳಿದುಬಂದಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಆದೇಶವನ್ನು ಉಲ್ಲಂಘಿಸಿ ಭಾರೀ ವಾಹನಗಳು ನಗರದಲ್ಲಿ ಸಂಚರಿಸುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಇದೀಗ ಮತ್ತೆ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ, ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ನಗರ ವ್ಯಾಪ್ತಿಯಲ್ಲಿ ಭಾರೀ ಗಾತ್ರದ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ ಎಂಬ ಆದೇಶವನ್ನು ಪುನರುಚ್ಚರಿಸಿದೆ.

LIVE TV

ಒಟ್ಟಿನಲ್ಲಿ, ಬಳ್ಳಾರಿ ನಗರದಲ್ಲಿ ಭಾರೀ ವಾಹನಗಳ ಸಂಚಾರದಿಂದ ರಸ್ತೆ ಅಪಘಾತಗಳು ಹೆಚ್ಚಾಗುತ್ತಿರುವ ಆರೋಪದ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಎಷ್ಟು ಕಟ್ಟುನಿಟ್ಟಾಗಿ ನಿಯಮ ಜಾರಿಗೊಳಿಸುತ್ತದೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:38 am, Wed, 4 November 26

Follow Us
ವಿನಾಯಕ ಬಡಿಗೇರ್​
ವಿನಾಯಕ ಬಡಿಗೇರ್​
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಇಂದು ಈ ರಾಶಿಯವರು ನಿರ್ಲಕ್ಷ್ಯತನವನ್ನು ತ್ಯಜಿಸಿದರೆ ಉತ್ತಮ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಹಿರಿಯೂರು ಉಪಚುನಾವಣೆ: ಕಾಂಗ್ರೆಸ್​​ ಅಭ್ಯರ್ಥಿಯ ಸುಳಿವು ನೀಡಿದ ಡಿಕೆಶಿ
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಛಲವಾದಿ ನಾರಾಯಣಸ್ವಾಮಿ ಮನೆಗೆ ಮುತ್ತಿಗೆ ಯತ್ನ; ಕೈ ಕಾರ್ಯಕರ್ತರು ವಶಕ್ಕೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಮುತ್ತುಸ್ವಾಮಿ ದೀಕ್ಷಿತರ್ 250ನೇ ಜಯಂತಿ ಪ್ರಯುಕ್ತ 250 ರೂ. ನಾಣ್ಯ ಬಿಡುಗಡೆ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ಪರೀಕ್ಷಾ ಅಕ್ರಮ ತಡೆಗೆ ಕೆಇಎಯಿಂದ ಹೊಸ ಮಾರ್ಗಸೂಚಿ ಪ್ರಕಟ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ವಿಜಯಲಕ್ಷ್ಮಿ ದರ್ಶನ್ ಸುತ್ತ ಗರಗರನೆ ತಿರುಗಿದ ಕರಿಕಲ್ಲಮ್ಮ ದೇವರ ಮೂರ್ತಿ
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಕಾಂಗ್ರೆಸ್​​​​ನ ಕತ್ತರಿಸಿ ಸಮುದ್ರಕ್ಕೆ ಎಸೆಯುತ್ತಾರೆ: ಛಲವಾದಿ ವಿವಾದ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ
ಹಾಸನಾಂಬೆ ದೇವಿಯ ದರ್ಶನ ಮಾಡಿದ ನಟಿ ಪ್ರೇಮಾ, ಕಾರುಣ್ಯಾ ರಾಮ್: ವಿಡಿಯೋ