AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ಗ್ಯಾಂಗ್​ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ

ಬಳ್ಳಾರಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಗ್ಯಾಂಗ್​ವೊಂದು ಓರ್ವ ವಿದ್ಯಾರ್ಥಿ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದೆ. ಬಳ್ಳಾರಿ ನಗರದ ರೆಡಿಯೋ ಪಾರ್ಕ್​ ಬಳಿಯ ಐಟಿಐ ಕಾಲೇಜು ಆವರಣದಲ್ಲಿ ಘಟನೆ ನಡೆದಿದೆ. ಹಲ್ಲೆ ಮಾಡಿದ 10 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಏನಿದು ಘಟನೆ? ಇಲ್ಲಿದೆ ವಿವರ.

ಬಳ್ಳಾರಿ: ಬಾಲಕಿಯ ಫೋಟೋ ಸ್ಟೇಟಸ್​ ಇಟ್ಟಿದ್ದಕ್ಕೆ ಗ್ಯಾಂಗ್​ನಿಂದ ವಿದ್ಯಾರ್ಥಿ ಮೇಲೆ ಹಲ್ಲೆ
ವಿದ್ಯಾರ್ಥಿ ಮೇಲೆ ಮನಸೋ ಇಚ್ಛೆ ಹಲ್ಲೆ
ವಿನಾಯಕ ಬಡಿಗೇರ್​
| Updated By: ವಿವೇಕ ಬಿರಾದಾರ|

Updated on:Aug 03, 2025 | 3:56 PM

Share

ಬಳ್ಳಾರಿ, ಆಗಸ್ಟ್​ 03: ಅಪ್ರಾಪ್ತ ಬಾಲಕಿಯ (Girl) ಫೋಟೋ ವಾಟ್ಸ್‌ಆಪ್ ಸ್ಟೇಟಸ್​ ಇಟ್ಟಿದ್ದಕ್ಕೆ ಯುವಕನ ಮೇಲೆ ಮನಸೋ ಇಚ್ಚೆ ಹಲ್ಲೆ ಮಾಡಿರುವ ಘಟನೆ ಬಳ್ಳಾರಿ (Ballari) ನಗರದ ರೆಡಿಯೋ ಪಾರ್ಕ್​ ಬಳಿಯ ಐಟಿಐ ಕಾಲೇಜು ಆವರಣದಲ್ಲಿ ನಡೆದಿದೆ. ದೊಡ್ಡಬಸವ (19) ಹಲ್ಲೆಗೊಳಗಾದ ಯುವಕ. ದೊಡ್ಟಬಸವ ಅಪ್ರಾಪ್ತ ಬಾಲಕಿಯ ಫೋಟೋವನ್ನು ತನ್ನ ವಾಟ್ಸ್‌ಆಪ್ ಸ್ಟೇಟ್‌ಸ್‌ಗೆ ಹಾಕಿಕೊಂಡಿದ್ದನು. ಆಗ, ಬಾಲಕಿಯ ಅಣ್ಣ ದೊಡ್ಡಬಸವನನ್ನು ಪ್ರಶ್ನೆ ಮಾಡಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ಸಿಟ್ಟು ಇಟ್ಟುಕೊಂಡಿದ್ದ ಬಾಲಕಿಯ ಅಣ್ಣ, ಜುಲೈ 27 ರಂದು ತನ್ನ ಸ್ನೇಹಿತರನ್ನ ಕರೆದುಕೊಂಡು ಬಂದು ಐಟಿಐ ಕಾಲೇಜು ಆವರಣದಲ್ಲಿ ದೊಡ್ಡಬಸವನಿಗೆ ಮನಸೋ ಇಚ್ಚೆ ಹೊಡೆಸಿದ್ದಾನೆ. ದೊಡ್ಡಬಸವನ ಮೇಲೆ ಹಲ್ಲೆ ಮಾಡುತ್ತಿರುವುದನ್ನು ಬಾಲಕಿಯ ಅಣ್ಣ ವಿಡಿಯೋ ಮಾಡಿಕೊಂಡಿದ್ದಾನೆ.

ದೊಡ್ಡಬಸವನ ತುಟಿ, ದವಡೆ, ಬೆನ್ನು, ಎದೆ, ಪಕ್ಕೆಲಬು ಹಾಗೂ ಸೊಂಟಕ್ಕೆ ತೀವ್ರವಾಗಿ ಹಲ್ಲೆ ಮಾಡಿದ್ದಾರೆ. ಕಾಲಿನಿಂದ ಒದ್ದು, ಕೈಗಳಿಂದ ಹಲ್ಲೆ ಮಾಡಿದ್ದಲ್ಲದೇ ಕ್ರಿಕೆಟ್ ಬ್ಯಾಟ್ ಹಾಗೂ ಬೆಲ್ಟ್​ನಿಂದ ಹೊಡೆದಿದ್ದಾರೆ. ಕಾಲು ಬೀಳುತ್ತೇನೆ, ಕೈ ಮುಗಿಯುತ್ತೇನೆ ಅಂದ್ರೂ ಬಿಡದೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಲ್ಲೆ ಮಾಡಿದ ಆರೋಪಿಗಳಾದ ಶಶಿಕುಮಾರ್, ಸಾಯಿಕುಮಾರ್ ಸೇರಿದಂತೆ 10 ಜನರ ವಿರುದ್ಧ ಕೌಲಬಜಾರ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆ ಮಾಡಿದ ಆರೋಪಿಗಳೆಲ್ಲರೂ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ಹಲ್ಲೆಗೊಳಗಾದ ದೊಡ್ಡಬಸವ ಕೂಡ ವಿದ್ಯಾರ್ಥಿಯಾಗಿದ್ದಾನೆ. ದೊಡ್ಡಬಸವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ತೆರಳಿದ್ದಾನೆ.

ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ.. ಪತಿ ಕಥೆ ಮುಗಿಸಿದ ಪತ್ನಿ, ಗಂಡನ ಶವದ ಮುಂದೆ ಕಣ್ಣೀರಿಟ್ಟಿದ್ದ ಮಳ್ಳಿ

ಒಟ್ಟಿನಲ್ಲಿ ಗಣಿನಾಡು ಬಳ್ಳಾರಿಯಲ್ಲಿ ನಡೆದ ಈ ವಿದ್ಯಾರ್ಥಿಗಳ ಕೃತ್ಯ ನಿಜಕ್ಕೂ ಭಯಾನಕವಾಗಿದೆ. ಓರ್ವ ವಿದ್ಯಾರ್ಥಿ ಮೇಲೆ ಈ ರೀತಿ ಮೃಗಗಳ ಹಾಗೆ ಎರಗಿದ್ದು ಸರಿಯಾದ ಬೆಳವಣಿಗೆ ಅಲ್ಲ. ಪ್ರತಿಯೊಬ್ಬ ವಿದ್ಯಾರ್ಥಿಯ ಪಾಲಕರು ಎಚ್ಚೆತ್ತುಕೊಳ್ಳಬೇಕು ತಮ್ಮ ಮಕ್ಕಳ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ ಹಿಂತವರು ಸಮಾಜಕ್ಕೆ ಮಾರಕವಾಗುವ ರೀತಿ ಬೆಳೆದು ನಿಲ್ಲುತ್ತಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Sun, 3 August 25