AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು

ಬಳ್ಳಾರಿಯ ಖಾಸಗಿ ಹಾಸ್ಟೆಲ್‌ನಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ರಾಡ್‌ನಿಂದ ದಾಳಿ ನಡೆಸಿ, ಓರ್ವ ವಿದ್ಯಾರ್ಥಿಯನ್ನು ಕೊಂದು, ವಾರ್ಡನ್‌ ಸೇರಿ 8 ಮಂದಿಯನ್ನು ಗಾಯಗೊಳಿಸಿದ್ದಾನೆ. ಆರೋಪಿತ ವಿದ್ಯಾರ್ಥಿ ಪರಾರಿಯಾಗಿದ್ದು, ಮೃತ ಬಾಲಕನ ಪೋಷಕರು ಶಾಲಾ ಆಡಳಿತ ಮಂಡಳಿಯ ನಿರ್ಲಕ್ಷ್ಯ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೆ ದಾಳಿ ನಡೆಸಿದ ವಿದ್ಯಾರ್ಥಿ ಮಾದಕ ವ್ಯಸನಕ್ಕೆ ದಾಸನಾಗಿದ್ದನಾ ಎಂಬ ಬಗ್ಗೆಯೂ ಅನುಮಾನ ವ್ಯಕ್ತಪಡಿಸಿದ್ದಾರೆ.

ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವರ ಮೇಲೆ ದಾಳಿ ನಡೆಸಿ ವಿದ್ಯಾರ್ಥಿ ಎಸ್ಕೇಪ್​​: ಗಾಯಗೊಂಡಿದ್ದ ಓರ್ವ ಬಾಲಕ ಸಾವು
ಮೃತ ಬಾಲಕImage Credit source: Tv9 Kannada
ವಿನಾಯಕ ಬಡಿಗೇರ್​
| Edited By: |

Updated on: Mar 08, 2026 | 9:01 AM

Share

ಬಳ್ಳಾರಿ, ಮಾರ್ಚ್​​ 08: ಶಿವಮೊಗ್ಗದಲ್ಲಿ ಬಾಲಕರೇ SSLC ವಿದ್ಯಾರ್ಥಿಯನ್ನು ದಾರುಣವಾಗಿ ಕೊಲೆ ಮಾಡಿರುವ ಘಟನೆ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆಯಲ್ಲಿ ಓರ್ವ ಬಾಲಕ ಮೃತಪಟ್ಟಿರುವ ಘಟನೆ ಬಳ್ಳಾರಿಯ ಖಾಸಗಿ ಶಾಲೆಗೆ ಸೇರಿದ ಹಾಸ್ಟೆಲ್​ನಲ್ಲಿ ನಡೆದಿದೆ. ಹಾಸ್ಟೆಲ್​​ನ ವಾರ್ಡನ್​​ ಸೇರಿ ಹಲವು ಬಾಲಕರ ಮೇಲೆ 9ನೇ ತರಗತಿ ವಿದ್ಯಾರ್ಥಿ ರಾಡ್​​ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಪ್ರಾಣಬಿಟ್ಟಿದ್ದರೆ, ಇತರ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹಲ್ಲೆ ನಡೆಸಿ ಬಾಲಕ ಪರಾರಿಯಾಗಿದ್ದು, ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಇನ್ನು ಘಟನೆಯಲ್ಲಿ ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ರಾಡ್​ನಿಂದ ಹೊಡೆದಿದ್ದಾನೆ ಎಂದು ಶಾಲಾ ಆಡಳಿತ ಮಂಡಳಿ ಹೇಳ್ತಿದೆ. ಆದರೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಅನುಮಾನ ಇದೆ. ಹಲ್ಲೆ ನಡೆಸಿರುವ ವಿದ್ಯಾರ್ಥಿ ಡ್ರಗ್​ ಅಡಿಕ್ಟ್ ಆಗಿರುವ ಶಂಕೆ ಇದ್ದು, ಇಷ್ಟೆಲ್ಲ ಹುಡುಗರ ಮೇಲೆ ಆತ ಒಬ್ಬನೇ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಇದಕ್ಕೆಲ್ಲಾ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಮೃತ ವಿದ್ಯಾರ್ಥಿ ಪೋಷಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಯ ಕೊಲೆ: ಅಸಲಿಗೆ ಅಲ್ಲಿ ನಡೆದಿದ್ದೇನು ಗೊತ್ತೇ? ಆಘಾತಕಾರಿ ಮಾಹಿತಿ ಬಯಲು

ಈ ಹಿಂದೆ ಹಾಸ್ಟೆಲ್​​ನಲ್ಲಿ ಈ ರೀತಿಯ ಯಾವುದೇ ಘಟನೆ ನಡೆದಿರಲಿಲ್ಲ. ಹಲ್ಲೆ ನಡೆದಿರೋದು ಕೇವಲ ಒಬ್ಬರ ಮೇಲಲ್ಲ. ಹಲವರ ಮೇಲೆ ಬಾಲಕ ಹಲ್ಲೆ ನಡೆಸಿದ್ದಾನೆ. ಹೀಗಾಗಿ ಆತನಿಗೆ ಏನಾದರೂ ಮಾನಸಿಕ ಸಮಸ್ಯೆಗಳಿತ್ತಾ? ಅಥವಾ ಅವನ್ನು ಮಾದಕ ವಸ್ತುಗಳಿಗೆ ಎಡಿಕ್ಟ್​​ ಆಗಿದ್ದನಾ ಎನ್ನುವ ಬಗ್ಗೆಯೂ ಪ್ರಶ್ನೆಗಳೆದ್ದಿವೆ. ಹಾಸ್ಟೆಲ್​​ ಆಡಳಿತ ಮಂಡಳಿ ನಂಬಿ ಮಕ್ಕಳನ್ನು ಬಿಟ್ಟಿದ್ದೇವೆ. ಆದರೆ ಅವರ ನಿರ್ಲಕ್ಷ್ಯದಿಂದಲೇ ಈ ಘಟನೆ ನಡೆದಿದೆ. ಅಸಲಿಗೆ ಬಾಲಕರ ನಡುವೆ ಏನಾಗಿದೆ ಎನ್ನುವುದೇ ಗೊತ್ತಿಲ್ಲ. ರಾತ್ರಿ ನಮಗೆ ದೂರವಾಣಿ ಕರೆ ಬಂದ ಹಿನ್ನೆಲೆ ಇಲ್ಲಿಗೆ ಬಂದು ನೋಡಿದಾಗ ಕೊಲೆ ನಡೆದಿರೋದು ಗೊತ್ತಾಗಿದೆ, ವಿದ್ಯಾರ್ಥಿ ಕೈಗೆ ಮಾರಕಾಸ್ತ್ರ ಸಿಕ್ಕಿದ್ದಾದರೂ ಹೇಗೆ ಎಂದು ಪೋಷಕರು ಪ್ರಶ್ನಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us