AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ

ಬಳ್ಳಾರಿಯಲ್ಲಿ ಅಕ್ರಮ ಯೂರಿಯಾ ಗೊಬ್ಬರ ಸಂಗ್ರಹದ ಮೇಲೆ ಕೃಷಿ ಇಲಾಖೆ ಮತ್ತು ಪೊಲೀಸರು ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಗೋಡೌನ್‌ನಿಂದ 4000ಕ್ಕೂ ಹೆಚ್ಚು ಚೀಲ ಯೂರಿಯಾ ವಶಪಡಿಸಿಕೊಳ್ಳಲಾಗಿದೆ. ರೈತರಿಗೆ ತಲುಪಬೇಕಾದ ಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲು ಸಂಗ್ರಹಿಸಲಾಗಿತ್ತು. ಮಾಲೀಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮುಂಗಾರು ಅವಧಿಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಹುನ್ನಾರ ಬಯಲಾಗಿದೆ.

ಬಳ್ಳಾರಿ: ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ
ಗೋಡೌನ್‌ನಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್; ಅಧಿಕಾರಿಗಳಿಂದ ದಾಳಿ
ವಿನಾಯಕ ಬಡಿಗೇರ್​
| Edited By: |

Updated on: Feb 07, 2026 | 8:44 AM

Share

ಬಳ್ಳಾರಿ, ಫೆಬ್ರುವರಿ 07: ನಗರ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಅಕ್ರಮವಾಗಿ ಯೂರಿಯಾ ಗೊಬ್ಬರ ಸಂಗ್ರಹಿಸಿದ್ದ (Illegal Fertilizer Hoarding ) ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರ ತಂಡ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸಿಕ್ಕ ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಚೀಲ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.

ಕಾಳ ಸಂತೆಯಲ್ಲಿ ಮಾರುವ ಪ್ಲಾನ್ ನಡೆದಿತ್ತಾ?

ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಎಡ್ವಿನ್ ಎಂಬವರ ಮಾಲೀಕತ್ವದ ಗೋಡೌನ್‌ನಲ್ಲಿ ರೈತರಿಗೆ ವಿತರಿಸಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಕಾಳ ಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಹುನ್ನಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಳಿ ವೇಳೆ ಗೋಡೌನ್ ಮಾಲೀಕನನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ ಬಳ್ಳಾರಿ: ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಮಾಂಸ ಪತ್ತೆ, ಭಾರೀ ಆಕ್ರೋಶ

ಪ್ರಸ್ತುತ ಟಿಬಿ ಡ್ಯಾಂ ಗೇಟ್ ರಿಪೇರಿ ಹಿನ್ನೆಲೆಯಲ್ಲಿ ಎರಡನೇ ಬೆಳೆಗೆ ನೀರಿನ ಕೊರತೆ ಇರುವುದರಿಂದ ಬಳ್ಳಾರಿಯಲ್ಲಿ ಯೂರಿಯಾ ಗೊಬ್ಬರಕ್ಕೆ ಬೇಡಿಕೆ ಕಡಿಮೆಯಾಗಿದೆ. ಈ ಸಂದರ್ಭದಲ್ಲೇ ಯೂರಿಯಾ ಸಂಗ್ರಹಿಸಿಡಲಾಗಿದೆ. ಜೂನ್ ತಿಂಗಳ ಮುಂಗಾರು ವೇಳೆ ಯೂರಿಯಾ ಗೊಬ್ಬರಕ್ಕೆ ಭಾರೀ ಬೇಡಿಕೆ ಉಂಟಾಗುವ ಸಾಧ್ಯತೆ ಇರುವುದರಿಂದ, ಈಗಿನಿಂದಲೇ ಅಕ್ರಮವಾಗಿ ಸ್ಟಾಕ್ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ