AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಔಷಧಿ ಮಾಫಿಯಾ ಆರೋಪ; ಸರ್ಕಾರಿ ಆಸ್ಪತ್ರೆಯಲ್ಲೇ ಬಡವರಿಗೆ ಸಾವಿರಾರು ರೂಪಾಯಿ ಹೊರೆ!

ಬಳ್ಳಾರಿಯ ವಿಮ್ಸ್ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧಿ ಮತ್ತು ಲ್ಯಾಬ್ ಸೌಲಭ್ಯಗಳಿದ್ದರೂ ರೋಗಿಗಳನ್ನು ಖಾಸಗಿ ಮೆಡಿಕಲ್ ಶಾಪ್ ಹಾಗೂ ಲ್ಯಾಬ್‌ಗಳಿಗೆ ಕಳುಹಿಸಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ವೈದ್ಯರು ಮತ್ತು ಸಿಬ್ಬಂದಿ ಖಾಸಗಿ ಸಂಸ್ಥೆಗಳೊಂದಿಗೆ ಕಮಿಷನ್ ವ್ಯವಹಾರ ನಡೆಸುತ್ತಿದ್ದಾರೆ ಎಂಬ ಶಂಕೆಯೂ ವ್ಯಕ್ತವಾಗಿದೆ. ಈ ಕುರಿತು ವಿಮ್ಸ್ ನಿರ್ದೇಶಕರು ಪ್ರತಿಕ್ರಿಯಿಸಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಔಷಧಿ ಮಾಫಿಯಾ ಆರೋಪ; ಸರ್ಕಾರಿ ಆಸ್ಪತ್ರೆಯಲ್ಲೇ ಬಡವರಿಗೆ ಸಾವಿರಾರು ರೂಪಾಯಿ ಹೊರೆ!
ವಿಮ್ಸ್
ವಿನಾಯಕ ಬಡಿಗೇರ್​
| Edited By: |

Updated on: Nov 20, 2026 | 8:13 AM

Share

ಮುಖ್ಯಾಂಶಗಳು

  • ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ಉಚಿತ ಔಷಧಿ ಸಿಗುತ್ತಿಲ್ಲವೆಂದು ರೋಗಿಗಳ ಸಂಬಂಧಿಕರ ಆರೋಪ
  • ಖಾಸಗಿ ಮೆಡಿಕಲ್ ಶಾಪ್, ಲ್ಯಾಬ್‌ಗಳಿಗೆ ರೋಗಿಗಳನ್ನು ಕಳುಹಿಸುತ್ತಿರುವ ಆರೋಪ
  • ಕಮಿಷನ್ ದಂಧೆ ಆರೋಪಗಳ ಬಗ್ಗೆ ತನಿಖೆ ನಡೆಸಲು ಸಾರ್ವಜನಿಕರ ಆಗ್ರಹ

ಬಳ್ಳಾರಿ, ನವೆಂಬರ್ 20: ಸರ್ಕಾರಿ ಆಸ್ಪತ್ರೆ ಎಂದರೆ ಬಡ ರೋಗಿಗಳಿಗೆ ಸಂಜೀವಿನಿ ಎಂಬ ನಂಬಿಕೆ ಇದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಸರ್ಕಾರಿ ಆಸ್ಪತ್ರೆಯಾಗಿರುವ ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ಇದೀಗ ಗಂಭೀರ ಆರೋಪಗಳಿಂದ ಸುದ್ದಿಯಾಗಿದೆ. ಆಸ್ಪತ್ರೆಯಲ್ಲಿ ಉಚಿತವಾಗಿ ದೊರೆಯಬೇಕಾದ ಔಷಧಿಗಳಿದ್ದರೂ ವೈದ್ಯರು ಹೊರಗಿನ ಮೆಡಿಕಲ್ ಶಾಪ್‌ಗಳಿಗೆ ಚೀಟಿ ಬರೆದುಕೊಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಆಸ್ಪತ್ರೆಯಲ್ಲೇ ಲ್ಯಾಬ್ ಸೌಲಭ್ಯವಿದ್ದರೂ ರಕ್ತ ಪರೀಕ್ಷೆ ಸೇರಿದಂತೆ ವಿವಿಧ ಪರೀಕ್ಷೆಗಳಿಗೆ ಖಾಸಗಿ ಲ್ಯಾಬ್‌ಗಳಿಗೆ ಕಳುಹಿಸಲಾಗುತ್ತಿದೆ ಎನ್ನಲಾಗಿದೆ. ಇದರಿಂದ ಬಡ ರೋಗಿಗಳು ಸಾವಿರಾರು ರೂಪಾಯಿ ಖರ್ಚು ಮಾಡುವಂತಾಗಿದೆ.

ವಿಮ್ಸ್‌ನಲ್ಲಿ ಔಷಧಿಗಳಿದ್ದರೂ ಹೊರಗಿನ ಮೆಡಿಕಲ್‌ಗಳಿಗೆ ಚೀಟಿ!

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯನ್ನು ಕಲ್ಯಾಣ ಕರ್ನಾಟಕದ ಜಿಲ್ಲೆಗಳಷ್ಟೇ ಅಲ್ಲದೆ ಆಂಧ್ರಪ್ರದೇಶ ಮತ್ತು ತೆಲಂಗಾಣದ ಕೆಲವು ಭಾಗಗಳ ರೋಗಿಗಳೂ ಅವಲಂಬಿಸಿದ್ದಾರೆ. ಪ್ರತಿನಿತ್ಯ ಸಾವಿರಾರು ರೋಗಿಗಳು ಇಲ್ಲಿ ಚಿಕಿತ್ಸೆಗಾಗಿ ಬರುತ್ತಾರೆ. ಆದರೆ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸಾಮಾನ್ಯ ಜ್ವರ, ನೆಗಡಿಯ ಮಾತ್ರೆಗಳಿಂದ ಹಿಡಿದು ದುಬಾರಿ ಔಷಧಿಗಳವರೆಗೆ ಹೊರಗಿನ ಮೆಡಿಕಲ್ ಶಾಪ್‌ಗಳಿಂದ ಖರೀದಿಸುವಂತೆ ವೈದ್ಯರು ಚೀಟಿ ಬರೆದುಕೊಡುತ್ತಿದ್ದಾರೆ ಎನ್ನಲಾಗಿದೆ. ಆಸ್ಪತ್ರೆಯ ಔಷಧಿ ಸಂಗ್ರಹದಲ್ಲಿ ಸಾಕಷ್ಟು ದಾಸ್ತಾನು ಇದ್ದರೂ ಹೊರಗಿನಿಂದ ಔಷಧಿ ಖರೀದಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ರೋಗಿಗಳ ಸಂಬಂಧಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖಾಸಗಿ ಲ್ಯಾಬ್‌ಗಳ ಜೊತೆ ಕಮಿಷನ್ ವ್ಯವಹಾರದ ಆರೋಪ!

ಔಷಧಿಗಳಷ್ಟೇ ಅಲ್ಲದೆ ರಕ್ತ ಪರೀಕ್ಷೆ, ಸ್ಕ್ಯಾನಿಂಗ್ ಸೇರಿದಂತೆ ವಿವಿಧ ಪರೀಕ್ಷೆಗಳಿಗೂ ರೋಗಿಗಳನ್ನು ಖಾಸಗಿ ಲ್ಯಾಬೋರೇಟರಿಗಳಿಗೆ ಕಳುಹಿಸಲಾಗುತ್ತಿದೆ ಎಂಬ ಆರೋಪವಿದೆ. ಆಸ್ಪತ್ರೆಯಲ್ಲೇ ಪರೀಕ್ಷಾ ಸೌಲಭ್ಯವಿದ್ದರೂ ಹೊರಗಿನ ಲ್ಯಾಬ್‌ಗಳಿಗೆ ಕಳುಹಿಸುತ್ತಿರುವುದರ ಹಿಂದೆ ಕಮಿಷನ್ ವ್ಯವಹಾರ ನಡೆಯುತ್ತಿದೆ ಎಂದು ರೋಗಿಗಳ ಸಂಬಂಧಿಕರು ಶಂಕೆ ವ್ಯಕ್ತಪಡಿಸಿದ್ದಾರೆ. ಆಸ್ಪತ್ರೆಯ ಕೆಲವು ಸಿಬ್ಬಂದಿಯೇ ಹೊರಭಾಗದಲ್ಲಿ ಖಾಸಗಿ ಲ್ಯಾಬ್‌ಗಳನ್ನು ಹೊಂದಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಮ್ಸ್ ನಿರ್ದೇಶಕ ಡಾ. ಮರಿರಾಜ್, ಹೊರಗಡೆ ಔಷಧಿ ಚೀಟಿ ಬರೆದುಕೊಡುವ ವೈದ್ಯರ ಮಾಹಿತಿ ನೀಡಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕ್ರಮಕ್ಕೆ ಆಗ್ರಹಿಸಿದ ರೋಗಿಗಳ ಸಂಬಂಧಿಕರು

ಸರ್ಕಾರ ಬಡ ರೋಗಿಗಳಿಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಔಷಧಿ ಮತ್ತು ಪ್ರಯೋಗಾಲಯ ಸೌಲಭ್ಯ ಕಲ್ಪಿಸಿದೆ. ಆದರೂ ಖಾಸಗಿ ಮೆಡಿಕಲ್ ಹಾಗೂ ಲ್ಯಾಬ್‌ಗಳ ಮೊರೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ವಿಮ್ಸ್ ಆಡಳಿತ ಮಂಡಳಿ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತದೆಯೇ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಾಯಕ ಬಡಿಗೇರ್​
ವಿನಾಯಕ ಬಡಿಗೇರ್​
ಇಂದು ಪ್ರಬೋಧಿನಿ ಏಕಾದಶಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಪ್ರಬೋಧಿನಿ ಏಕಾದಶಿ: ಮೇಷಾದಿ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ
ಬಸವ ಮಂಟಪʼ ಕೃತಿ ಮುಟ್ಟುಗೋಲಿಗೆ ಸಚಿವ ಸಂಪುಟ ಸಮ್ಮತಿ
‘ಮಹಾರಾಣಿ ಆಗಬಾರದು’ ಮಂಜಿಗೆ ನೇರವಾಗಿ ಹೇಳಿದ ಮಂಜ: ವಿಡಿಯೋ
‘ಮಹಾರಾಣಿ ಆಗಬಾರದು’ ಮಂಜಿಗೆ ನೇರವಾಗಿ ಹೇಳಿದ ಮಂಜ: ವಿಡಿಯೋ
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಶಿಕ್ಷಕರು ಬೈದಿದ್ದಕ್ಕೆ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಪರಾರಿ
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಸುಳ್ಳಿನಿಂದ ಕಲುಷಿತಗೊಂಡಿದ್ದ ಭೀಮಾನದಿ ಕ್ಲೀನ್ ಮಾಡಿದ ಪೌರ ಕಾರ್ಮಿಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಶೈನ್ ಶೆಟ್ಟಿ ಅಭಿನಯದ ‘ಶಂಕರಾಭರಣ’ ಸಿನಿಮಾ ನೋಡಿ ಮೆಚ್ಚಿದ ಪ್ರೇಕ್ಷಕರು
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಹಸಿದು ಕಂಗಾಲಾಗಿದ್ದ ಸ್ಪರ್ಧಿಗಳಿಗೆ ಕಿಚ್ಚನಿಂದ ಬಂತು ಬಿರಿಯಾನಿ: ವಿಡಿಯೋ
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಸಿಸಿಬಿ ಇನ್ಮುಂದೆ 'ಆ್ಯಂಟಿ ರೌಡಿ ಸ್ಕ್ವಾಡ್'
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
ಮೂರನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಪ್ರತಿಭಟನೆ, ಇಬ್ಬರು ಅಸ್ವಸ್ಥ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ
'ನಮ್ಮ ಹಳೇ ಬಾಸ್​​ ಕುಮಾರಸ್ವಾಮಿ ಭಸ್ಮಾಸುರನಂತೆ': ಹೆಚ್​​.ಸಿ. ಬಾಲಕೃಷ್ಣ