ಬಳ್ಳಾರಿ ಗಲಭೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್

ಬಳ್ಳಾರಿಯಲ್ಲಿ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ಸಂಬಂಧ ಶಾಸಕ ಭರತ್ ರೆಡ್ಡಿ ಹಾಗೂ ಅವರ ಆಪ್ತರು ಸೇರಿ ಹಲವರ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ದೂರಿನ ಮೇರೆಗೆ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ತನಿಖೆ ನಡೆಯುತ್ತಿದೆ. ಘಟನೆಯಿಂದ ವಾಲ್ಮೀಕಿ ಪುತ್ಥಳಿ ಅನಾವರಣ ಮುಂದೂಡಲಾಗಿದೆ. ಬಿಜೆಪಿ ಹೈಕಮಾಂಡ್ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ.

ಬಳ್ಳಾರಿ ಗಲಭೆ: ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್
ಸಾಂದರ್ಭಿಕ ಚಿತ್ರ
Edited By:

Updated on: Jan 03, 2026 | 7:37 AM

ಬಳ್ಳಾರಿ, ಜ.3: ಬಳ್ಳಾರಿ (Ballari) ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರ ಸಂಬಂಧಿಸಿದಂತೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ಎಫ್​​​ಐಆರ್​​ ದಾಖಲು ಮಾಡಲಾಗಿದೆ. ಬಳ್ಳಾರಿಯ ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್​​​ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ, ಚಾನಾಳ್ ಶೇಖರ್​​, ನಾರಾ ಪ್ರತಾಪ್ ರೆಡ್ಡಿ, ನಾರಾ ಸೂರ್ಯನಾರಾಯಣರೆಡ್ಡಿ ಸೇರಿ ಹಲವರ ಹೆಸರನ್ನು ಎಫ್​​​ಐಆರ್​​ನಲ್ಲಿ ಉಲ್ಲೇಖಿಸಲಾಗಿದೆ. ಶಾಸಕ ಜನಾರ್ದನರೆಡ್ಡಿ, ಬಿಜೆಪಿ ಕಾರ್ಯಕರ್ತ ನಾಗರಾಜ್ ನೀಡಿದ್ದ ದೂರಿನ ಆಧಾರದ ಮೇಲೆ ಎಫ್​​​ಐಆರ್​​ ದಾಖಲು ಮಾಡಲಾಗಿದೆ.

ನೆನ್ನೆ ಸಂಜೆ ಶಾಸಕ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ ದೂರು ನೀಡಲಾಗಿತ್ತು. ಶಾಸಕ ಜನಾರ್ದನರೆಡ್ಡಿ ಹಲ್ಲೆ, ಕೊಲೆ ಯತ್ನ ಆರೋಪದಡಿ ದೂರು ನೀಡಿದರು. ಮತ್ತೊಂದಡೆ ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪದಡಿ ಬಿಜೆಪಿ ಕಾರ್ಯಕರ್ತ ನಾಗರಾಜ್ ಕೂಡ ನೀಡಿದರು. ಇನ್ನು ಈ ದೂರು ನೀಡುವಾಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕೂಡ ಇದ್ದರು. ಎಎಸ್​​​ಪಿ ರವಿಕುಮಾರ್ ದೂರ ಸ್ವೀಕರಿಸಿದ್ದು, ಎಫ್​​​ಐಆರ್​​ ದಾಖಲು ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬಳ್ಳಾರಿ ಗಲಭೆಗೆ ಎಸ್ಪಿ ತಲೆದಂಡ: ಅಧಿಕಾರ ಸ್ವೀಕರಿಸಿದ ಒಂದೇ ದಿನಕ್ಕೆ ಪವನ್ ನೆಜ್ಜೂರು ಸಸ್ಪೆಂಡ್!

ಇನ್ನು ಈ ಗಲಾಟೆಯಿಂದ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮ ಮುಂದೂಡಿಕೆ ಆಗಿದೆ. ಇಂದು ನಡೆಯಬೇಕಿದ್ದ ಕಾರ್ಯಕ್ರಮವನ್ನು ಶಾಂತಿ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ. ಇನ್ನು ಇದರ ಜತೆಗೆ ಬಿಜೆಪಿ ನಾಯಕರಿಗೆ ಹೈಕಮಾಂಡ್​​​ನಿಂದ ಮಹತ್ವದ ಸೂಚನೆಯನ್ನು ಕೂಡ ನೀಡಲಾಗಿದೆ. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸುವಂತೆ ಹೇಳಿದ್ದಾರೆ. ಇಂದು ಬಳ್ಳಾರಿಗೆ ಬಿಜೆಪಿ ನಾಯಕರ ನಿಯೋಗ ಭೇಟಿ ಸಾಧ್ಯತೆ ಎಂದು ಹೇಳಲಾಗಿದೆ.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:35 am, Sat, 3 January 26