AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ

ಬಳ್ಳಾರಿಯಲ್ಲಿ ಡಿಸೆಂಬರ್‌ನಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬುಕ್ಕರ್ ಪ್ರಶಸ್ತಿಗೆ ಭಾಜನರಾಗಿದ್ದ ಬಾನು ಮುಷ್ತಾಕ್ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿಯು ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಂಡಿದೆ. ಬಾನು ಮುಷ್ತಾಕ್ ಅವರು ಈ ಆಯ್ಕೆಯನ್ನು ಸಂತೋಷದಿಂದ ಒಪ್ಪಿಕೊಂಡಿದ್ದಾರೆ. ಸಮ್ಮೇಳನದಲ್ಲಿ 'ಎದೆಯ ಹಣತೆ' ಕೃತಿ ಅನುವಾದ ಮಾಡಿದ ದೀಪಾ ಬಾಸ್ತಿ ಅವರನ್ನೂ ಗೌರವಿಸಲಾಗುವುದು.

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಆಯ್ಕೆ
ಲೇಖಕಿ ಬಾನು ಮುಷ್ತಾಕ್
ವಿನಾಯಕ ಬಡಿಗೇರ್​
| Edited By: |

Updated on:Jun 29, 2025 | 9:29 PM

Share

ಬಳ್ಳಾರಿ, ಜೂನ್​ 29: ಡಿಸೆಂಬರ್​ನಲ್ಲಿ ಬಳ್ಳಾರಿಯಲ್ಲಿ ನಡೆಯುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Kannada Sahitya Sammelana) ಸರ್ವಾಧ್ಯಕ್ಷರಾಗಿ ಬೂಕರ್​ ಪ್ರಶಸ್ತಿಗೆ (Booker Award) ಭಾಜನರಾಗಿದ್ದ ಬಾನು ಮುಷ್ತಾಕ್ (Banu Mushtaq)​ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್​ನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಎಲ್ಲ ಪದಾಧಿಕಾರಿಗಳ ಸರ್ವಾನುಮತದಿಂದ ಬಾನು ಮುಷ್ತಾಕ್ ಹೆಸರನ್ನು ಅಂತಿಮಗೊಳಿಸಲಾಗಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್​ನ ಅಧ್ಯಕ್ಷ ಮಹೇಶ್ ಜೋಶಿ, ಕನ್ನಡ ನಾಡು, ನುಡಿಯ ಹಿರಿಮೆಯನ್ನು ವಿಶ್ವಮಟ್ಟದಲ್ಲಿ ಎತ್ತಿ ಹಿಡಿದು, ಕನ್ನಡ ಭಾಷೆಯ ಸಾಮರ್ಥ್ಯ ಹಾಗೂ ಶಕ್ತಿಯನ್ನು ಜಗತ್ತಿಗೆ ತೋರಿಸಿದ, ಪ್ರತಿಷ್ಠಿತ ಬೂಕರ್​ ಪ್ರಶಸ್ತಿಗೆ ಹೊಸ ಅರ್ಥ ತಂದವರು ಬಾನು ಮುಷ್ತಾಕ್​ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಸಾಹಿತ್ಯ ಸಮ್ಮೇಳನಕ್ಕೆ ಈಗ ಕೋಟಿ ಕೋಟಿ ಹಂಚಿಕೆ; 1945ರಲ್ಲಿ ಮದರಾಸಿನಲ್ಲಿ ನಡೆದ 29ನೇ ಕನ್ನಡ ಸಾಹಿತ್ಯ ಸಮ್ಮೇಳನ ಖರ್ಚು ಎಷ್ಟು ಗೊತ್ತಾ?

ಇದನ್ನೂ ಓದಿ
Image
ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್
Image
ಪ್ರತಿಷ್ಠಿತ ಬೂಕರ್​​ ಪ್ರಶಸ್ತಿ ಮುಡಿಗೇರಿಸಿಕೊಂಡ ಸಾಹಿತಿ ಬಾನು ಮುಷ್ತಾಕ್
Image
ಬೂಕರ್ ಅವಾರ್ಡ್ ಪಟ್ಟಿಯಲ್ಲಿ ಕನ್ನಡ ಲೇಖಕಿ ಬಾನು ಮುಷ್ತಾಕ್ ಕೃತಿ
Image
ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

ಇದರೊಂದಿಗೆ ಎದೆಯ ಹಣತೆ ಕೃತಿಯನ್ನು ಅನುವಾದ ಮಾಡಿದ ದೀಪಾ ಬಾಸ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಗುತ್ತದೆ ಎಂದರು.

ಸಾಹಿತ್ಯ ಪರಿಷತ್​ನ ಕಾರ್ಯಕಾರಿ ಸಮಿತಿಯು ಲೇಖಕಿ ಬಾನು ಮುಷ್ತಾಕ್​ ಅವರನ್ನು ಸರ್ವಾನುಮತದಿಂದ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಿದೆ. ಈ ಆಯ್ಕೆಯನ್ನು ಸಾಹಿತಿ ಬಾನು ಮುಷ್ತಾಕ್ ಅವರು ಅತ್ಯಂತ ಸಂತೋಷದಿಂದ ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:11 pm, Sun, 29 June 25

ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ