ಕಣ್ಣಿಗೆ ಖಾರದಪುಡಿ ಎರಚಿ ಕೊಲೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬಳ್ಳಾರಿ ಕೋರ್ಟ್

| Updated By: Rakesh Nayak Manchi

Updated on: Jul 22, 2023 | 6:35 PM

ಬಳ್ಳಾರಿಯಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಕೊಲೆ ಪ್ರಕರಣ ಸಂಬಂಧ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಕಣ್ಣಿಗೆ ಖಾರದಪುಡಿ ಎರಚಿ ಕೊಲೆ ಪ್ರಕರಣ: ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಬಳ್ಳಾರಿ ಕೋರ್ಟ್
ಬಳ್ಳಾರಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ (ಸಾಂದರ್ಭಿಕ ಚಿತ್ರ)
Follow us on

ಬಳ್ಳಾರಿ, ಜುಲೈ 22: ವ್ಯಕ್ತಿಯೊಬ್ಬರನ್ನು ಹತ್ಯೆ (Murder) ಮಾಡಿದ್ದ ಪ್ರಕರಣ ಸಂಬಂಧ ಇಬ್ಬರು ಅಪರಾಧಿಗಳಿಗೆ ನಗರದ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. 2020 ರ ಜೂನ್ 16 ರಂದು ಬೈಕ್‌ನಲ್ಲಿ ತೆರಳುತ್ತಿದ್ದ ವಿರೂಪಾಕ್ಷಗೌಡ ಎಂಬವರನ್ನು ಬಂಡ್ರಾಳ್ ಗ್ರಾಮದಲ್ಲಿ ತಡೆದು ಕಣ್ಣಿಗೆ ಕಾರಪುಡಿ ಎರಚಿ ಕೊಲೆ ಮಾಡಲಾಗಿತ್ತು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸಿರುಗುಪ್ಪ ಠಾಣಾ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿದ ನಂತರ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ ವರದಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ 2ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ವಿದ್ಯಾಧರ ಶಿರಹಟ್ಟಿ ಅವರು ವಾದ ಆಲಿಸಿ, ಇಬ್ಬರು ಆರೋಪಿಗಳಿಗೆ 1 ತಿಂಗಳ ಸಾದಾ ಸಜೆ ಮತ್ತು 500 ರೂಪಾಯಿ ದಂಡ ಹಾಗೂ ಐಪಿಸಿ 302 ಅಡಿ ಕಠಿಣ ಜೀವಾವಧಿ ಸಜೆ ಮತ್ತು 25 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಗದಗ: ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪ ಸಾಬೀತು, ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಮೃತನ ಮಕ್ಕಳಿಗೆ ಹಾಗೂ ಪತ್ನಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ರೂಪದಲ್ಲಿ ಕೊಡಬೇಕು. ತಪ್ಪಿದಲ್ಲಿ ಐಪಿಸಿ 431 ಅನ್ವಯ ಇಬ್ಬರು ಆರೋಪಿಗಳ ಆಸ್ತಿಯಿಂದ ವಸೂಲಿ ಮಾಡಬಹುದು ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಮೃತನ ಪತ್ನಿ ಮತ್ತು ಮಕ್ಕಳು ಸರಕಾರದ ಯೋಜನೆಯಡಿ ಸಂಬಂಧಪಟ್ಟ ಪ್ರಾಧಿಕಾರದಿಂದ ಪರಿಹಾರ ಪಡೆಯಬಹುದು ಎಂದು ಆದೇಶಿಸಲಾಗಿದೆ. ಸರಕಾರದ ಪರವಾಗಿ ಸರಕಾರದ ಅಭಿಯೋಜಕಿ ಲಕ್ಷ್ಮಿದೇವಿ ಪಾಟೀಲ್ ಅವರು ಸಾಕ್ಷಿ ವಿಚಾರಣೆ ಮಾಡಿ ವಾದ ಮಂಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ