AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: ರಸ್ತೆ ವಿಸ್ತರಣೆಗೆ ಬಲಿಯಾಗಲಿವೆ 425 ಬೃಹತ್ ಮರಗಳು; ಸ್ಥಳಾಂತರ ಮಾಡುವಂತೆ ಪರಿಸರ ಪ್ರೇಮಿಗಳ ಪಟ್ಟು

ಕಾಡು ಬೆಳಿಸಿ ನಾಡು ಉಳಿಸಿ, ಮನೆಗೊಂದು ಮರ ಊರಿಗೊಂದು ವನ, ಗಿಡ ಮರಗಳನ್ನ ಬೆಳಿಸಿ ಪರಿಸರ ಕಾಪಾಡಿ. ಹೀಗಂತ ಅರಣ್ಯ ಇಲಾಖೆ, ಸರ್ಕಾರ ಘೋಷಣೆಗಳನ್ನ ಮಾಡುತ್ತೆ. ಆದ್ರೆ, ಅದೇ ಸರ್ಕಾರ, ಅದೇ ಅರಣ್ಯ ಇಲಾಖೆ ಇದೀಗ ಬೃಹತ್ತಾಗಿ ಬೆಳೆದಿರುವ ನೂರಾರು ಮರಗಳ ಮಾರಣ ಹೋಮ ಮಾಡಲು ರೆಡಿಯಾಗಿದೆ.

ಬಳ್ಳಾರಿ: ರಸ್ತೆ ವಿಸ್ತರಣೆಗೆ ಬಲಿಯಾಗಲಿವೆ 425 ಬೃಹತ್ ಮರಗಳು; ಸ್ಥಳಾಂತರ ಮಾಡುವಂತೆ ಪರಿಸರ ಪ್ರೇಮಿಗಳ ಪಟ್ಟು
ಪರಿಸರವಾದಿಗಳು
ಕಿರಣ್ ಹನುಮಂತ್​ ಮಾದಾರ್
|

Updated on: May 21, 2023 | 1:00 PM

Share

ಬಳ್ಳಾರಿ: ಗಣಿ ನಾಡು ಬಳ್ಳಾರಿ(Ballari)ಯಲ್ಲಿ ಗಣಿಗಾರಿಕೆಗಾಗಿ ಪರಿಸರ ಹಾಳು ಮಾಡಿದ್ದಾಯ್ತು, ಅದಿರು ಹೊರತಗೆಯಲು ಲಕ್ಷಾಂತರ ಮರಗಳನ್ನ ಕಡಿಯಲಾಯ್ತು. ಇದೀಗ ರಸ್ತೆ ವಿಸ್ತರಣೆ ಹೆಸರಿನಲ್ಲಿ ಮತ್ತೆ ಮರಗಳ ಮಾರಣಹೋಮ ನಡೆಸಲು ಸರ್ಕಾರ ಸಜ್ಜಾಗಿದೆ ನೋಡಿ. ಇವು ಒಂದಲ್ಲ ಎರಡಲ್ಲ ಹತ್ತಾರು ವರ್ಷಗಳ ಕಾಲ ಹಳೆಯದಾದ ಮರಗಳು. ಬೃಹತ್ತಾಗಿ ಬೆಳೆದ ಈ ಮರಗಳು ಬಿಸಿಲ ನಾಡಿನ ಜನರ ಆಸರೆಯಾಗಿವೆ. ಬಿರು ಬಿಸಿಲಿನ ನಾಡಲ್ಲಿ ನೆರಳಿಗೆ ಛಾವಡಿಯಂತಿದ್ದ ಈ ಮರಗಳು ಇದೀಗ ನೆಲಕ್ಕುರಳಲು ರೆಡಿಯಾಗಿವೆ. ಹೌದು ರಸ್ತೆ ವಿಸ್ತರಣೆ ನೆಪದಲ್ಲಿ 425 ಮರಗಳನ್ನ ಕಡಿಯಲು ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿರುವುದು ಪರಿಸರ ಪ್ರೇಮಿಗಳ ಕೆಂಗಣ್ಣಿಗೆ ಗುರಿಯಾಗಿದೆ. ನಗರದ ಟಿಬಿ ಸ್ಯಾನಿಟೋರಿಯಂ ಆಸ್ಪತ್ರೆಯಿಂದ ಕುವೆಂಪು ನಗರದ ಮುಖ್ಯರಸ್ತೆಯ ಮೂಲಕ ಹೊಸಪೇಟೆಯ ರಸ್ತೆಯ ಇಕ್ಕೇಲುಗಳಲ್ಲಿ ಬೆಳೆದಿರುವ 425 ಮರಗಳನ್ನ ತೆರವುಗೊಳಿಸಲು ಅರಣ್ಯ ಇಲಾಖೆ ಇದೀಗ ಮುಂದಾಗಿದೆ.

ಬಿಸಿಲ ನಾಡು ಬಳ್ಳಾರಿಯಲ್ಲಿ ಮರಗಳೇ ಅಪರೂಪ. ಅದ್ರಲ್ಲೂ ಇದೀಗ ರಸ್ತೆ ಅಭಿವೃದ್ದಿಗಾಗಿ ಮರಗಳನ್ನ ಕಡಿಯಲು ಅರಣ್ಯ ಇಲಾಖೆ ಪ್ರಕಟಣೆ ಹೊರಡಿಸಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೇ ರಸ್ತೆ ವಿಸ್ತರಣೆಗೆ ತೆರವುಗೊಳಿಸುತ್ತಿರುವ ಮರಗಳನ್ನ ಬೇರೆಡೆ ಸ್ಥಳಾಂತರ ಮಾಡದೇ ಏಕಾಏಕಿ ಕಡಿದು ಹಾಕಲು ಮುಂದಾಗಿರುವುದು ನಿಜಕ್ಕೂ ಸ್ಥಳೀಯರ ಆಕ್ರೋಶಕ್ಕೆ ಗುರಿಯಾಗಿದೆ. ಪರಿಸರ ದಿನಾಚರಣೆ, ವಿಶ್ವ ಪರಿಸರ ದಿನಾಚರಣೆ ವೇಳೆ ಮನೆಗೊಂದು ಮರ, ಊರಿಗೊಂದು ವನ ಎಂದು ಅರಣ್ಯ ಇಲಾಖೆಯೇ ಪ್ರಚಾರ ಮಾಡಿ ಇದೀಗ ಬೃಹತ್ತಾಗಿ ಬೆಳೆದು ನಿಂತಿರುವ ಮರಗಳನ್ನ ಸ್ವತ: ಅರಣ್ಯ ಇಲಾಖೆಯೇ ಕಡಿದು ಹಾಕಲು ಮುಂದಾಗಿರುವುದು ಹೋರಾಟಗಾರರು ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:ಪರಿಸರ ವ್ಯವಸ್ಥೆಗೆ ಹಾನಿ ಮಾಡುತ್ತಿವೆ ಸರೋವರಗಳಿಗೆ ಎಸೆಯುತ್ತಿರುವ ಗೋಲ್ಡ್​ ಫಿಶ್​

ಈಗಾಗಲೇ ಹಲವಾರು ಸಂಘಟನೆಗಳು. ಪರಿಸರ ಪ್ರೇಮಿಗಳು ಮರ ಕಡಿಯಲು ಆಕ್ಷೇಪಣೆ ಸಲ್ಲಿಸಿದ್ದು. ಮರಗಳನ್ನ ಬೇರೆಡೆ ಸ್ಥಳಾಂತರ ಮಾಡದೇ ಕಡಿದು ಹಾಕಿದ್ರೆ, ಕಾನೂನು ಹೋರಾಟ ಮಾಡಲಾಗುವುದೆಂದು ಪರಿಸರ ಪ್ರೇಮಿಗಳು ಎಚ್ಚರಿಕೆ ನೀಡುತ್ತಿದ್ದಾರೆ. ಬೇಸಿಗೆ ಕಾಲದಲ್ಲಿ ಬಿಸಿಲ ನಾಡು ಬಳ್ಳಾರಿಯಲ್ಲಿ ನೆರಳು ಸಿಗೋದು ಅಪರೂಪ. ಅತಂಹದರಲ್ಲಿ ನೆರಳಿನ ಚಾವಡಿಯಾಗಿರುವ ಮರಗಳನ್ನ ಕಡಿಯಲು ಮುಂದಾಗಿರುವುದು ಇದೀಗ ಪರಿಸರ ಪ್ರೇಮಿಗಳ ಕೆಂಗೆಣ್ಣಿಗೆ ಗುರಿಯಾಗಿದೆ. ಹೀಗಾಗಿ ಇರುವ ಅಲ್ಪಸ್ವಲ್ಪ ಮರಗಳನ್ನಾದ್ರು ಉಳಿಸಿ ಎಂದು ಸ್ಥಳೀಯರು ಹೋರಾಟಕ್ಕೆ ಇಳಿದಿದ್ದಾರೆ. ಆದ್ರೆ, ಅರಣ್ಯ ಇಲಾಖೆ ಮಾತ್ರ ತಾವೇ ಬೆಳಿಸಿದ ಮರಗಳನ್ನ ಕಡಿದು ರಸ್ತೆ ಅಭಿವೃದ್ದಿಗೆ ಮುಂದಾಗಿರುವುದು ನಿಜಕ್ಕೂ ದುರಂತಮಯವಾಗಿದೆ.

ವರದಿ: ವಿರೇಶ್​ ದಾನಿ ಟಿವಿ9 ಬಳ್ಳಾರಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!