AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಬ್ಯಾನರ್​​ ಗಲಾಟೆಗೆ ಸ್ಫೋಟಕ ತಿರುವು​​: ರಾಜಶೇಖರ್​​ಗೆ ತಗುಲಿದ್ದ ಬುಲೆಟ್​​ ಸತ್ಯ ರಿವೀಲ್​​

ಬಳ್ಳಾರಿಯ ಬ್ಯಾನರ್ ಗಲಾಟೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಸಾವಿಗೆ ಕಾರಣವಾದ ಬುಲೆಟ್ ಕುರಿತು ಸ್ಫೋಟಕ ಮಾಹಿತಿ ಬಯಲಾಗಿದೆ. ಶಾಸಕ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಗನ್‌ಮ್ಯಾನ್ ಹಾರಿಸಿದ್ದ 12 ಎಂಎಂ ಬುಲೆಟ್‌ ರಾಜಶೇಖರ್‌ಗೆ ತಗುಲಿರುವುದು ದೃಢಪಟ್ಟಿದೆ. ಪ್ರಕರಣ ಸಂಬಂಧ ಪೊಲೀಸರು 5 ಬಂದೂಕುಗಳು ಮತ್ತು ಓರ್ವ ಗನ್‌ಮ್ಯಾನ್ ಅನ್ನು ವಶಕ್ಕೆ ಪಡೆದಿದ್ದಾರೆ. ಈ ನಡುವೆ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಭದ್ರತ ಒದಗಿಸುವಂತೆ ಆಗ್ರಹಿಸಿ ಜನಾರ್ದನ ರೆಡ್ಡಿ ಪತ್ರ ಬರೆದಿದ್ದಾರೆ.

ಬಳ್ಳಾರಿ ಬ್ಯಾನರ್​​ ಗಲಾಟೆಗೆ ಸ್ಫೋಟಕ ತಿರುವು​​: ರಾಜಶೇಖರ್​​ಗೆ ತಗುಲಿದ್ದ ಬುಲೆಟ್​​ ಸತ್ಯ ರಿವೀಲ್​​
ರಾಜಶೇಖರ್​​ ಸಾವಿನ ಸತ್ಯ ರಿವೀಲ್​​
ರಾಚಪ್ಪಾಜಿ ನಾಯ್ಕ್
| Edited By: |

Updated on: Jan 04, 2026 | 9:43 AM

Share

ಬಳ್ಳಾರಿ, ಜನವರಿ 04: ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್ ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿಯೇ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ ಖಾಸಗಿ ಗನ್​​ಮ್ಯಾನ್ ಕೂಡ ಬಳಸಿರೋದು ಇದೇ ಗನ್​​ ಆಗಿದೆ. ಪ್ರಕರಣ ಸಂಬಂಧ ಈಗಾಗಲೇ 5 ಗನ್​​ಗಳನ್ನು ಬ್ರೂಸ್​​ ಪೇಟೆ ಪೊಲೀಸರು ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿಸಿದ್ದಾರೆ. ಓರ್ವ ಗನ್​​ಮ್ಯಾನ್​​ನನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದ ನಾಲ್ವರು ಎಸ್ಕೇಪ್​​ ಆಗಿದ್ದಾರೆ.

50ಕ್ಕೂ ಹೆಚ್ಚು ಮಂದಿಯ ವಿಚಾರಣೆ

ಗಲಾಟೆ ಪ್ರಕರಣ ಸಂಬಂಧ ಎರಡೂ ಗುಂಪುಗಳ ಮೇಲೂ ಪೊಲೀಸರು FIR ದಾಖಲಿಸಿಕೊಂಡಿದ್ದು, 50ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಿದ್ದಾರೆ. ಇಂದು ಮಧ್ಯಾಹ್ನದ ಒಳಗೆ ಪ್ರಮುಖ ಆರೋಪಿಗಳು ಸೇರಿ ಹಲವರ ಬಂಧನ ಸಾಧ್ಯತೆ ಇದೆ. ಗಲಾಟೆ ಸಂದರ್ಭ ಸ್ಥಳದಲ್ಲಿದ್ದ ಶಾಸಕ ಭರತ್​​ ರೆಡ್ಡಿ ಆಪ್ತ ಸತೀಶ್ ರೆಡ್ಡಿಯೂ ಅರೆಸ್ಟ್​​ ಆಗಬಹುದು ಎನ್ನಲಾಗಿದೆ. ಸತೀಶ್ ರೆಡ್ಡಿ ಸ್ಥಳಕ್ಕೆ ಬಂದ ನಂತರವೇ ಗಲಾಟೆ ವಿಕೋಪಕ್ಕೆ ತಿರುಗಿದ್ದು, ಸತೀಶ್ ರೆಡ್ಡಿ ಮೇಲೆ ಹಲ್ಲೆಗೆ ಜನಾರ್ದನ್ ರೆಡ್ಡಿ ಕಡೆಯವರು ಮುಂದಾಗಿದ್ದರು. ಈ ವೇಳೆ ಸತೀಶ್​​ ರೆಡ್ಡಿ ಖಾಸಗಿ ಗನ್​​ಮ್ಯಾನ್​ಗಳು ಫೈರಿಂಗ್​ ಮಾಡಿದ್ದರು. ಇನ್ನು ಪ್ರಕರಣ ಸಂಬಂಧ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಗಲಾಟೆಗೆ ಸಂಬಂಧಿಸಿದಂತೆ ಒಟ್ಟಾರೆ 6 ಪ್ರಕರಣಗಳು ಈವರೆಗೆ ದಾಖಲಾಗಿವೆ.

ಇದನ್ನೂ ಓದಿ: ಬಳ್ಳಾರಿ ಗಲಭೆ; ಜನಾರ್ದನರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ

ಭದ್ರತೆ ನೀಡುವಂತೆ ಜನಾರ್ದನ ರೆಡ್ಡಿ ಮನವಿ

ಬಳ್ಳಾರಿ ಗಲಾಟೆ ಬೆನ್ನಲ್ಲೇ ತಮಗೆ ಮತ್ತು ತಮ್ಮ ಕುಟುಂಬಕ್ಕೆ ಝೆಡ್ ಶ್ರೇಣಿಯ ಭದ್ರತೆ ಒದಗಿಸಬೇಕು ಎಂದು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಆಗ್ರಹಿಸಿದ್ದಾರೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಡಿಜಿಪಿ ಡಾ. ಎಂ.ಎ. ಸಲೀಂ ಅವರಿಗೆ ಪತ್ರ ಬರೆದು ಶಾಸಕರು ಆಗ್ರಹಿಸಿದ್ದಾರೆ. ಶಾಸಕ ನಾರಾ ಭರತ್ ‌ರೆಡ್ಡಿ ಮತ್ತು ಸತೀಶ್ ರೆಡ್ಡಿಯನ್ನು ಬಂಧಿಸಬೇಕು. ಘಟನೆಯನ್ನು ನಿಭಾಯಿಸದ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ವಹಿಸಬೇಕು. ಭದ್ರತೆ ನೀಡದೇ ಇದ್ದರೆ ಮುಂದೆ ನನ್ನ ಮತ್ತು ಕುಟುಂಬದ ಮೇಲೆ ದಾಳಿ ನಡೆದರೆ ರಾಜ್ಯ ಸರ್ಕಾರವೇ ಹೊಣೆ ಎಂದು ಜನಾದನ ರೆಡ್ಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.