ಬಿಮ್ಸ್​ನಲ್ಲಿ ಮೃತಪಟ್ಟಿದ್ದ ಐವರು ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ

ಬಳ್ಳಾರಿ ಜಿಲ್ಲಾಸ್ಪತ್ರೆ (ಬಿಮ್ಸ್)ಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಕ್ಕೆ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್​ ಅಹ್ಮದ್​ ಅವರು 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಐದೂ ಮಂದಿ ಗರ್ಭಣಿಯರಿಗೆ ನವೆಂಬರ್ 9 ರಂದು ಸಿಸೇರಿಯನ್‌ ಮೂಲಕ ಹೆರಿಗೆ ಮಾಡಲಾಗಿತ್ತು.

ಬಿಮ್ಸ್​ನಲ್ಲಿ ಮೃತಪಟ್ಟಿದ್ದ ಐವರು ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಣೆ
ಜಮೀರ್​ ಅಹ್ಮದ್​ ಖಾನ್​
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on: Dec 08, 2024 | 1:59 PM

ಬಳ್ಳಾರಿ, ಡಿಸೆಂಬರ್​ 08: ಬಳ್ಳಾರಿ ಜಿಲ್ಲಾಸ್ಪತ್ರೆ (BIMS)ಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಘೋಷಣೆ ಮಾಡಿದ್ದಾರೆ. ಸಂಡೂರಿನಲ್ಲಿ ನಡೆದ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಅವರು, ಈಗಾಗಲೇ 2 ಲಕ್ಷ ರೂ. ಪರಿಹಾರ ಘೋಷಣೆ ಆಗಿದೆ. ಜೊತೆಗೆ 3 ಲಕ್ಷ ರೂ. ಕೊಡುತ್ತೇವೆ ಎಂದು ತಿಳಿಸಿದರು.

ಬಳ್ಳಾರಿ ಬಿಮ್ಸ್​ನಲ್ಲಿ ಐವರು ಬಾಣಂತಿಯರು ಮೃತಪಟ್ಟಿದ್ದಾರೆ, ಇದು ದುರದೃಷ್ಟ. ಮೃತ ಬಾಣಂತಿಯರೆಲ್ಲರೂ ಬಡ ಕುಟುಂಬದವರು. ಹೀಗಾಗಿ, ಮೃತ ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ನೀಡುತ್ತೇವೆ ಎಂದು ಹೇಳಿದರು.

ಏನಿದು ಪ್ರಕರಣ

ಬಿಮ್ಸ್​ಗೆ ದಾಖಲಾಗಿದ್ದ ಒಂಬತ್ತೂ ಗರ್ಭಿಣಿಯರಿಗೆ ನವೆಂಬರ್​ 09 ರಂದೇ ಸಿಸೇರಿಯನ್​ ಮೂಲಕ ಹೆರಿಗೆ ಮಾಡಲಾಗಿತ್ತು. ನಂದಿನಿ, ಲಲಿತಮ್ಮ, ಸುಮಯಾ, ರೋಜಾ, ಮುಸ್ಕಾನ್, ಅಮೃತಾ, ಮಹಾಲಕ್ಷ್ಮೀ, ರಾಜೇಶ್ವರಿ, ಸುಮಲತಾ ಎಂಬುವರಿಗೆ ಹೆರಿಗೆ ಮಾಡಲಾಗಿತ್ತು. ಇವರಲ್ಲಿ ನಂದಿನಿ, ಲಲಿತಮ್ಮ, ರೋಜಾ, ಮುಸ್ಕಾನ್ ಹಾಗೂ ಸುಮಯಾ ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಬಾಣಂತಿಯರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಹೆರಿಗೆ ಬಳಿಕ ಬಾಣಂತಿಯರಿಗೆ IV ದ್ರಾವಣ ನೀಡಲಾಗಿತ್ತು. ಈ ದ್ರಾವಣ ಹಾಕಿ ಎರಡೇ ಗಂಟೆಯಲ್ಲಿ ಬಾಣಂತಿಯರು ಅಸ್ವಸ್ಥಗೊಂಡಿದ್ದಾರೆ. ಇವರಲ್ಲಿ ಏಳು ಮಂದಿ ಬಾಣಂತಿಯರು ಕಿಡ್ನಿ ಮತ್ತು ಬಹು ಅಂಗಾಂಗ ವೈಫಲ್ಯತೆಯಿಂದ ಬಳಲುತ್ತಿದ್ದರು. ಕೂಡಲೇ ಇವರನ್ನು ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವಿಮ್ಸ್​ನಲ್ಲಿ ಪರೀಕ್ಷಿಸಿದಾಗ ಏಳು ಮಂದಿ ಬಾಣಂತಿಯರ ಪೈಕಿ ಮೂವರಲ್ಲಿ ಇಲಿ ಜ್ವರ ಪತ್ತೆಯಾಗಿತ್ತು.

ಇದನ್ನೂ ಓದಿ: ಬಳ್ಳಾರಿ ಜಿಲ್ಲಾಸ್ಪತ್ರೆಗೆ ದಿನೇಶ್‌ ಗುಂಡೂರಾವ್ ಭೇಟಿ: IV ಫ್ಲ್ಯೂಯೆಡ್‌ ಕಂಪನಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಹೋಗ್ತಿದ್ದೇವೆ ಎಂದ ಸಚಿವ

ಕಿಡ್ನಿ ವೈಫಲ್ಯ ಮತ್ತು ಇಲಿ ಜ್ವರದಿಂದ ಬಳಲುತ್ತಿದ್ದ ಮೃತ ಸುಮಯಾ ನವೆಂಬರ್​ 12ರಿಂದ ಇಲ್ಲಿಯವರೆಗೆ ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಗುರುವಾರ (ಡಿ.05) ಚಿಕಿತ್ಸೆ ಫಲಿಸದೆ ಸುಮಯಾ ಮೃತಪಟ್ಟಿದ್ದಾರೆ. ಮೃತ ಬಾಣಂತಿಯರೆಲ್ಲರೂ 25 ವರ್ಷದೊಳಗಿನವರು ಎಂಬ ಅಂಶ ತಿಳಿದುಬಂದಿತ್ತು.

ಔಷಧಿ ತಯಾರಿಸಿದ ಕಂಪನಿ ಮೇಲೆ ಕ್ರಮ: ಗುಂಡೂರಾವ್​

ಪ್ರಕರಣ ಸಂಬಂಧ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಅಲ್ಲಿ ಏನೆಲ್ಲಾ ನ್ಯೂನತೆಗಳಾಗಿವೆ ಅಂತ ನಾವು ತನಿಖೆ ಮಾಡುತ್ತಿದ್ದೇವೆ. ನಮಗೆ ಗೊತ್ತಾಗದೇ ಇನ್ನೆಷ್ಟು ಬಾಣಂತಿಯರು ಮೃತಪಟ್ಟಿದ್ದಾರೆ ಗೊತ್ತಿಲ್ಲ. ಔಷಧಿ ತಯಾರಿಸಿದ ಕಂಪನಿ ಮೇಲೆ ಕ್ರಮ ಕೈಗೊಳ್ಳುತ್ತಿದ್ದೇವೆ. ಮೃತ ಬಾಣಂತಿಯರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ್ದೇವೆ. ಇನ್ಮುಂದೆ ಇಂತಹ ಘಟನೆಗಳು ಆಗದಂತೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್