ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸ್ಫೋಟಕ ಹೇಳಿಕೆ

ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣದ ಬಗ್ಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. IV ರಿಂಗರ್ ಲ್ಯಾಕ್ಟೇಟ್ ದ್ರಾವಣದ ಜೊತೆಗೆ ಶಸ್ತ್ರಚಿಕಿತ್ಸಾ ಕೊಠಡಿಯ ಅಸ್ವಚ್ಛತೆಯೂ ಸಾವುಗಳಿಗೆ ಕಾರಣವಾಗಿರಬಹುದು ಎಂದು ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಶಸ್ತ್ರಚಿಕಿತ್ಸಾ ಕೊಠಡಿಯ ಸ್ವಚ್ಛತೆ ಮತ್ತು ನೈರ್ಮಲ್ಯ ಪರಿಶೀಲನೆ ಅಗತ್ಯವಿದೆ ಎಂದು ಅವರು ಒತ್ತಾಯಿಸಿದ್ದಾರೆ. ಗರ್ಭಿಣಿಯರ ದಾಖಲಾತಿ ಸಂಖ್ಯೆಯಲ್ಲೂ ಗಣನೀಯ ಇಳಿಕೆಯಾಗಿದೆ.

ಬಳ್ಳಾರಿ ಬಾಣಂತಿಯರ ಸಾವಿಗೆ ಔಷಧ ಮಾತ್ರ ಕಾರಣವಲ್ಲ: ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸ್ಫೋಟಕ ಹೇಳಿಕೆ
ಬಿಮ್ಸ್​ ಆಸ್ಪತ್ರೆ, ನಾಗಲಕ್ಷ್ಮೀ ಚೌದರಿ
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ವಿವೇಕ ಬಿರಾದಾರ

Updated on:Dec 14, 2024 | 10:10 AM

ಬಳ್ಳಾರಿ, ಡಿಸೆಂಬರ್​ 14: ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ (BIMS) ಬಾಣಂತಿಯರ ಸಾವಿಗೆ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿನ ಅಸ್ವಚ್ಛತೆ ಕೂಡ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ (Nagalakshmi Chowdhary) ಅನುಮಾನ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ರಾಜ್ಯ ಮಹಿಳಾ ಆಯೋದ ಅಧ್ಯಕ್ಷ ಡಾ. ನಾಗಲಕ್ಷ್ಮೀ ಚೌದರಿ ಅವರು ಶುಕ್ರವಾರ (ಡಿ.13) ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದರು. ಆಸ್ಪತ್ರೆಯಲ್ಲಿನ ಹೆರಿಗೆ ವಾರ್ಡ್​​, ಶಸ್ತ್ರಚಿಕಿತ್ಸಾ ಕೊಠಡಿ, ಆಸ್ಪತ್ರೆಗೆ ಸರಬರಾಜು ಆಗುವ ನೀರಿನ ಟ್ಯಾಂಕ್‌ಗಳನ್ನು ಪರಿಶೀಲನೆ ನಡೆಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಾಣಂತಿಯರ ಸಾವಿಗೆ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣವಲ್ಲ. ಹೆರಿಗೆಯಾದ ಶಸ್ತ್ರಚಿಕಿತ್ಸಾ ಕೊಠಡಿ ಕೂಡ ಕಾರಣವಾಗಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದರು.

ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ ಶಸ್ತ್ರಚಿಕಿತ್ಸೆಯಾದ ಬಳಿಕ ನಂಜು, ಬ್ಯಾಕ್ಟೀರಿಯಾದಿಂದ ಇನ್ಫೆಕ್ಷನ್ ಆಗುವ ಸಾಧ್ಯತೆ ಇರುತ್ತೆ. ಹೀಗಾಗಿ, ಶಸ್ತ್ರಚಿಕಿತ್ಸಾ ಕೊಠಡಿಯ ಗಾಳಿ, ಗೋಡೆ, ಟೇಬಲ್ ಇಡೀ ಹರಿಗೆ ಸ್ವ್ಯಾಬ್ ಸ್ಯಾಂಪಲ್ ವರದಿ ಬೇಕಿದೆ. ಶಸ್ತ್ರಚಿಕಿತ್ಸಾ ಕೊಠಡಿಯಿಂದಲೂ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ. ಸ್ವಚ್ಛತೆ ಇಲ್ಲದಿದ್ದರೆ ಇನ್ಫೆಕ್ಷನ್ ಆಗಿ ಬಾಣಂತಿಯರು ಸಾವನ್ನಪ್ಪುವ ಸಾಧ್ಯತೆ ಇರುತ್ತದೆ. ಹೀಗಾಗಿ, ಅದರ ವರದಿ ಬೇಕು ಅಂತ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದ ಹಲವು ಆಸ್ಪತ್ರೆಗಳಿಗೆ ಪೂರೈಕೆಯಾಗಿದೆ ಬಾಣಂತಿಯರ ಸಾವಿಗೆ ಕಾರಣವಾಗಿದ್ದ ಔಷಧಿ: ಹೆಚ್ಚಿದ ಆತಂಕ

ಬಾಣಂತಿಯರ ಸಾವಿಗೆ ಕೇವಲ ಕೇವಲ IV ರಿಂಗರ್ ಲ್ಯಾಕ್ಟೇಟ್ ದ್ರಾವಣ ಮಾತ್ರ ಕಾರಣನಾ ಅಥವಾ ಬೇರೆ ಇನ್ನಾವುದಾದರೂ ಕಾರಣ ಇದೆಯಾ ಎಂಬುವುದು ವರದಿ ಬಂದ ಬಳಿಕ ಗೊತ್ತಾಗುತ್ತೆ ಎಂದು ಹೇಳಿದರು.

ಗರ್ಭಿಣಿಯರ ದಾಖಲಾತಿ ಸಂಖೆಯಲ್ಲಿ ಇಳಿಕೆ

ಐವರು ಬಾಣಂತಿಯರ ಸಾವಿನಿಂದ ಜನರು ಆತಂಕಗೊಂಡಿದ್ದು, ಬಿಮ್ಸ್​ಗೆ ದಾಖಲಾಗುವ ಗರ್ಭಿಣಿಯರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ. ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗುವ ಗರ್ಭಣಿಯರ ಸಂಖ್ಯೆ ಶೇ 50 ರಷ್ಟು ಕುಸಿತವಾಗಿದೆ. ಸೆಪ್ಟೆಂಬರ್ ತಿಂಗಳಲ್ಲಿ 585 ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅಕ್ಟೋಬರ್​ನಲ್ಲಿ 577 ಗರ್ಭೀಣಿಯರು ದಾಖಲಾಗಿದ್ದರು. ನವೆಂಬರ್ ತಿಂಗಳಲ್ಲಿ 289 ಗರ್ಭಿಣಿಯರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂಖ್ಯೆ ಡಿಸೆಂಬರ್​ ತಿಂಗಳಲ್ಲಿ ದಿಢೀರ್​ ಕುಸಿತವಾಗಿದೆ. ಶನಿವಾರ ಡಿಸೆಂಬರ್ 13ನೇ ತಾರೀಖಿನವರಗೆ ಕೇವಲ 80 ಜನ ಗರ್ಭಿಣಿಯರು ದಾಖಲಾಗಿದ್ದಾರೆ.

ಏನಿದು ಘಟನೆ

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣ, ರಾಜ್ಯವನ್ನು ಬೆಚ್ಚಿ ಬೀಳಿಸಿದೆ. ನವೆಂಬರ್​ 9 ರಂದು ಜಿಲ್ಲಾ ಆಸ್ಪತ್ರೆಯಲ್ಲಿ 14 ಬಾಣಂತಿಯರಿಗೆ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ಪೈಕಿ ಒಂಬತ್ತು ಬಾಣಂತಿಯರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಕಂಡುಬಂದಿತ್ತು. ತಕ್ಷಣ ಏನಾಯಿತು ಅಂತ ಗಮನಿಸುವಷ್ಟರಲ್ಲಿ ಇಬ್ಬರು ಬಾಣಂತಿಯರು ಮೃತಪಟ್ಟಿದ್ದರು. ನಂದಿನಿ ಹಾಗೂ ಲಲಿತಮ್ಮ ಜಿಲ್ಲಾ ಆಸ್ಪತ್ರೆಯ ಹೆರಿಗೆ ವಾರ್ಡ್​ನಲ್ಲಿ ಕೊನೆಯುಸಿರು ಎಳೆದಿದ್ದರು.

ಬಳಿಕ ಉಳಿದ ಏಳು ಬಾಣಂತಿಯರನ್ನು ಬಿಮ್ಸ್ ಆಸ್ಪತ್ರೆಗೆ ಶಿಪ್ಟ್ ಮಾಡಲಾಗಿತ್ತು. ಏಳು ಬಾಣಂತಿಯರಲ್ಲಿ ಬಾಣಂತಿ ರೋಜಮ್ಮ ಬಿಮ್ಸ್​ನಲ್ಲಿ ನವೆಂಬರ್​ 13 ರಂದು ಮೃತಪಟ್ಟಿದ್ದರು. ಅಲ್ಲಿಂದ ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಸರ್ಕಾರ ತನಿಖಾ ತಂಡವನ್ನ ಕಳುಹಿಸಿ ಬಾಣಂತಿಯರ ಸರಣಿ ಸಾವಿನ ಬಗ್ಗೆ ಮಾಹಿತಿ ಪಡೆದುಕೊಂಡಿದೆ. ಬಾಣಂತಿಯರ ಸಾವಿಗೆ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಕಾರಣ ಎಂದು ತನಿಖಾ ತಂಡ ಮಾಹಿತಿ ನೀಡಿತ್ತು. ಇದಾದ ಬಳಿಕ ನವೆಂಬರ್​ 25 ರಂದು ಬಾಣಂತಿ ಮುಸ್ಕಾನ್ , ಡಿಸೆಂಬರ್ 5 ರಂದು ಬಾಣಂತಿ ಸುಮಯಾ ಮೃತಪಟ್ಟಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:02 am, Sat, 14 December 24

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ