
ಬಳ್ಳಾರಿ, ಅಕ್ಟೋಬರ್ 31: ಕನ್ನಡ ರಾಜ್ಯೋತ್ಸವದ (Kannada Rajyotsava) ಸಂಭ್ರಮದ ಭಾಗವಾಗಿ, ಜಿಲ್ಲೆಯಲ್ಲಿ ಇರುವ ಎಲ್ಲಾ ಶಾಶ್ವತ, ಅರೆ-ಶಾಶ್ವತ ಹಾಗೂ ತಾತ್ಕಾಲಿಕ ಚಿತ್ರಮಂದಿರಗಳು ಸೇರಿದಂತೆ ವಿಡಿಯೋ ಚಿತ್ರಮಂದಿರಗಳಲ್ಲೂ ನವೆಂಬರ್ 1ರಿಂದ 7ರವರೆಗೆ ಕಡ್ಡಾಯವಾಗಿ ಕನ್ನಡ ಚಿತ್ರಗಳನ್ನು ಪ್ರದರ್ಶಿಸುವಂತೆ ಜಿಲ್ಲಾಡಳಿತ ಸೂಚಿಸಿದೆ ಎಂದು ಅಪರ ಜಿಲ್ಲಾಧಿಕಾರಿ ಮುಹಮ್ಮದ್ ಎನ್. ಝುಬೇರ್ ತಿಳಿಸಿದ್ದಾರೆ.
ನಿಗದಿತ ಅವಧಿಯಲ್ಲಿ ಕನ್ನಡ ಸಿನಿಮಾಗಳ ಪ್ರದರ್ಶನ ಕೈಗೊಳ್ಳದ ಚಿತ್ರಮಂದಿರಗಳಿಗೆ ಪರವಾನಿಗೆ ನವೀಕರಣ ಮಾಡಲಾಗುವುದಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 31 ಮತ್ತು ನವೆಂಬರ್ 1ರಂದು ಚಿತ್ರಮಂದಿರ ಕಟ್ಟಡಗಳಲ್ಲಿ ಕಡ್ಡಾಯವಾಗಿ ದೀಪಾಲಂಕಾರ ಮಾಡಬೇಕೆಂಬ ನಿರ್ದೇಶನವನ್ನೂ ನೀಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 8:54 am, Fri, 31 October 25