Bellary Mayor Election: ಇಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್​ ಎಲೆಕ್ಷನ್​

ಕಳೆದ ವರ್ಷ 2022ರ ಮಾರ್ಚ್​​ನಲ್ಲಿ ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ನಡೆದಿದ್ದು ಮೇಯರ್‌ ಆಗಿ 34ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು, ಉಪಮೇಯರ್ ಆಗಿ 37ನೇ ವಾರ್ಡ್‌ನ ಮಾಲನ್ ಬೀ ಶನಿವಾರ ಆಯ್ಕೆಯಾಗಿದ್ದರು. ಇವರ ಅಧಿಕಾರವದಿ ಮುಗಿದ ಹಿನ್ನೆಲೆ ಇಂದು ಚುನಾವಣೆ ನಡೆಯುತ್ತಿದೆ.

Bellary Mayor Election: ಇಂದು ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್​ ಎಲೆಕ್ಷನ್​
ಬಳ್ಳಾರಿ ಮಹಾನಗರ ಪಾಲಿಕೆ
Follow us
ವಿವೇಕ ಬಿರಾದಾರ
|

Updated on:Mar 29, 2023 | 11:04 AM

ಬಳ್ಳಾರಿ: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ (Karnataka Assembly Election) ಕಾವು ಹೆಚ್ಚಾಗುತ್ತಿದ್ದು ಒಂದಡೆಯಾದರೆ, ಮತ್ತೊಂದಡೆ ಗಣಿನಾಡು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್​ ಎಲೆಕ್ಷನ್ (Bellary Mayor Election)​ ಕಾವು ಕೂಡ ತಾರಕಕ್ಕೇರಿದೆ. ಸದ್ಯ ಮಹಾನಗರ ಪಾಲಿಯ 39 ವಾರ್ಡ್‌ಗಳ ಪೈಕಿ 21 ಕಾಂಗ್ರೆಸ್ (Congress), 13 ಬಿಜೆಪಿ (BJP), 05 ಜನ ಪಕ್ಷೇತರರು ಸದಸ್ಯರು ಗೆಲವು ಸಾಧಿಸಿದ್ದಾರೆ. ಕಳೆದ ವರ್ಷ 2022ರ ಮಾರ್ಚ್​​ನಲ್ಲಿ ಮಹಾನಗರ ಪಾಲಿಕೆ ಚುನಾವಣೆ ನಡೆದಿದ್ದು, ಮೇಯರ್‌ (Mayor) ಆಗಿ 34ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯೆ ಎಂ. ರಾಜೇಶ್ವರಿ ಸುಬ್ಬರಾಯುಡು, ಉಪಮೇಯರ್ (Deputy Mayor) ಆಗಿ 37ನೇ ವಾರ್ಡ್‌ನ ಮಾಲನ್ ಬೀ ಶನಿವಾರ ಆಯ್ಕೆಯಾಗಿದ್ದರು. ಈಗ ಮೇಯರ್​, ಉಪಮೇಯರ್ ಅಧಿಕಾರವಧಿ 1 ವರ್ಷ ಪೂರೈಸಿದ ಹಿನ್ನೆಲೆ ಇಂದು (ಮಾ.29) ಚುನಾವಣೆ ನಡೆಯಲಿದೆ.

ಮೇಯರ್ ಸ್ಥಾನಕ್ಕೆ ಎಸ್​ಸಿ, ಉಪ ಮೇಯರ್ ಸ್ಥಾನಕ್ಕೆ ಎಸ್​ಟಿ ಮೀಸಲು ಘೋಷಣೆ ಮಾಡಲಾಗಿದೆ. ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತ ಬಂದಿದ್ದು, ಇದರ ಜೊತೆಗೆ ಐವರು ಪಕ್ಷೇತರ ಸದಸ್ಯರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈಗ 26 ಸದಸ್ಯರ ಬಲ ಹೊಂದಿರುವ ಕಾಂಗ್ರೆಸ್‌ಗೆ ಮೇಯರ್ ಗದ್ದುಗೆ ಹಿಡಿಯುವ ಸಾಧ್ಯತೆ ಇದೆ.

ಇದನ್ನೂ ಓದಿ: ನೀತಿ ಸಂಹಿತೆ ಜಾರಿಗೂ ಮುನ್ನ ಖಾಸಗಿ ಕಾರಿನಲ್ಲಿ ಬಂದು ದೇಗುಲ ಮಹಾದ್ವಾರ ಉದ್ಘಾಟಿಸಿದ ಸಚಿವ ಸಿ.ಸಿ.ಪಾಟೀಲ್

ಮೇಯರ್ ಸ್ಥಾನಕ್ಕೆ ಕಾಂಗ್ರೆಸ್​​ನಿಂದ 6 ಜನ ಆಕಾಂಕ್ಷಿಗಳ ಮಧ್ಯೆ ಪೈಪೋಟಿ ಏರ್ಪಟ್ಟಿದೆ. ಉಮಾದೇವಿ ಶಿವರಾಜ್, ತ್ರೀವೇಣಿ, ಕುಬೇರ, ಮಿಂಚು ಶ್ರೀನಿವಾಸ್ ಹಾಗೂ ಶ್ವೇತಾರಿಂದ ಮೇಯರ್ ಸ್ಥಾನಕ್ಕೆ ರೇಸ್​ನಲ್ಲಿದ್ದಾರೆ. ಉಪ ಮೇಯರ್ ಸ್ಥಾನಕ್ಕೆ 3 ಜನ ಪಾಲಿಕೆ ಸದಸ್ಯರ ಮಧ್ಯೆ ಪೈಪೋಟಿ ಇದೆ. ಉಪ ಮೇಯರ್ ಸ್ಥಾನಕ್ಕೆ ಶಶಿಕಲಾ ಜಗನ್ನಾಥ, ಜಾನಕಿ,‌ ರತ್ನಮ್ಮ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಮೇಯರ್ ಎಲೆಕ್ಷನ್‌ಗೆ ಬಿಜೆಪಿಯಿಂದಲೂ ಅಭ್ಯರ್ಥಿಗಳು ಸ್ಪರ್ಧಿಸುವ ಸಾಧ್ಯತೆ ಇದೆ.

ವಿಧಾನಸಭೆ ಚುನಾವಣೆ ಹೊತ್ತಲ್ಲಿ ಪ್ರತಿಷ್ಠೆಯಾದ ಮೇಯರ್​ ಚುನಾವಣೆ

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಮಧ್ಯೆ ಗಣಿ ನಾಡಲ್ಲಿ ಪೈಪೋಟಿ ಏರ್ಪಟ್ಟಿದೆ. ನಾಯಕರು ಚುನಾವಣೆ ಅಖಾಡಕ್ಕಿಳಿದಿದ್ದು, ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಬಿಜೆಪಿ ಮತ್ತು ಕಾಂಗ್ರೆಸ್​ ಮಧ್ಯೆ ತೀರ್ವ ಪೈಪೋಟಿ ಏರ್ಪಟ್ಟಿದೆ. ಕಳೆದ ಮೇಯರ್​ ಚುನಾವಣೆಯಲ್ಲಿ ಆಪರೇಷನ್​ ಕಲಮದ ಭಯದಲ್ಲಿ ಕಾಂಗ್ರೆಸ್​ ತನ್ನ ಸದಸ್ಯರನ್ನು ರೆಸಾರ್ಟ್​​ಗೆ ಕರೆದೊಯ್ದು ಹಿಡಿದಿಟ್ಟುಕೊಂಡಿತ್ತು. ಇಂದು ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪ ಮೇಯರ್‌ ಆಯ್ಕೆ ಚುನಾವಣೆ ನಡೆಯಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಮುಂಬರುವ ವಿಧಾಸನಭಾ ಚುನಾವಣೆಗೆ ಪ್ರತಿಷ್ಠೆಯ ವಿಚಾರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:03 am, Wed, 29 March 23

‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ಮಹಾಕುಂಭದಲ್ಲಿ ಹೂವಿನ ಹಾರ ಮಾರುವ ಯುವತಿ ಸೌಂದರ್ಯಕ್ಕೆ ಫ್ಯಾನ್ ಆಗದವರೇ ಇಲ್ಲ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ನಾನು ನಿಷ್ಠಾವಂತ ಕಾರ್ಯಕರ್ತ, ಸತೀಶ್ ಜಾರಕಿಹೊಳಿ ಹಿಂಬಾಲಕನಲ್ಲ: ಕಾರ್ಯಕರ್ತ
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!
ಸುಮ್ಮನಿರುವಂತೆ ಸತೀಶ್ ಹೇಳಿದರೂ ಕೂಗಾಟ ನಿಲ್ಲಿಸದ ಕಾರ್ಯಕರ್ತರು!