AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ: 90 ಕೋಟಿ ಖರ್ಚಾದರೂ ಮುಗಿಯದ ರಿಂಗ್ ರೋಡ್ ಕಾಮಗಾರಿ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ಜನರು

ಮಹಾನಗರದ ಹೊರಗಡೆ ಎರಡು ರಿಂಗ್ ರೋಡ್​ಗಳಿದ್ದರು ಇಲ್ಲದಂತಾಗಿದ್ದು, ಭಾರಿ ಗಾತ್ರದ ಲಾರಿಗಳು ನಗರದೊಳಗಡೆ ಓಡಾಡುವ ಮೂಲಕ ಹೀಗಾಗಿ ನಿತ್ಯ ಅಪಘಾತಗಳಿಗೆ ಆಹ್ವಾನ ನೀಡುತ್ತಿದೆ.ಇದರಿಂದ ಗಣಿ ನಾಡಿನ ಜನರು ಅಂಗೈಯಲ್ಲಿ ಜೀವ ಹಿಡಿದುಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಬಳ್ಳಾರಿ: 90 ಕೋಟಿ ಖರ್ಚಾದರೂ ಮುಗಿಯದ ರಿಂಗ್ ರೋಡ್ ಕಾಮಗಾರಿ: ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿರುವ ಜನರು
ಬಳ್ಳಾರಿ
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Nov 28, 2022 | 7:34 PM

Share

ಬಳ್ಳಾರಿ: ನಗರದ ಹೊರಗಡೆ ಎರಡು ರಿಂಗ್​ ರೋಡ್ (Ring road)​ಗಳು ಇದ್ದು ದಶಕಗಳು ಕಳೆದರೂ ಕಾಮಗಾರಿ ಪೂರ್ಣಗೊಳ್ಳದ ಕಾರಣ ರಿಂಗ್ ರೋಡ್ ಬದಲಾಗಿ ಮಹಾನಗರದಲ್ಲಿ ಅದಿರು ಲಾರಿಗಳ ಜೊತೆಗೆ ಬೃಹತ್​ ಗಾತ್ರದ ವಾಹನಗಳು ಓಡಾಟ ಮಾಡುತ್ತಿದೆ. ಎಲ್ಲಿ ನೋಡಿದರಲ್ಲಿ ತಗ್ಗು ಗುಂಡಿಗಳು ಬಿದ್ದಿದ್ದು, ನಿತ್ಯ ಅಪಘಾತಗಳಿಗೆ ಆಹ್ವಾನ ನೀಡುತ್ತಿದೆ ಎಂದು ಮಹಾನಗರದ ಜನ ಸರ್ಕಾರ, ಜಿಲ್ಲಾಡಳಿತ ಹಾಗೂ ಪೊಲೀಸ್​ ಇಲಾಖೆಯ ವಿರುದ್ದ ಹಿಡಿಶಾಪ ಹಾಕುತ್ತಿದ್ದಾರೆ.

ಹೊಸಪೇಟೆಯಿಂದ ಬಳ್ಳಾರಿ ಮಾರ್ಗವಾಗಿ ಗುತ್ತಿಯವರೆಗೂ ರಸ್ತೆ ಕಾಮಗಾರಿ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನಗರದ ಹೊರಗಡೆ ರಿಂಗ್ ರೋಡ್ ಕಾಮಗಾರಿ ಕೂಡ ನಡೆಸುತ್ತಿದೆ. ವಿದೇಶಿ ಮಾದರಿಯಲ್ಲಿ ರಿಂಗ್ ರೋಡ್ ಕಾಮಗಾರಿ ನಡೆಸುತ್ತಿದ್ದು ಅರ್ಧಕ್ಕೆ ಸ್ಥಗಿತಗೊಂಡಿದೆ. ಬೃಹತ್ ಗಾತ್ರದ ವಾಹನಗಳು ರಿಂಗ್ ರೋಡ್ ಬದಲಿಗೆ ನಗರದಲ್ಲಿಯೆ ಓಡಾಡುತ್ತಿವೆ. ರಿಂಗ್ ರೋಡ್ ಸಂಪೂರ್ಣವಾಗಿ ಹದಗೆಟ್ಟು ಹೋಗಿರುವ ಪರಿಣಾಮ ಬೃಹತ್ ಗಾತ್ರದ ಲಾರಿಗಳು ನಗರದಲ್ಲಿ ಸಂಚರಿಸುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದೆ.

ಇದನ್ನೂ ಓದಿ:ಬಳ್ಳಾರಿ ನಗರ ಕ್ಷೇತ್ರದ ಟಿಕೇಟ್​ಗಾಗಿ ಶುರುವಾಗಿದೆ ಬಿಗ್ ಫೈಟ್: ಒಬ್ಬರಲ್ಲ ಇಬ್ಬರಲ್ಲ ಬರೋಬ್ಬರಿ 20 ಆಕಾಂಕ್ಷಿ ಅರ್ಜಿ

ಈ ಕುರಿತು ನಗರಾಭಿವೃದ್ದಿ ಪ್ರಾಧಿಕಾರ ಈಗಾಗಲೇ ಗುತ್ತಿಗೆದಾರರಿಗೆ ನೋಟಸ್ ಜಾರಿ ಮಾಡಿದ್ದು, 18 ಕೀಲೋ ಮೀಟರ್ ವ್ಯಾಪ್ತಿಯ ರಿಂಗ್ ರೋಡ್​ನಲ್ಲಿಯೇ ವಾಹನಗಳು ಓಡಾಡುವಂತೆ ಸೂಚನೆ ನೀಡಿರುವುದಾಗಿ ಹೇಳುತ್ತಿದ್ದಾರೆ. ರಿಂಗ್ ರೋಡ್ ಅವ್ಯವಸ್ಥೆಯಿಂದ ನಗರದಲ್ಲಿ ಭಾರಿ ಗಾತ್ರದ ವಾಹನಗಳು ಓಡಾಡುತ್ತಿರುವುದರಿಂದ ಅಪಘಾತಗಳ ಸಂಖ್ಯೆ ಹೆಚ್ಚಳವಾಗಿದೆ. ನಿತ್ಯ ನಗರದಲ್ಲಿ ಅಪಘಾತಗಳು ಸಂಭವಿಸುತ್ತಿರುವುರಿಂದ ಸ್ಥಳೀಯರು ಹೊರಗೆ ಸಂಚರಿಸಲು ಭಯಬೀಳುವಂತಾಗಿದೆ.

ಇದನ್ನೂ ಓದಿ:ಬಳ್ಳಾರಿ: ಮುಖ್ಯ ಶಿಕ್ಷಕಿ ಕರ್ತವ್ಯ ವಹಿಸಿಕೊಳ್ಳುವಾಗ ಬೈಬಲ್ ಬೋಧನೆ ಮಾಡಿದ ಪಾಸ್ಟರ್, ನೊಟೀಸ್ ನೀಡಿದ ಡಿಡಿಪಿಐ

ಇನ್ನಾದರೂ ಭಾರಿ ಗಾತ್ರದ ವಾಹನಗಳು, ಅದಿರು ಲಾರಿಗಳ ಅಟ್ಟಹಾಸಕ್ಕೆ ಪೊಲೀಸ್​ ಇಲಾಖೆ, ಜಿಲ್ಲಾಡಳಿತ ಬ್ರೇಕ್ ಹಾಕಿ ಜನರ ಪ್ರಾಣ ರಕ್ಷಣೆ ಮಾಡುತ್ತದೆಯೇ ಎನ್ನುವುದನ್ನು ಕಾದು ನೋಡಬೇಕಾಗಿದೆ.

ವರದಿ: ವೀರೇಶ್ ದಾನಿ ಟವಿ9 ಬಳ್ಳಾರಿ

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್