ಬಳ್ಳಾರಿ ವಿವಿಯ ಪ್ರಾಧ್ಯಾಪಕಿಯಾಗಿ ಮಂಗಳಮುಖಿ ನೇಮಕ: ಕರ್ನಾಟಕದಲ್ಲೇ ಮೊದಲು

|

Updated on: Dec 18, 2024 | 1:17 PM

ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ರೇಣುಕಾ ಪೂಜಾರಿಯವರು ಅರೆಕಾಲಿಕ ಕನ್ನಡ ಪ್ರಾಧ್ಯಾಪಕಿಯಾಗಿ ನೇಮಕಗೊಂಡಿದ್ದಾರೆ. ಇದು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವುದು. ಅವರ ಶೈಕ್ಷಣಿಕ ಸಾಧನೆ ಮತ್ತು ಸಮಾಜಕ್ಕೆ ಮಾದರಿಯಾಗುವ ಆಶಯ ಇಲ್ಲಿ ಪ್ರಮುಖವಾಗಿದೆ.

ಬಳ್ಳಾರಿ ವಿವಿಯ ಪ್ರಾಧ್ಯಾಪಕಿಯಾಗಿ ಮಂಗಳಮುಖಿ ನೇಮಕ: ಕರ್ನಾಟಕದಲ್ಲೇ ಮೊದಲು
ಮಂಗಳಮುಖಿ ರೇಣುಕಾ ಪೂಜಾರಿ
Follow us on

ಬಳ್ಳಾರಿ, ಡಿಸೆಂಬರ್​ 18: ತೃತೀಯ ಲಿಂಗಿಯೊಬ್ಬರು (Transgender) ಬಳ್ಳಾರಿ ವಿಶ್ವವಿದ್ಯಾಲಯದ ಅರೆಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಮಾದರಿಯಾಗಿದ್ದಾರೆ. ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೇಣುಕಾ ಪೂಜಾರಿ ಅವರು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (Bellary University) ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ಕನ್ನಡ ಅಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಮಂಗಳಮುಖಿಯೊಬ್ಬರು ವಿಶ್ವವಿದ್ಯಾಲಯದ ಪ್ರಾಧ್ಯಾಪಕಿಯಾಗಿರುವುದು ರಾಜ್ಯದಲ್ಲಿ ಇದೇ ಮೊದಲು. ಶಿಕ್ಷಕರಾಗಿ ವಿವಿಧ ಶಾಲೆಗಳಲ್ಲಿ ಮೂವರು ಮಂಗಳಮುಖಿಯರು ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದರಾದರೂ ಉನ್ನತ ಶಿಕ್ಷಣ ಪಡೆದು ಪ್ರಾಧ್ಯಾಪಕಿಯಾಗಿದ್ದು ಇದೇ ಪ್ರಥಮ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಯಂತೆ ವಿದ್ಯಾರ್ಥಿ ವೇತನ: ಇಂಗ್ಲೆಂಡ್​ಗೆ ಕರ್ನಾಟಕ ಸ್ಫೂರ್ತಿ ಆಯ್ತಾ?

ಯಾರು ಈ ರೇಣುಕಾ ಪೂಜಾರಿ?

ರೇಣುಕಾ ಪೂಜಾರಿ ಅವರು ಮೂಲತಃ ಬಳ್ಳಾರಿ ಜಿಲ್ಲೆ ಕುರುಗೋಡು ಪಟ್ಟಣದವರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಪೂರ್ಣಗೊಳಿಸಿ, ಪದವಿ ಪೂರ್ವ ಶಿಕ್ಷಣವನ್ನು ಬಳ್ಳಾರಿಯ ಸರ್ಕಾರಿ ಪದವಿ ಪೂರ್ವ (ಮುನ್ಸಿಪಲ್) ಕಾಲೇಜಿನಲ್ಲಿ ಪೂರ್ಣಗೊಳಿಸಿದ್ದಾರೆ. ಪದವಿ ಶಿಕ್ಷಣವನ್ನು ಕುರುಗೋಡಿನಲ್ಲಿ ಹಾಗೂ ಕನ್ನಡ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಬಳ್ಳಾರಿ ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯಲ್ಲಿ ಅಭ್ಯಾಸ ಮಾಡಿದ್ದಾರೆ.

ಪ್ರಾಥಮಿಕ ಶಿಕ್ಷಣದಿಂದ ಸ್ನಾತಕೋತ್ತರ ಪದವಿವರೆಗೆ ರೆಗ್ಯುಲರ್‌ ಆಗಿದ್ದು, ವಿದ್ಯಾರ್ಥಿಯಾಗಿರುವ ವೇಳೆ ದೇಹದಲ್ಲಿ ನೈಸರ್ಗಿಕ ಬದಲಾವಣೆ ಆದ ಹಿನ್ನೆಲೆಯಲ್ಲಿ ಮಂಗಳಮುಖಿಯಾಗಿ ಬದಲಾಗಿದ್ದಾರೆ. ಎಸ್‌ಎಸ್ ಎಲ್‌ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.70ರಷ್ಟು ಅಂಕಗಳನ್ನು ಪಡೆದಿದ್ದಾರೆ. ಇವರು, ವಿಶ್ವವಿದ್ಯಾಲಯದ ಪೂರ್ಣಕಾಲಿಕ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಬೇಕು. ಉತ್ತಮ ಭವಿಷ್ಯ ರೂಪಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು ಎಂಬ ಆಸೆ ಹೊತ್ತಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ