AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿಯ ರಾಯಲ್ ವೃತ್ತದಲ್ಲಿ ರಾತ್ರೋರಾತ್ರಿ ಗಡಿಯಾರ ಕಂಬ ತೆರವು: ಕಾಂಗ್ರೆಸ್​ ಮುಖಂಡರಿಂದ ಪ್ರತಿಭಟನೆ

ಕಾಂಗ್ರೆಸ್ ಆಕ್ಷೇಪಕ್ಕೆ ಪಾಲಿಕೆ ಆಯುಕ್ತ ರುದ್ರೇಶ ಸ್ಪಷ್ಟಿಕರಣ ನೀಡಿದ್ದು, ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಈಗಾಗಲೇ ಅನುಮತಿ ಪಡೆಯಲಾಗಿದೆ. ಸಾರ್ವಜನಿಕ ಸಭೆ ಕರೆದು ಅಭಿಪ್ರಾಯ ಪಡೆಯಲಾಗಿದೆ.

ಬಳ್ಳಾರಿಯ ರಾಯಲ್ ವೃತ್ತದಲ್ಲಿ ರಾತ್ರೋರಾತ್ರಿ ಗಡಿಯಾರ ಕಂಬ ತೆರವು: ಕಾಂಗ್ರೆಸ್​ ಮುಖಂಡರಿಂದ ಪ್ರತಿಭಟನೆ
ಗಡಿಯಾರ ಕಂಬ ತೆರವು, ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್​ ನಾಯಕರು
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 24, 2022 | 7:27 AM

Share

ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿದ್ದ ಗಡಿಯಾರ ಕಂಬವನ್ನು ರಾತ್ರೋರಾತ್ರಿ ತೆರವು ಮಾಡಲಾಗಿದೆ. 140 ಅಡಿ ಎತ್ತರದ ಕ್ಲಾಕ್​ ಟವರ್​ ನಿರ್ಮಿಸಲು ಗಡಿಯಾರ ಕಂಬ ತೆರವು ಮಾಡಿದ್ದು, ಲೆಬೆನಾನ್ ಮಾದರಿ ಕ್ಲಾಕ್​ ಟವರ್ ನಿರ್ಮಾಣಕ್ಕೆ ಜಿಲ್ಲಾಡಳಿತ ಮುಂದಾಗಿದೆ. ಹಳೆಯದಾಗಿದ್ದ ಗಡಿಗಿ ಚೆನ್ನಪ್ಪ ಸ್ಮಾರಕ ಗಡಿಯಾರ ಕಂಬವನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಸಮ್ಮುಖದಲ್ಲಿ ತೆರವು ಮಾಡಲಾಯಿತು. 7 ಕೋಟಿ ರೂ. ವೆಚ್ಚದಲ್ಲಿ ಹೊಸದಾಗಿ ಕ್ಲಾಕ್​ ಟವರ್ ತಲೆ ಎತ್ತಲಿದೆ.​ 2009ರಲ್ಲಿ ಗಡಿಗಿ ಚೆನ್ನಪ್ಪ ವೃತ್ತವನ್ನು ರೆಡ್ಡಿ ಬ್ರದರ್ಸ್, ಶ್ರೀರಾಮುಲು ತೆರವು ಮಾಡಿದ್ದರು. ರಾಯಲ್​ ವೃತ್ತದಲ್ಲಿ ಗಡಿಯಾರ ಗೋಪುರ ತೆರವಿಗೆ  ಕಾಂಗ್ರೆಸ್ ವಿರೋಧಿಸಿದೆ.

ಇದನ್ನೂ ಓದಿ: Petrol Price Today: ಕಚ್ಚಾತೈಲ ಉತ್ಪಾದನೆ ಕಡಿತಕ್ಕೆ ಒಪೆಕ್ ಚಿಂತನೆ; ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಏರಿಕೆ, ಭಾರತದಲ್ಲಿ ಇಂಧನ ಬೆಲೆಗಳು ಹೀಗಿವೆ

ಸುಸಜ್ಜಿತ ಗಡಿಯಾರ ಗೋಪುರ ತೆರವಿಗೆ ಕೆಪಿಸಿಸಿ ಕಾರ್ಯದರ್ಶಿ ಜೆ.ಎಸ್.ಆಂಜನೇಯಲು ನೇತೃತ್ವದಲ್ಲಿ ಕಾಂಗ್ರೆಸ್​ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಗಡಿಯಾರ ಕಂಬ ತೆರವು ನಂತರ ‘ಕೈ’ ನಾಯಕರು ಸ್ಥಳಕ್ಕೆ ಆಗಮಿಸಿದರು. ಗಡಿಯಾರ ಗೋಪುರ ತೆರವು ವೇಳೆ ಸುಮ್ಮನಿದ್ದ ಕಾಂಗ್ರೆಸ್ ನಾಯಕರು, 7 ಕೋಟಿ ವೆಚ್ಚದಲ್ಲಿ ಲೆಬಿನಾನ್ ಮಾದರಿಯ ಕ್ಲಾಕ್ ಟವರ್ ನಿರ್ಮಾಣಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ರಾಯಲ್ ವೃತ್ತದಲ್ಲಿ ರಾತ್ರಿಯಿಂದ ಕಾಂಗ್ರೆಸ್​ ಮುಖಂಡರಿಂದ ಪ್ರತಿಭಟನೆ ಮಾಡುತ್ತಿದ್ದು, ಪಾಲಿಕೆಯಿಂದ ಒಪ್ಪಿಗೆ ಪಡೆಯದೇ ಕ್ಲಾಕ್ ಟವರ್ ನಿರ್ಮಾಣ ಮಾಡಲಾಗುತ್ತಿದ್ದು, 7 ಕೋಟಿ ವೆಚ್ಚದಲ್ಲಿ ಹೊಸ ಕ್ಲಾಕ್​ ಟವರ್​ ನಿರ್ಮಾಣಕ್ಕೆ ಕೈ ಪಡೆ ಗರಂ ಆಗಿದೆ.

ಇದನ್ನೂ ಓದಿ: Dollu Movie: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ‘ಡೊಳ್ಳು’ ಚಿತ್ರ ವೀಕ್ಷಿಸಿ, ಮೆಚ್ಚುಗೆ ಸೂಚಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

ಇನ್ನೂ ಕಾಂಗ್ರೆಸ್ ಆಕ್ಷೇಪಕ್ಕೆ ಪಾಲಿಕೆ ಆಯುಕ್ತ ರುದ್ರೇಶ ಸ್ಪಷ್ಟಿಕರಣ ನೀಡಿದ್ದು, ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಈಗಾಗಲೇ ಅನುಮತಿ ಪಡೆಯಲಾಗಿದೆ. ಸಾರ್ವಜನಿಕ ಸಭೆ ಕರೆದು ಅಭಿಪ್ರಾಯ ಪಡೆಯಲಾಗಿದೆ. ಕಾನೂನುಬದ್ದವಾಗಿ ಟೆಂಡರ್ ಕರೆದು ಕ್ಲಾಕ್ ಟವರ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಹೇಳಿದರು.

​ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 7:22 am, Wed, 24 August 22

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!