AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಜಿ ಶಾಸಕ ಸುರೇಶ್ ಬಾಬುಗೆ ಸಂಕಷ್ಟ: ಬಂಧಿಸಲು ಬಳ್ಳಾರಿಗೆ ಬಂದ ಬಿಹಾರ ಪೊಲೀಸ್ರು

ಮಾಜಿ ಸಚಿವ ಬಿ ಶ್ರೀರಾಮುಲು ಅವರ ಸೋದರಳಿಯ, ಕಂಪ್ಲಿ ಮಾಜಿ ಶಾಸಕ ಸುರೇಶ್ ಬಾಬು ಅವರಿಗೆ ಬಂಧನ ಭೀತಿ ಶುರುವಾಗಿದೆ. ಪ್ರಕರಣವೊಂದರಲ್ಲಿ ಸುರೇಶ್ ಬಾಬು ವಿರುದ್ಧ ಬಿಹಾರದ ಈಸ್ಟ್ ಚಂಪಾರಣ್ ಕೋರ್ಟ್‌ ನಾನ್ ಬೇಲೇಬಲ್ ವಾರೆಂಟ್ ಜಾರಿ ಮಾಡಿದೆ. ಹೀಗಾಗಿ ಅರೆಸ್ಟ್ ಮಾಡಲು ಬಿಹಾರ ಪೊಲೀಸರ ತಂಡ ಬಳ್ಳಾರಿಗೆ ಬಂದಿದೆ.

ಮಾಜಿ ಶಾಸಕ ಸುರೇಶ್ ಬಾಬುಗೆ ಸಂಕಷ್ಟ: ಬಂಧಿಸಲು ಬಳ್ಳಾರಿಗೆ ಬಂದ ಬಿಹಾರ ಪೊಲೀಸ್ರು
Suresh Babu
ವಿನಾಯಕ ಬಡಿಗೇರ್​
| Edited By: |

Updated on: Oct 29, 2026 | 10:41 PM

Share

ಬಳ್ಳಾರಿ, (ಅಕ್ಟೋಬರ್ 29): ಕಂಪ್ಲಿ ಮಾಜಿ ಶಾಸಕ ಸುರೇಶ್ ಬಾಬು ಅವರಿಗೆ ಬಿಹಾರದ ಈಸ್ಟ್ ಚಂಪಾರಣ್ ಕೋರ್ಟ್‌ ನಾನ್ ಬೇಲೇಬಲ್ ವಾರಂಟ್ ಜಾರಿ ಮಾಡಿದೆ. ಹೀಗಾಗಿ ಸುರೇಶ್ ಬಾಬು ಅವರ ಬಂಧನಕ್ಕಾಗಿ ಬಿಹಾರ ಪೊಲೀಸರ ತಂಡ ಬಳ್ಳಾರಿಗೆ ಆಗಮಿಸಿದ್ದು, ಬಳ್ಳಾರಿ ಎಸ್ಪಿ ಡಾ.ಸುಮನ್ ಡಿ.ಪೆನ್ನೇಕರ್ ಅವರ ಸಹಕಾರ ಕೋರಿದೆ. ಈ ಬಗ್ಗೆ ಎಸ್ಪಿ ಸುಮನ್ ಡಿ.ಪೆನ್ನೇಕರ್ ಅವರು ತಮ್ಮ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿ ಚರ್ಚೆ ನಡೆಸಿದ್ದಾರೆ. ಇನ್ನೊಂದೆಡೆ ಸುರೇಶ್ ಬಾಬುಗೆ ಢವ ಢವ ಶುರುವಾಗಿದೆ.

ಈವರೆಗೂ ಯಾವ ಪ್ರಕರಣ ಸಂಬಂಧ ನಾನ್ ಬೇಲೇಬಲ್ ವಾರಂಟ್ ಜಾರಿಯಾಗಿದೆ ಎನ್ನುವುದು ಸ್ಪಷ್ಟವಾಗಿಲ್ಲ. ಸದ್ಯ ವಾರಂಟ್ ಹಿಂದಿನ ಕಾರಣ ಏನು ಎನ್ನುವುದಕ್ಕೆ ಕುತೂಹಲ ಕೆರಳಿಸಿದ್ದು, ಮಾಜಿ ಶಾಸಕ ಸುರೇಶ್ ಬಾಬು ಬಂಧನ ಭೀತಿ ಎದುರಾಗಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ SIR ಸಮರ್ಪಕವಾಗಿ ನಡೆದಿದೆ: ಆಯೋಗಕ್ಕೆ ಜಾರಕಿಹೊಳಿ ಶಹಬ್ಬಾಸ್ ಗಿರಿ

ಬೇಲೇಕೇರಿ ಬಂದರಿನ ಮೂಲಕ ಕಬ್ಬಿಣದ ಅದಿರನ್ನು ಅಕ್ರಮವಾಗಿ ಸಾಗಿಸಿದ ಆರೋಪದ ಮೇಲೆ ಸೆ.19, 2013ರಂದು ಸಿಬಿಐ ತಂಡ ಇದೇ ಸುರೇಶ್ ಬಾಬು ಅವರನ್ನು ಬಂಧಿಸಿತ್ತು. 2009ರಿಂದ 2011 ರ ವೇಳೆಯಲ್ಲಿ ವಿದೇಶಿ ಕಂಪನಿಗಳಿಗೆ ಗಾಲಿ ಜನಾರ್ದನ ರೆಡ್ಡಿ ಅವರ ಕಂಪನಿಯ ಅದಿರನ್ನು ಅಕ್ರಮವಾಗಿ ಸಾಗಿಸಿದ ಆರೋಪ ಸುರೇಶ್ ಬಾಬು ಮೇಲಿತ್ತು.

ಈ ಹಿಂದೆ ಸಿದ್ಧರಾಮಯ್ಯ ಅವರ ವಿರುದ್ಧ ವಿಧಾನಸಭೆಯಲ್ಲಿ ತೋಳೇರಿಸಿ, ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಲು ಸುರೇಶ್ ಬಾಬು ಕಾರಣವಾಗಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿನಾಯಕ ಬಡಿಗೇರ್​
ವಿನಾಯಕ ಬಡಿಗೇರ್​
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ತನ್ನದೇ ಪಕ್ಷದ ಸಂಸದೆ ಕೆನ್ನೆಗೆ ಹೊಡೆದ ಕಾಂಗ್ರೆಸ್ ಸಂಸದ; ವಿಡಿಯೋ ವೈರಲ್
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಮಗುವಿಗೆ ಜನ್ಮ ನೀಡಿದೆ ಎಂದ 70ರ ಅಜ್ಜಿ: ಬಯಲಾಯಿತು ಸತ್ಯ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ಬೆಣ್ಣೆ ಹಳ್ಳದ ನೀರನ್ನು ಕೆರೆಗೆ ತುಂಬಿಸಲು ಹೊಸ ತಂತ್ರಜಾನ ಯುವ ರೈತನ ಸಾಧನೆ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ನಮಗೆ ಅರಮನೆಯಲ್ಲಿ ಉಳಿದುಕೊಳ್ಳಲು ಸರ್ಕಾರ ಜಾಗ ಕೊಟ್ಟಿದ್ದಲ್ಲ: ಪ್ರಮೋದಾದೇವಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಇದುವೇ ಕಾರಣ! ಸಚಿವ ಬೈರತಿ ಹೇಳಿದ್ದೇನು ನೋಡಿ
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಬೆಂಗಳೂರಿನ ಜನರಿಗೆ ಬಿಗ್​​ ಶಾಕ್
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಲೆಟರ್ ಪಡೆಯಲು ಜಗದೀಶ್​ಗೆ ಮತ್ತೊಂದು ಅವಕಾಶ: ಶುರುವಾಯ್ತು ರೋಚಕ ಸವಾಲು
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಹಾಸನಾಂಬೆ ಸನ್ನಿಧಿಯಲ್ಲಿ ಧರ್ಮದರ್ಶನ ಸಾಲು ಖಾಲಿ ಖಾಲಿ! ಯಾಕೆ ಗೊತ್ತಾ?
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಅಕ್ಕಿ ಬೆಲೆ ಮತ್ತೆ ದಿಢೀರ್ ಏರಿಕೆ: 2-3 ತಿಂಗಳಲ್ಲಿ ಶೇ 25-30ರಷ್ಟು ಹೆಚ್ಚಳ
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!
ಸೌಜನ್ಯ ಪ್ರಕರಣ: ಅದೊಂದು ರಿಪೋರ್ಟ್ ನಲ್ಲಿದೆ ಸೌಜನ್ಯ ಸಾವಿನ ರಹಸ್ಯ!