ಬಳ್ಳಾರಿಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ 107ಕ್ಕೇರಿಕೆ; 19 ಜನ ಬಲಿ

ಬಳ್ಳಾರಿಯಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ 107ಕ್ಕೇರಿದ್ದು, ಈವರೆಗೆ ಜಿಲ್ಲೆಯಲ್ಲಿ 19 ಜನ ಬಲಿಯಾಗಿದ್ದಾರೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸೇರಿ ಬೆಂಗಳೂರು, ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆಯಲ್ಲೂ ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.

ಬಳ್ಳಾರಿಯಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ 107ಕ್ಕೇರಿಕೆ; 19 ಜನ ಬಲಿ
ಪ್ರಾತಿನಿಧಿಕ ಚಿತ್ರ

ಬಳ್ಳಾರಿ: ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವ ಹೊತ್ತಿಗೆ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಆರ್ಭಟ ಜೋರಾಗುತ್ತಿದೆ. ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಹೆಚ್ಚಾಗುತ್ತಿವೆ. ಜೊತೆಗೆ ಸಾವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಕೊರೊನಾ ಬೆನ್ನಲ್ಲೆ ರಾಜ್ಯಕ್ಕೆ ಕಾಲಿಟ್ಟ ಬ್ಲ್ಯಾಕ್ ಫಂಗಸ್ ನಿಯಂತ್ರಿಸಲು ಸರ್ಕಾರ ಕೂಡಾ ಹೆಚ್ಚು ಗಮನಹರಿಸುತ್ತಿದೆ. ಈ ಬ್ಲಾಕ್ ಫಂಗಸ್​ನಿಂದ ಹಲವರು ಕಣ್ಣನ್ನು ಕಳೆದುಕೊಳ್ಳುತ್ತಿದ್ದಾರೆ. ಸಾಮಾನ್ಯವಾಗಿ ಮಣ್ಣು, ಗಿಡಗಳಲ್ಲಿ ಹುಟ್ಟಿಕೊಳ್ಳುವ ಈ ಫಂಗಸ್ ಮನುಷ್ಯನ ದೇಹಕ್ಕೂ ಹೊಕ್ಕುತ್ತಿದೆ. ನಿನ್ನೆ ಬೆಂಗಳೂರಿನಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳಿಗೆ ಈ ಕಪ್ಪು ಶಿಲೀಂಧ್ರ ಪತ್ತೆಯಾಗಿದೆ.

ಬಳ್ಳಾರಿಯಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ 107ಕ್ಕೇರಿದ್ದು, ಈವರೆಗೆ ಜಿಲ್ಲೆಯಲ್ಲಿ 19 ಜನ ಬಲಿಯಾಗಿದ್ದಾರೆ. ಬಳ್ಳಾರಿಯ ವಿಮ್ಸ್ ಆಸ್ಪತ್ರೆ ಸೇರಿ ಬೆಂಗಳೂರು, ಹುಬ್ಬಳ್ಳಿಯಲ್ಲಿ ಬ್ಲ್ಯಾಕ್ ಫಂಗಸ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಬಾಗಲಕೋಟೆಯಲ್ಲೂ ದಿನದಿಂದ ದಿನಕ್ಕೆ ಬ್ಲ್ಯಾಕ್ ಫಂಗಸ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಬಾಗಲಕೋಟೆಯಲ್ಲಿ ಬ್ಲ್ಯಾಕ್ ಫಂಗಸ್ ಕೇಸ್ 73ಕ್ಕೇರಿದೆ. ಈವರೆಗೆ 14 ಜನರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಜೊತೆಗೆ ಕಪ್ಪು ಶಿಲೀಂಧ್ರದಿಂದ ಐವರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ, ಕುಟುಂಬ ಕಲ್ಯಾಣಾಧಿಕಾರಿ ಮಾಹಿತಿ ನೀಡಿದೆ.

ಕೊಪ್ಪಳದಲ್ಲಿ ಮತ್ತೆ ಆರು ಜನರಿಗೆ ಬ್ಲ್ಯಾಕ್ ಫಂಗಸ್ ದೃಢವಾಗಿದ್ದು, ರೋಗಿಗಳ ಸಂಖ್ಯೆ 28ಕ್ಕೆ ಏರಿಕೆಯಾಗಿದೆ. ಜಿಲ್ಲಾ ಆಸ್ಪತ್ರೆಯ ಪ್ರತ್ಯೇಕ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ನಿನ್ನೆ ಒಂದೆ ದಿನ ಬ್ಲ್ಯಾಕ್ ಫಂಗಸ್​ಗೆ ಬೆಳಗಾವಿಯಲ್ಲಿ ನಾಲ್ವರು ಬಲಿಯಾಗಿದ್ದಾರೆ. ಈವರೆಗೆ ಬ್ಲ್ಯಾಕ್ ಫಂಗಸ್ಗೆ 15 ಜನ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದ್ದು, ಕಳೆದ 2 ದಿನದಲ್ಲಿ 18 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಪ್ರಕರಣಗಳ ಸಂಖ್ಯೆ 136ಕ್ಕೆ ಏರಿದೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ 10 ವರ್ಷದೊಳಗಿನ ಮೂವರು ಮಕ್ಕಳಿಗೆ ಬ್ಲ್ಯಾಕ್ ಫಂಗಸ್ ಪತ್ತೆ

ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದ ಅರುಣ್ ಸಿಂಗ್, ಯಡಿಯೂರಪ್ಪ ಬಗ್ಗೆ ಹೇಳಿದ್ದೇನು?

(black fungus case in Bellary is 107 and 19 died due to black fungus)