ಅಧಿವೇಶನದಲ್ಲಿ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ರಶ್ಮಿ ಬೆಂಗಳೂರಿಗೆ ಎತ್ತಂಗಡಿ

ಸದನದ ಗದ್ದಲದ ಬೆನ್ನಲ್ಲೇ ಸರ್ಕಾರ ಸಂಡೂರ ತಹಶಿಲ್ದಾರ್ ವರ್ಗಾವಣೆ ಮಾಡಿದೆ. ನಿನ್ನೆಯೇ ಅವರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಮಾಡಿದ್ದಾರೆ.

ಅಧಿವೇಶನದಲ್ಲಿ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ರಶ್ಮಿ ಬೆಂಗಳೂರಿಗೆ ಎತ್ತಂಗಡಿ
ಅಧಿವೇಶನದಲ್ಲಿ ನಿನ್ನೆ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ಎತ್ತಂಗಡಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 16, 2021 | 11:11 AM

ಬಳ್ಳಾರಿ: ಅಧಿವೇಶನದಲ್ಲಿ ನಿನ್ನೆ ಕಾಂಗ್ರೆಸ್ ಒತ್ತಾಯದ ಬೆನ್ನಲ್ಲೇ ಸಂಡೂರು ತಹಶಿಲ್ದಾರ್ ಎತ್ತಂಗಡಿಯಾಗಿದ್ದಾರೆ. ತಹಶಿಲ್ದಾರ್ ಹೆಚ್​ ಜಿ ರಶ್ಮಿ ಎತ್ತಂಗಡಿ ಜೊತೆಗೆ ಅವರ ಮೇಲಿನ ಆರೋಪದ ಬಗ್ಗೆ ತನಿಖೆಗೆ ಆದೇಶ ನೀಡಲಾಗಿದೆ. ಸಂಡೂರು ಶಾಸಕ ಇ. ತುಕಾರಾಂ (e tukaram) ಅವರು ಕಚೇರಿಗೆ ಹೋದರೆ ತಮಗೆ ಗೌರವ ಕೊಡಲ್ಲ ಎಂದು ಆರೋಪ ಮಾಡಿದ್ದರು. ಶಾಸಕ ತುಕಾರಾಂ ನಿನ್ನೆ ರಶ್ಮಿ ವಿರುದ್ದ ಅಧಿವೇಶನದಲ್ಲಿ ಹಕ್ಕುಚುತಿ (Breach of privilege) ಮಂಡಿಸಿದ್ದರು. ನಿನ್ನೆ ಅಧಿವೇಶನದಲ್ಲಿ ತಹಶೀಲ್ದಾರ್ ರಶ್ಮಿಯವರನ್ನ (sandur tahsildar hg rashmi) ಅಮಾನತ್ತು ಮಾಡುವಂತೆಯೂ ಕಾಂಗ್ರೆಸ್ ಶಾಸಕರು ಒತ್ತಾಯಿಸಿದ್ದರು.

ಸದನದ ಗದ್ದಲದ ಬೆನ್ನಲ್ಲೇ ಸರ್ಕಾರ ಸಂಡೂರು ತಹಶಿಲ್ದಾರ್ ವರ್ಗಾವಣೆ ಮಾಡಿದೆ. ನಿನ್ನೆಯೇ ಅವರನ್ನ ಕರ್ತವ್ಯದಿಂದ ಬಿಡುಗಡೆಗೊಳಿಸಿ ಬಳ್ಳಾರಿ ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಆದೇಶ ಮಾಡಿದ್ದಾರೆ. ವರ್ಗಾವಣೆ ಬಳಿಕ ಸ್ಥಳ ನಿಯೋಜನೆ ಮಾಡದೇ ಬೆಂಗಳೂರಿನಲ್ಲಿರುವ ಬಹುಮಹಡಿ ಕಟ್ಟಡದಲ್ಲಿರುವ ಕಂದಾಯ ಇಲಾಖೆಯ ಕಚೇರಿಗೆ ವರದಿ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ರಶ್ಮಿ ಸ್ಥಾನಕ್ಕೆ ಪ್ರಭಾರಿ ತಹಶಿಲ್ದಾರ್ ಆಗಿ ವಿಶ್ವಜೀತ್ ಮೆಹತಾ ಅವರನ್ನು ನೇಮಕ ಮಾಡಲಾಗಿದೆ. ತಹಶಿಲ್ದಾರ್ ರಶ್ಮಿ ಮೇಲೆ ಸಂಡೂರು ಶಾಸಕ ತುಕಾರಾಂ ಮಾಡಿದ ಆರೋಪಗಳ ತನಿಖೆ ನಡೆದಿದೆ. ಕಲಬುರಗಿ ಪ್ರಾದೇಶಿಕ ಆಯುಕ್ತರನ್ನ ತನಿಖಾಧಿಕಾರಿಯಾಗಿ ನೇಮಿಸಿ ಆದೇಶ ಮಾಡಲಾಗಿದೆ. ಕಲಬುರ್ಗಿ ಪ್ರಾದೇಶಿಕ ಆಯುಕ್ತರಿಗೆ ಸಮಗ್ರ ತನಿಖೆ ಮಾಡಿ ವರದಿ ಕೊಡುವಂತೆ ಸರ್ಕಾರ ಸೂಚನೆ ನೀಡಿದೆ.

ಇದನ್ನೂ ಓದಿ: ಪ್ರಪಂಚದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಬಿಜೆಪಿಯದ್ದು, ಬೆಳಗಾವಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ

Published On - 8:35 am, Thu, 16 December 21

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?