ಬಸವರಾಜ ಬೊಮ್ಮಾಯಿ ಪೂರ್ಣಾವಧಿ ಪೂರೈಸುವುದಿಲ್ಲ; ಗಡ್ಡಧಾರಿಯೋರ್ವರು ಮುಂದಿನ ಸಿಎಂ ಆಗ್ತಾರೆ: ಭವಿಷ್ಯವಾಣಿ
CoronaVirus: ಕೆಲವೇ ದಿನಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಳವಾಗಲಿದೆ. ಹಾಗಾಗಿ ಜನರು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಅಲ್ಲದೇ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಬೇಕು ಎಂದು ಅವರು ಹೇಳಿದರು.
ಬಳ್ಳಾರಿ: ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂರ್ಣಾವಧಿ ಪೂರೈಸುವುದಿಲ್ಲ ಎಂದು ಹೂವಿನಹಡಗಲಿಯ ಮೈಲಾರಲಿಂಗೇಶ್ವರ ದೇವಸ್ಥಾನದ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್ ಭವಿಷ್ಯವಾಣಿ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ಅವರು ಮಾತನಾಡಿದ ಅವರು, ಪ್ರಸ್ತುತ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ರಾಜ್ಯದ ಎರಡನೇ ಮುಖ್ಯಮಂತ್ರಿಗಳಾಗಿ ಆಯ್ಕೆಗೊಂಡಿದ್ದಾರೆ. ಕರ್ನಾಟಕದಲ್ಲಿ ಮೂರು ಮುಖ್ಯಮಂತ್ರಿಗಳಾಗಲಿದ್ದಾರೆ. ಇದು ಮೈಲಾರ ಭವಿಷ್ಯವಾಣಿಯಿಂದ ತಿಳಿದು ಬರುತ್ತಿದೆ. ಬಸವರಾಜ ಬೊಮ್ಮಾಯಿ ಅವರು 6 ರಿಂದ 7 ತಿಂಗಳುಗಳ ಕಾಲ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮುಂದಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಆಯ್ಕೆಯಾಗುವವರು ಗಡ್ಡಧಾರಿಗಳಿರುತ್ತಾರೆ. ಅವರೇ ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ. ಮೈಲಾರ ಭವಿಷ್ಯವಾಣಿಯಂತೆ ಪ್ರಸ್ತುತ ರಾಜಕಾರಣ ನಡೆಯುತ್ತಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಕೆಲವೇ ದಿನಗಳಲ್ಲಿ ಕೊರೊನಾ ಪ್ರಕರಣಗಳು (CoronaVirus) ಹೆಚ್ಚಳವಾಗಲಿದೆ. ಹಾಗಾಗಿ ಜನರು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಅಲ್ಲದೇ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಬೇಕು ಎಂದು ಅವರು ಹೇಳಿದರು.
(ಈ ಭವಿಷ್ಯವಾಣಿಯನ್ನು ಟಿವಿ9 ಕನ್ನಡ ಡಿಜಿಟಲ್ ಕೇವಲ ಸುದ್ದಿಯನ್ನಾಗಷ್ಟೇ ಪ್ರಕಟಿಸಿದೆ. ಈ ಸುದ್ದಿಗೆ ಸಂಬಂಧಿಸಿದಂತೆ ಸಾಧಕ ಬಾಧಕ ಸೇರಿದಂತೆ ಯಾವುದೇ ಘಟನೆಗಳಿಗೆ ಟಿವಿ9 ಕನ್ನಡ ಡಿಜಿಟಲ್ ಬಾಧ್ಯತೆ ಹೊಂದಿರುವುದಿಲ್ಲ)
ಇದನ್ನೂ ಓದಿ:
ದಿಢೀರ್ ದೆಹಲಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ; ಜೆಪಿ ನಡ್ಡಾ ಭೇಟಿ ನಂತರ ಸಚಿವರ ಪಟ್ಟಿ ಅಂತಿಮ
(CM Basavaraja Bommai does not serve full time and bearded man is the next CM says a prophecy)