ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ; ಸಿದ್ದರಾಮಯ್ಯ ಹೇಳಿಕೆಗೆ ಜನ ಉತ್ತರ ಕೊಡುತ್ತಾರೆ -ಸಿಎಂ ಬೊಮ್ಮಾಯಿ

| Updated By: ಆಯೇಷಾ ಬಾನು

Updated on: Jan 04, 2023 | 1:19 PM

ಸಿದ್ದರಾಮಯ್ಯ ಹಿಂದೆ ಮನಮೋಹನ ಸಿಂಗ್ ಪ್ರಧಾನಿ ಇದ್ದಾಗ ರಾಜ್ಯಕ್ಕೆ ನಯಾಪೈಸೆ ತರಲು ಆಗಲಿಲ್ಲ. ರಾಜ್ಯಕ್ಕೆ ಅವರ ಕೊಡುಗೆ ಏನಿಲ್ಲ.

ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ; ಸಿದ್ದರಾಮಯ್ಯ ಹೇಳಿಕೆಗೆ ಜನ ಉತ್ತರ ಕೊಡುತ್ತಾರೆ -ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಒಳ್ಳಾರಿ: ಸಿಎಂರನ್ನ ಸಿದ್ದರಾಮಯ್ಯ ನಾಯಿಮರಿಗೆ ಹೋಲಿಸಿದ ವಿಚಾರಕ್ಕೆ ಸಂಬಂಧಿಸಿ ಬಳ್ಳಾರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ(Basavaraj Bommai) ತಿರುಗೇಟು ನೀಡಿದ್ದಾರೆ. ಇದು ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ರ ವ್ಯಕ್ತಿತ್ವ ತೋರಿಸುತ್ತೆ. ನಾಯಿ ನಿಯತ್ತಿನ ಪ್ರಾಣಿ ಎಂಬುದು ಅವರಿಗೆ ಗೊತ್ತಿಲ್ಲ ಅನಿಸುತ್ತೆ. ಸಿದ್ದರಾಮಯ್ಯ ಹೇಳಿಕೆಗೆ ನಾಡಿನ ಜನರು ಉತ್ತರ ಕೊಡುತ್ತಾರೆ. ನಾನು ನಿಯತ್ತಾಗಿ ಸರ್ಕಾರ ನಡೆಸುತ್ತಿದ್ದೇನೆ. ಸಿದ್ದರಾಮಯ್ಯ ರೀತಿ ಸುಳ್ಳು ಹೇಳಿಕೊಂಡು ನಾನು ತಿರುಗುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಸಿದ್ಧರಾಮಯ್ಯಗೆ ತಿರುಗೇಟು ನೀಡಿದ್ದಾರೆ.

ಮಾಜಿ ಸಿಎಂ‌ ಸಿದ್ದರಾಮಯ್ಯ ಅವರ ಹಾಗೆ ನಾನು ಸಮಾಜ ಒಡೆಯುವ ಕೆಲಸ ಮಾಡುವುದಿಲ್ಲ. ಸೌಭಾಗ್ಯ ಕೊಡುತ್ತೇವೆ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ತರಹ ನಾನು ರಾಜ್ಯಕ್ಕೆ ದೌರ್ಭಾಗ್ಯ ನೀಡಿಲ್ಲ . ಈ ರೀತಿಯ ಕೆಲಸ ನಾವು ಮಾಡಿಲ್ಲ ಎಂದರು.

ರಾಜಕೀಯವಾಗಿ ಹೇಳಿಕೆ ಸಲ್ಲದು

ಬಹಿರಂಗ ಚರ್ಚೆಗೆ ಸಿದ್ದರಾಮಯ್ಯ ಆಹ್ವಾನ ನೀಡಿರುವುದಕ್ಕೆ ಸಿಎಂ ತಿರುಗೇಟು ನೀಡಿದ್ದಾರೆ. ವಿಧಾನಸಭೆಗಿಂತ ದೊಡ್ಡ ವೇದಿಕೆ ಯಾವುದೂ ಇಲ್ಲ. 15 ದಿನಗಳ ಕಾಲ ಸದನ ನಡೆಯಿತು. ಅದಕ್ಕಿಂತಲೂ ಹಿಂದೆಯೂ ನಡೆದಿದೆ. ವೇದಿಕೆ ಇದ್ದಾಗ ಚರ್ಚೆ ಮಾಡದೆ, ಹೊರಗೆ ರಾಜಕೀಯವಾಗಿ ಹೇಳಿಕೆ ನೀಡುತ್ತಾರೆ. ಜನವರಿ ಫೆಬ್ರವರಿ ಯಲ್ಲಿ ಪುನಃ ಅಧಿವೇಶನ ನಡೆಯಲಿದ್ದು, ಚರ್ಚೆ ಮಾಡೋಣ. ವಿಧಾನಮಂಡಲಕ್ಕಿಂತ ಪವಿತ್ರ ವೇದಿಕೆ ಎಲ್ಲಿದೆ ಎಂದು ಸಿದ್ದರಾಮಯ್ಯಗೆ ಸಿಎಂ‌ ಸವಾಲು ಎಸೆದಿದ್ದಾರೆ.

ಪ್ರಧಾನಿ ಮೋದಿ ಕಾಮಧೇನು 

ಸಿದ್ದರಾಮಯ್ಯ ಹಿಂದೆ ಅತ್ಯಂತ ಸಭ್ಯ ಪ್ರಧಾನಿ ಮನಮೋಹನ ಸಿಂಗ್ ಎದುರಿಗೆ ಹೆದರಿಕೊಂಡು ಅವರ ಬಳಿ ಹೋಗಲೇ ಇಲ್ಲ. ರಾಜ್ಯಕ್ಕೆ ನಯಾಪೈಸೆ ತರಲು ಆಗಲಿಲ್ಲ. ಬಹಳ ರಾಜ್ಯಕ್ಕೆ ಅವರು ಕೊಡುಗೆ ಏನೂ ಇಲ್ಲ ಎಂದರು. ಮೋದಿಯವರು ಪ್ರಧಾನಿಯಾದ ನಂತರ ವಿಶೇಷವಾದ ಕೊಡುಗೆಗಳನ್ನು ರಾಜ್ಯಕ್ಕೆ ನೀಡಿದ್ದಾರೆ. ಮೋದಿಯವರು ರಾಜ್ಯಕ್ಕೆ 6 ಸಾವಿರ ಕಿ.ಮೀ ಹೆದ್ದಾರಿ ಕೊಡುಗೆ ನೀಡಿದ್ದಾರೆ. ಸ್ವತಂತ್ರ ಬಂದ ನಂತರ ಒಂದು ರಾಜ್ಯಕ್ಕೆ ಇಷ್ಟು ದೊಡ್ಡ ಕೊಡುಗೆ ಬಂದಿರುವುದು ಒಂದು ದಾಖಲೆ. ಬೆಂಗಳೂರು ಮೈಸೂರು ಹೆದ್ದಾರಿ ಯೋಜನೆ, ಮಂಗಳೂರು ಕಾರವಾರ ಬಂದರು, ಕಳಸಾ ಬಂಡೂರಿ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಬರುವ ದಿನಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ, ರಾಷ್ಟ್ರೀಯ ಯೋಜನೆಯಾಗಿ ಘೋಷಿಸಿ ಅನುದಾನ ನೀಡಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಮಹಾನಗರಗಳಿಗೆ ಸ್ಮಾರ್ಟ್ ಸಿಟಿ ಯೋಜನೆ ನೀಡಿದ್ದಾರೆ. ಕಾಂಗ್ರೆಸ್ ಅವರ ಕಾಲದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಇರಲಿಲ್ಲ. ಇಂಥ ಮಹತ್ವವನ್ನು ಯೋಜನೆಗಳನ್ನು ಪ್ರಧಾನಿ ಮೋದಿಯವರು ನೀಡಿದ್ದಾರೆ. ಮೋದಿ ಕೊಡುವ ಕಾಮಧೇನು. ರಾಜಕೀಯ ಪ್ರೇರಿತ ಹೇಳಿಕೆಗಳನ್ನ ಕೊಡುವುದು ಸಿದ್ದರಾಮಯ್ಯ ರೂಢಿ ಮಾಡಿಕೊಂಡಿದ್ದಾರೆ. ಅವರು ತಲೆಬುಡ ಇಲ್ಲದ ಹೇಳಿಕೆಗಳನ್ನು ನೀಡುತ್ತಾರೆ ಎಂದು ಸಿಎಂ ಸಿದ್ದರಾಮಯ್ಯಗೆ ಟಾಂಗ್ ನೀಡಿದ್ದಾರೆ.

ಇದನ್ನೂ ಓದಿ: ಮೋದಿ ಮುಂದೆ ಬೊಮ್ಮಾಯಿ ನಾಯಿಮರಿ ರೀತಿ ಇರುತ್ತಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಡಿಕೆ ಶಿವಕುಮಾರ್​ ಪ್ರತಿಕ್ರಿಯಿಸಿದ್ದು ಹೀಗೆ

ವಿಜಯನಗರ ಜಿಲ್ಲೆ ಹಗರಿಬೊಮ್ಮನ ಹಳ್ಳಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ,ನಾನು ಮುಖ್ಯಮಂತ್ರಿ ಆಗಿದ್ದಾಗ ಪಕ್ಷಾತೀತವಾಗಿ ಅನುದಾನ ನೀಡಿದ್ದೆ. ಬಿಜೆಪಿಯವರು ಒಂದು ಭರವಸೆಯನ್ನಾದರೂ ಈಡೇರಿಸಿದ್ದಾರಾ? ಸಿಎಂ ಬೊಮ್ಮಾಯಿಗೆ ಧೈರ್ಯವಿದ್ರೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲಿ. ಕಾಂಗ್ರೆಸ್​ನವರ ಧಮ್​ ಬಗ್ಗೆ ಸಿಎಂ ಬೊಮ್ಮಾಯಿ ಪ್ರಶ್ನೆ ಮಾಡ್ತಾರೆ. ಆದ್ರೆ ಮೋದಿ ಮುಂದೆ ಸಿಎಂ ಬೊಮ್ಮಾಯಿ ನಾಯಿಯಂತೆ ಇರುತ್ತಾರೆ. ಬೊಮ್ಮಾಯಿ ಅವರೇ ಧಮ್, ತಾಕತ್ತಿದ್ರೆ ಕೇಂದ್ರದಿಂದ ಅನುದಾನ ತನ್ನಿ ಎಂದು ಗುಡುಗಿದ್ದರು. ಸದ್ಯ ಈ ಹೇಳಿಕೆಗೆ ಬಜೆಪಿ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟರೆ ರೌಡಿಗಳ ರಾಜ್ಯ ಆಗಲಿದೆ

ಇನ್ನು ಸಿದ್ದರಾಮಯ್ಯ ಹೇಳಿಕೆಗೆ  ಶಾಸಕ ರೇಣುಕಾಚಾರ್ಯ ತಿರುಗೇಟು​ ನೀಡಿದ್ದಾರೆ. ಮೋದಿ ಬಗ್ಗೆ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ಕೊಡ್ತಿದ್ದಾರೆ. ಮನಮೋಹನ್ ಸಿಂಗ್ ಹತ್ತು ವರ್ಷ ಪ್ರಧಾನಮಂತ್ರಿ ಆಗಿದ್ದರು. ಸೋನಿಯಾ ಗಾಂಧಿ, ರಾಹುಲ್, ಪ್ರಿಯಾಂಕಾ ಕಂಡ್ರೆ ಹೆದರುತ್ತಿದ್ರು. ಡಾ.ಮನಮೋಹನ್ ಸಿಂಗ್​ಗೆ ಅವಮಾನ ಮಾಡಿದ್ದು ಕಾಂಗ್ರೆಸ್​. ಬೊಮ್ಮಾಯಿ ಮುತ್ಸದ್ಧಿ ರಾಜಕಾರಣಿ, ಮೋದಿಗೆ ಗೌರವ ಕೊಡ್ತಾರೆ. ಮೋದಿ, ಸ್ವಾಮೀಜಿಗಳನ್ನು ಕಂಡರೆ ಶಿರಬಾಗಿ ಗೌರವ ಕೊಡುತ್ತಾರೆ. ಸಿದ್ದರಾಮಯ್ಯ ಅವರೇ ನೀವು ಏನು ಬೇಕಾದರೂ ಹೇಳಿಕೆ ಕೊಡಿ. ಈ ಹಿಂದೆ ಬಿ.ಎಸ್​.ಯಡಿಯೂರಪ್ಪಗೂ ಇದೇ ಪದ ಬಳಸುತ್ತಿದ್ರಿ. ಈಗ ಸಿಎಂ ಬೊಮ್ಮಾಯಿಗೂ ಇಂತಹ ಪದ ಬಳಕೆ ಮಾಡ್ತಿದ್ದೀರಾ?ಇದು ಸಿದ್ದರಾಮಯ್ಯ ಸಂಸ್ಕೃತಿ ತೋರಿಸುತ್ತದೆ. ಕಾಂಗ್ರೆಸ್​ನವರದ್ದು ಯಾವ ರೀತಿಯ ಸಂಸ್ಕೃತಿ ಅಂತಾ ಗೊತ್ತಿದೆ‌. ಕಾಂಗ್ರೆಸ್‌ಗೆ ಅಧಿಕಾರ ಕೊಟ್ಟರೆ ರೌಡಿಗಳ ರಾಜ್ಯ ಆಗಲಿದೆ. ಬಿಜೆಪಿ ಹಿಂದುತ್ವ, ಸನಾತನ ಹಿಂದುತ್ವ ಅಳವಡಿಸಿಕೊಂಡಿದೆ. ಕಾಂಗ್ರೆಸ್ ನರಗಳಿಲ್ಲದ ಪಾರ್ಟಿ ಎಂದು ಬೆಂಗಳೂರಿನಲ್ಲಿ ಬಿಜೆಪಿ ಶಾಸಕ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:19 pm, Wed, 4 January 23