ಉಪ ಚುನಾವಣೆ ಹಿನ್ನಲೆ: ಸಂಡೂರಿಗೆ ಬಂಪರ್‌ ಕೊಡುಗೆ ಘೋಷಿಸಿದ ಸಿದ್ದರಾಮಯ್ಯ..!

ಸಂಡೂರು ಕ್ಷೇತ್ರದ ಶಾಸಕರಾಗಿದ್ದ ತುಕಾರಾಂ ಅವರು ಇದೀಗ ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದೆ. ಇದರ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರು ಕ್ಷೇತ್ರಕ್ಕೆ ಬಂಪರ್ ಕೊಡುಗೆಗಳನ್ನು ಘೋಷಣೆ ಮಾಡಿದ್ದಾರೆ.

ಉಪ ಚುನಾವಣೆ ಹಿನ್ನಲೆ: ಸಂಡೂರಿಗೆ ಬಂಪರ್‌ ಕೊಡುಗೆ ಘೋಷಿಸಿದ ಸಿದ್ದರಾಮಯ್ಯ..!
ಸಿದ್ದರಾಮಯ್ಯ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 14, 2024 | 6:34 PM

ಬಳ್ಳಾರಿ, (ಅಕ್ಟೋಬರ್ 14): ಶೀಘ್ರದಲ್ಲೇ ಉಪ ಚುನಾವಣೆಗೆ ಸಾಕ್ಷಿಯಾಗಲಿರುವ ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಬಂಪರ್‌ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಲು ಹೊರಟಿದೆ. ಕುಡಿಯುವ ನೀರು, ಸೂಪರ್ ಮಲ್ಟಿ ಸ್ಪೆಷಾಲಿಟಿ , ವಿವಿಧ ಜಾತಿಗಳ ಸಮುದಾಯ ಭವನ, ಬಸ್ ನಿಲ್ದಾಣ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಇಂದು(ಅಕ್ಟೋಬರ್ 14) ಸಂಡೂರಿನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಘೋಷಿಸಿದ್ದಾರೆ.

ಸಂಡೂರಿಗೆ ಸಿಎಂ ಘೋಷಿಸಿದ್ದು ಏನೇನು?

  • ಸಂಡೂರು ಕ್ಷೇತ್ರದ 58 ಹಳ್ಳಿಗಳಿಗೆ160 ಕೋಟಿ ರೂಪಾಯಿ ವೆಚ್ಚದಲ್ಲಿ ಬಹುಗ್ರಾಮ ಯೋಜನೆ.
  • ನಾರಿಹಳ್ಳ ಜಲಾಶಯದಿಂದ ಸುಧಾರಿತ ನೀರುಸರಬರಾಜು ಯೋಜನೆಗೆ 54.45 ಕೋಟಿ ರೂಪಾಯಿ.
  • 07.50 ಕೋಟಿ ವೆಚ್ಚದಲ್ಲಿ ಹಿಂದುಳಿದ 13 ಸಮುದಾಯಗಳಿಗೆ ಸಮುದಾಯ‌ಭವನ ನಿರ್ಮಾಣ.
  • (ವೀರಶೈವ‌ ಲಿಂಗಾಯತ, ವಿಶ್ವಕರ್ಮ,ಕುಂಬಾರ, ಮೇದಾರ,ಗೊಲ್ಲ,ಕುರುಬ,ಮಡಿವಾಳ ಸೇರಿದಂತೆ ವಿವಿಧ ಸಮುದಾಯಗಳಿಗೆ ಸಮುದಾಯ ಭವನ)
  • 180 ಕೋಟಿ‌ವೆಚ್ಚದಲ್ಲಿ ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ‌ಘೋಷಣೆ.
  • 30 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಬಸ್ ನಿಲ್ದಾಣ.

ಈ ಎಲ್ಲಾ ಯೋಜೆನಗಳನ್ನು ಘೋಷಿಸಿ ಮಾತನಾಡಿದ ಸಿಎಂ, ಸಂಡೂರಿನಲ್ಲಿ 12 ಸಾವಿರ ಮನೆಗಳನ್ನು ಕಟ್ಟಿ ಕ್ಷೇತ್ರದ ಜನರಿಗೆ ಹಂಚಿಕೆ ಮಾಡಿರುವುದರ ಶ್ರೇಯಸ್ಸು ಸಂತೋಷ್ ಲಾಡ್- ಈ.ತುಕಾರಾಮ್ ಜೋಡಿಗೆ ಸಲ್ಲಬೇಕು. ನನ್ನ ವಿರುದ್ಧ ಷಡ್ಯಂತ್ರ, ಪಿತೂರಿ ನಡೆಸುತ್ತಿರುವ ಬಿಜೆಪಿಯನ್ನು ಉಪ ಚುನಾವಣೆಯಲ್ಲಿ ಸೋಲಿಸಿ ಪಾಠ ಕಲಿಸಿ ಎಂದು ಸಿಎಂ ಕರೆ ನೀಡಿದರು.

ಈ.ತುಕಾರಾಮ್ ಅವರು ನನ್ನ ಬಲವಂತಕ್ಕೆ, ಪಕ್ಷದ ಮಾತಿಗೆ ಬೆಲೆ ಕೊಟ್ಟು ಲೋಕಸಭೆಗೆ ಸ್ಪರ್ಧಿಸಿದರು. ಈ.ತುಕರಾಮ್ ಅವರು ಸಂಡೂರು ಜನತೆಯ ಮೇಲೆ ಬಹಳ ಪ್ರೀತಿ, ವಿಶ್ವಾಸ ಇಟ್ಟುಕೊಂಡಿದ್ದಾರೆ. ಈ.ತುಕಾರಾಮ್ ಅವರಂತಹ ಕಾಯಕ ನಾಯಕ ನಿಮಗೆ ಬೇರೆಲ್ಲೂ ಸಿಗುವುದಿಲ್ಲ. ಹೀಗಾಗಿ ಸಂಡೂರು ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ನಿಮ್ಮ ಆಶೀರ್ವಾದ ಹೀಗೇ ಮುಂದುವರೆಯಲಿ ಎಂದು ಮನವಿ ಮಾಡಿದರು.

ಸಂಡೂರಿನ ಜನತೆಯೂ ಸೇರಿ ರಾಜ್ಯದ ಜನತೆಗೆ ಐದೈದು ಗ್ಯಾರಂಟಿಗಳನ್ನು 5600000 ಕೋಟಿ ರೂ. ವೆಚ್ಚದಲ್ಲಿ ಯಶಸ್ವಿಯಾಗಿ ಜಾರಿ ಮಾಡಿದ್ದೇವೆ. ಬಿಜೆಪಿ ಯವರು ಸುಳ್ಳುಗಳನ್ನು ಎರಚುತ್ತಾ ಕುಳಿತಿದೆ. ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎಂದು ಬಿಜೆಪಿಯ ಪೆದ್ದ ಶಿಖಾಮಣಿಗಳು ಸುಳ್ಳುಗಳನ್ನು ಎರಚುತ್ತಾ ಕುಳಿತಿದ್ದಾರೆ. ಹಾಗಿದ್ರೆ ಬರೀ ಸಂಡೂರಿನ ಅಭಿವೃದ್ಧಿಗೆ ಕಳೆದ ಒಂದು ವರ್ಷದಲ್ಲಿ ಈ.ತುಕಾರಾಮ್ ಅವರು 1200 ಕೋಟಿ ರೂಪಾಯಿ ಅನುದಾನ ತರಲು ಸಾಧ್ಯವಾಗುತ್ತಿತ್ತೇ ಎಂದು ಪ್ರಶ್ನಿಸಿದರು.

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್