ಬಳ್ಳಾರಿ: ತೋಟದ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

| Updated By: ಆಯೇಷಾ ಬಾನು

Updated on: Feb 25, 2022 | 11:14 AM

ಜಮೀನಿನ ತೋಟದ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮಯ್ಯ, ಜಯಮ್ಮ ಮೃತ ದಂಪತಿ.

ಬಳ್ಳಾರಿ: ತೋಟದ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ತೋಟದ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
Follow us on

ಬಳ್ಳಾರಿ: ದಂಪತಿಗಳಿಬ್ಬರು ನೇಣು ಬಿಗಿದುಕೂಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿಯ ಚಳ್ಳಕುರ್ಕಿ ಬಳಿಯ ಜಮೀನಿನ ತೋಟದ ಮನೆಯ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಮಯ್ಯ, ಜಯಮ್ಮ ಮೃತ ದಂಪತಿ. ಘಟನಾ ಸ್ಥಳಕ್ಕೆ ಪಿಡಿ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಪಿಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್ ನಿಯಂತ್ರಣ ತಪ್ಪಿ ಮೂವರು ಸಾವು, ಓರ್ವರ ಸ್ಥಿತಿ ಚಿಂತಾಜನಕ
ಬೆಳಗಾವಿ: ಸಂಕೇಶ್ವರ ಹೊರವಲಯದಲ್ಲಿ ನಿಯಂತ್ರಣ ತಪ್ಪಿ ಬೈಕ್‌ನಿಂದ ಬಿದ್ದು ಮೂವರು ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಸಂಕೇಶ್ವರ ಪಟ್ಟಣ ಹೊರವಲಯದಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮಲಿಕ್ ಜಮಾದಾರ್ ಎಂಬ ಯುವಕನ ಸ್ಥಿತಿ ಚಿಂತಾಜನಕವಾಗಿದೆ. ಸಂಕೇಶ್ವರದ ಬಸವರಾಜ ಮಾಳಿ(23), ಪ್ರವೀಣ್ ಸನದಿ(24), ಮೆಹಬೂಬಾ ಶೇಗಡಿ(23) ಮೃತ ದುರ್ದೈವಿಗಳು. ಗಾಯಾಳುವಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಒಂದೇ ಬೈಕಿನಲ್ಲಿ ನಾಲ್ಕು ಜನ ಯುವಕರು ಪ್ರಯಾಣಿಸುತ್ತಿದ್ದರು. ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆನ್‌ಲೈನ್ ಮೂಲಕ ವಂಚಿಸುತ್ತಿದ್ದವರ ಬ್ಯಾಂಕ್ ಖಾತೆ ಫ್ರೀಜ್
ಮೈಸೂರು: ಮೈಸೂರು ಸೈಬರ್ ಕ್ರೈಂ ಪೊಲೀಸರು(Mysuru Cyber Crime Police) ಕಾರ್ಯಾಚರಣೆ ನಡೆಸಿ ಆನ್‌ಲೈನ್ ಮೂಲಕ ವಂಚಿಸುತ್ತಿದ್ದವರ(Online Fraud) ಬ್ಯಾಂಕ್ ಖಾತೆ ಫ್ರೀಜ್ ಮಾಡಿದ್ದಾರೆ. ಮೈಸೂರು ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ 4 ಪ್ರಕರಣಗಳು ದಾಖಲಾಗಿದ್ದವು. ಇದರ ಜಾಡು ಹಿಡಿದ ಪೊಲೀಸರು ಪ್ರಕರಣಗಳನ್ನು ಭೇದಿಸಿ ಆನ್‌ಲೈನ್ ಮೂಲಕ ವಂಚಿಸುತ್ತಿದ್ದವರ ಬ್ಯಾಂಕ್ ಖಾತೆ ಫ್ರೀಜ್ ಮಾಡಿದ್ದಾರೆ.

ಅಲ್ಲದೆ ಆನ್ ಲೈನ್ನಿಂದ ವಂಚನೆಗೊಳಗಾಗಿದ್ದವರಿಗೆ ಹಣ ಮರುಪಾವತಿ ಮಾಡಿದ್ದಾರೆ. ಒಟ್ಟು 6,43,297 ರೂ ಹಣ ಮರುಪಾವತಿ ಮಾಡಲಾಗಿದೆ. ವಿಜಯನಗರ ನಿವಾಸಿಗಳಾದ ಚಂದಾಲಾಲ್ ಮತ್ತು ಸುನೀತಾಗೆ ಕೆವೈಸಿ ಒಟಿಪಿ ಪಡೆದು ಒಟ್ಟು 4,49,100 ರೂಪಾಯಿ ವಂಚನೆ ಮಾಡಲಾಗಿತ್ತು. ವಿದ್ಯಾರಣ್ಯಪುರಂ ಚಂದ್ರು ಅವರಿಗೆ 1,69,199 ರೂಪಾಯಿ ವಂಚನೆ ಆಗಿದೆ. ದಟ್ಟಗಳ್ಳಿಯ ರವಿ ಹೆಬ್ಬಾರ್ ಅವರಿಗೆ 22,999 ರೂಪಾಯಿ ವಂಚನೆ. ಹಿನಕಲ್ ನಿವಾಸಿ ಪ್ರೇಮ್ ದಾಸ್ ಅವರಿಗೆ 1,999 ರೂಪಾಯಿ ವಂಚನೆ ಆಗಿತ್ತು. ಸದ್ಯ ಈ ನಾಲ್ಕು ಪ್ರಕರಣಗಳನ್ನು ಬೇದಿಸಿದ ಪೊಲೀಸರು, ವಂಚನೆಗೊಳಗಾಗಿದ್ದವರಿಗೆ ಹಣ ಮರುಪಾವತಿ ಮಾಡಿದ್ದಾರೆ.

ಇದನ್ನೂ ಓದಿ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ವಿವಾದ; ಕಾಲೇಜು ನಡೆ ವಿರೋಧಿಸಿ ಸಿಎಂಗೆ ಶಿರೋಮಣಿ ಗುರುದ್ವಾರ ಸಮಿತಿ ಪತ್ರ

Ukraine Crisis: ಕೈವ್​ನಲ್ಲಿ ಇಂದು ಮುಂಜಾನೆ ಭೀಕರ ಸ್ಫೋಟದ ಸದ್ದು; ಈ ಯುದ್ಧದಲ್ಲಿ ನಾವು ಏಕಾಂಗಿ ಎಂದ ಉಕ್ರೇನ್ ಅಧ್ಯಕ್ಷ

Published On - 10:12 am, Fri, 25 February 22