ಬಳ್ಳಾರಿ: ಇಂದು ಮಾಜಿ ಸಚಿವ ಜನಾರ್ದನ ರೆಡ್ಡಿ(Janardhan Reddy) ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಳ್ಳಾರಿಯಲ್ಲಿ ಕುಟುಂಬಸ್ಥರೊಂದಿಗೆ ಸೇರಿ ಅದ್ಧೂರಿಯಾಗಿ ಹುಟ್ಟು ಹಬ್ಬ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಜನಾರ್ದನರೆಡ್ಡಿ ಹುಟ್ಟುಹಬ್ಬದಲ್ಲಿ ಕೊವಿಡ್ ರೂಲ್ಸ್ ಬ್ರೇಕ್ ಆಗಿದೆ.
ಹುಟ್ಟು ಹಬ್ಬ ಹಿನ್ನಲೆ ಬಳ್ಳಾರಿಯ ಕನಕದುರ್ಗಮ್ಮ ದೇವಸ್ಥಾನಕ್ಕೆ ಜನಾರ್ದನ ರೆಡ್ಡಿ ಆಗಮಿಸಿದ್ದು ಈ ವೇಳೆ ನೂಕು ನುಗ್ಗಲು ಕಂಡು ಬಂದಿದೆ. ಅಲ್ಲದೆ ಆಪ್ತ ಗೆಳೆಯನ ಹುಟ್ಟಹಬ್ಬಕ್ಕೆ ಸಚಿವ ಬಿ.ಶ್ರೀರಾಮುಲು ಕೂಡ ಮಾಸ್ಕ್ ಧರಿಸದೆ ದೇವಾಲಯಕ್ಕೆ ಆಗಮಿಸಿದ್ದಾರೆ. ಅಭಿಮಾನಿಗಳು ಮಾಜಿ ಸಚಿವ ರೆಡ್ಡಿಗೆ 55 ಬೆಳ್ಳಿ ನಾಣ್ಯ, 55 ಬಂಗಾರದ ನಾಣ್ಯಗಳಿಂದ ತುಲಾಭಾರ ನೆರವೇರಿಸಿದ್ದಾರೆ.
ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿರುವ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಬಳ್ಳಾರಿಗೆ ತೆರಳಲು ಸರ್ವೋಚ್ಛ ನ್ಯಾಯಾಲಯ (Supreme Court) ಷರತ್ತುಬದ್ಧ ಅನುಮತಿ ನೀಡಿದೆ. ಇಂದು ತಮ್ಮ 55 ನೇ ವರ್ಷದ ಹುಟ್ಟುಹಬ್ಬವನ್ನು ಕುಟುಂಬಸ್ಥರು ಮತ್ತು ಅಭಿಮಾನಿಗಳ ಜೊತೆ ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಆದ್ರೆ ಹುಟ್ಟುಹಬ್ಬಕ್ಕೆ ಶುಭಾಶಯ ಹೇಳಲು ಬಂದಿರುವ ಕೆಲ ಅಭಿಮಾನಿಗಳು ಮಾಸ್ ಧರಿಸದೆ ಅಂತರ ಕಾಪಾಡದೇ ಕೊರೊನಾ ರೂಲ್ಸ್ ಉಲ್ಲಂಘಿಸಿದ್ದಾರೆ.
ಇದನ್ನೂ ಓದಿ: ಬಣ್ಣದ ಲೋಕಕ್ಕೆ ಜನಾರ್ದನ ರೆಡ್ಡಿ ಮಗ ಕಿರೀಟಿ ರೆಡ್ಡಿ ಪ್ರವೇಶ