AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾರ್​ಗಳಲ್ಲಿ ಸ್ಮೋಕಿಂಗ್ ಝೋನ್​ ಕಡ್ಡಾಯ ಸ್ಥಾಪನೆಗೆ ಜಿಲ್ಲಾಧಿಕಾರಿ ಸೂಚನೆ

ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ಧೂಮಪಾನ ನಿಗದಿಪಡಿಸಿದ ಪ್ರದೇಶಗಳನ್ನು ಸ್ಥಾಪಿಸಲು ಕಟ್ಟುನಿಟ್ಟಿನ ಸೂಚನೆ ನೀಡಿದಾಗಿದೆ. ಒಂದು ವೇಳೆ ನಿರ್ಲಕ್ಷ್ಯ ಮುಂದುವರಿಸಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಬಾರ್​ಗಳಲ್ಲಿ ಸ್ಮೋಕಿಂಗ್ ಝೋನ್​ ಕಡ್ಡಾಯ ಸ್ಥಾಪನೆಗೆ ಜಿಲ್ಲಾಧಿಕಾರಿ ಸೂಚನೆ
ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 19, 2023 | 9:36 PM

Share

ಬಳ್ಳಾರಿ, ಜುಲೈ 19: ಜಿಲ್ಲೆಯಲ್ಲಿರುವ 30 ಆಸನಗಳ ಮೇಲ್ಪಟ್ಟ ಬಾರ್​ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ನಾಮಫಲಕ ಅಳವಡಿಸುವುದರ ಜೊತೆಗೆ ಎಲ್ಲಿ ಅಗತ್ಯವಿದೆಯೋ ಅಲ್ಲಿ ಧೂಮಪಾನ ನಿಗದಿಪಡಿಸಿದ ಪ್ರದೇಶ (smoking zones) ಗಳನ್ನು ಸ್ಥಾಪಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ಕಟ್ಟುನಿಟ್ಟಿನ ಸೂಚನೆ ನೀಡಿದಾಗಿಯೂ ನಿರ್ಲಕ್ಷ್ಯ ಮುಂದುವರಿಸಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.

ಜಿಲ್ಲೆಯಲ್ಲಿ 30 ಆಸನಗಳ ಮೇಲ್ಪಟ್ಟ 109 ಬಾರ್ ಮತ್ತು ರೆಸ್ಟೋರೆಂಟ್‍ಗಳಿದ್ದು, ಅದರಲ್ಲಿ 36 ಬಾರ್ ಮತ್ತು ರೆಸ್ಟೋರೆಂಟ್‍ಗಳು ಕೋಟ್ಪಾ ಕಾಯ್ದೆಯ ಅನುಸಾರ ಧೂಮಪಾನ ಪ್ರದೇಶಗಳನ್ನು ಸ್ಥಾಪಿಸಲಾಗಿದೆ ಎಂದು ಅಬಕಾರಿ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.

ಇದನ್ನೂ ಓದಿ: ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ: ಭಾರತೀಯ ಶೆರ್ಪಾ ಅಮಿತಾಬ್ ಕಾಂತ್

ಅಂಗಡಿ, ಹೋಟಲ್, ಬೇಕರಿ, ಲಾಡ್ಜ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಇತರೆ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕೋಟ್ಪಾ ಕಾಯ್ದೆಗೆ ಸಂಬಂಧಿಸಿದ ಸೆಕ್ಷನ್-4 ಮತ್ತು ಸೆಕ್ಷನ್-6ಎ ನಾಮಫಲಕಗಳನ್ನು ಹಾಕಬೇಕು; ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು, ನಾಮಫಲಕ ಹಾಕದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿ ಎಂದು ಅಪರ ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲೆಯಲ್ಲಿ ಬರುವ ಒಟ್ಟು 1269 ಶಾಲೆಗಳಲ್ಲಿ 1222 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳನ್ನಾಗಿ ಘೋಷಣೆ ಮಾಡಲಾಗಿದ್ದು, ಬಾಕಿ ಉಳಿದ 47 ಶಾಲೆಗಳನ್ನು ತಂಬಾಕು ಮುಕ್ತ ಶಾಲೆಗಳಾಗಿ ಘೋಷಿಸಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿರುವ ಆಹಾರಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ 2903 ಪರವಾನಿಗೆ ಪಡೆದ ಅಂಗಡಿ, ಬೇಕರಿ, ಹೋಟೆಲ್ ಗಳಿದ್ದು, ಅವುಗಳಲ್ಲಿ 1407 ಸೆಕ್ಷನ್ – 4 ನಾಮಫಲಕ ಅಳವಡಿಸಲಾಗಿದೆ ಹಾಗೂ ಬಾಕಿ ಉಳಿದ 686 ಸ್ಥಳಗಳಲ್ಲಿ ನಾಮಫಲಕ ಅಳವಡಿಸಲಾಗುವುದು ಎಂದು ಆಹಾರ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.

ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ 

ಜಿಲ್ಲೆಯಲ್ಲಿರುವ ಎಲ್ಲಾ ಗ್ರಾಪಂಗಳಲ್ಲಿ ಹಾಗೂ ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಬೇಕು ಎಂದು ಜಿಪಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅವರು, ಕೋಟ್ಪಾ-2003ರ ಸೆಕ್ಷನ್ 4,5,6ಎ ಮತ್ತು 7ರ ಅನುಷ್ಠಾನಗೊಳಿಸಬೇಕು. ಹಾಗೂ ಕಾರ್ಯಾಚರಣೆ ನಡೆಸಿ ದಂಡ ಸಂಗ್ರಹಿಸುವಂತೆ ಅವರು ಸೂಚಿಸಿದರು.

ಇದನ್ನೂ ಓದಿ: 100 ವರ್ಷದ ಇತಿಹಾಸ ಹೊಂದಿರುವ ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ‌ ಸಚಿವ ಆನಂದ್ ಸಿಂಗ್ ರಾಜೀನಾಮೆ

ಈ ಬಾರಿಯ ಜಿಲ್ಲೆಯ ತಂಬಾಕು ಮುಕ್ತ ಗ್ರಾಮವನ್ನು ಕುರುಗೋಡು ತಾಲೂಕಿನ ‘ದಮ್ಮೂರು’ ಗ್ರಾಮವಾಗಿದೆ ಎಂದು ಎಡಿಸಿ ಅವರು ಹೇಳಿದರು. ಕೋಟ್ಪಾ ಕಾಯ್ದೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆಸುವ ಕಾರ್ಯಾಚರಣೆಗಳಲ್ಲಿ ಸಮಿತಿ ಸದಸ್ಯರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಪಾಲ್ಗೊಳ್ಳಬೇಕು. ಕೋಟ್ಪಾ ಕಾಯ್ದೆಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.

ಇದೇ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಕುರಿತು ಪೋಸ್ಟರ್​ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜನಾರ್ಧನ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ಜಿಪಂ ಯೋಜನಾ ನಿರ್ದೇಶಕ ಪ್ರಮೋದ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 pm, Wed, 19 July 23

ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?