ಕುಡಿದ ಮತ್ತಿನಲ್ಲಿ ಶಾಸಕರ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ಯುವಕ

| Updated By: ವಿವೇಕ ಬಿರಾದಾರ

Updated on: Mar 18, 2025 | 2:50 PM

ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅವರಿಗೆ ವಾಟ್ಸಪ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ತಕ್ಷಣ ಶಾಸಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಾಂಬ್​ ಸಂದೇಶ ಕಳುಹಿಸಿದ ಯುವಕ ಸಂತೋಷನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಸಂತೋಷನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆ ಬಳ್ಳಾರಿಯಲ್ಲಿ ನಡೆದಿದ್ದು, ಶಾಸಕರು ಬೆಂಗಳೂರಿನಲ್ಲಿದ್ದಾಗಲೇ ಬೆದರಿಕೆ ಸಂದೇಶ ಬಂದಿದೆ.

ಕುಡಿದ ಮತ್ತಿನಲ್ಲಿ ಶಾಸಕರ ಕಚೇರಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ ಯುವಕ
ಬಳ್ಳಾರಿ ಶಾಸಕರ ಭವನ
Follow us on

ಬಳ್ಳಾರಿ, ಮಾರ್ಚ್​ 18: ಬಳ್ಳಾರಿ (Ballari) ನಗರ ಶಾಸಕ ಭರತ್ ರೆಡ್ಡಿ (Bharath Reddy) ಅವರಿಗೆ ಬಾಂಬ್​ ಬೆದರಿಕೆ ಸಂದೇಶವೊಂದು ಬಂದಿದೆ. ಕೂಡಲೆ ಶಾಸಕ ಭರತ್​ ರೆಡ್ಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಕಾರ್ಯಪ್ರವೃತ್ತರಾದ ಬಳ್ಳಾರಿಯ ಗಾಂಧಿನಗರ ಪೊಲೀಸರು ಸಂದೇಶ ಕಳುಹಿಸಿರುವ ಸಂತೋಷ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ

ನಿನ್ನೆ (ಮಾ.18) ತಡರಾತ್ರಿ ಕುಡಿದ ಮತ್ತಿನಲ್ಲಿ ಯುವಕ ಸಂತೋಷ, ಶಾಸಕ ಭರತ್ ರೆಡ್ಡಿ ಅವರಿಗೆ, ಬಳ್ಳಾರಿಯಲ್ಲಿರುವ ನಿಮ್ಮ ಕಚೇರಿಯಲ್ಲಿ ಬಾಂಬ್ ಇದೆ ಎಂದು ವಾಟ್ಸಾಪ್ ಸಂದೇಶ ಕಳುಹಿಸಿದ್ದಾನೆ. ಕೂಡಲೇ, ಶಾಸಕ ಭರತ್​ ರೆಡ್ಡಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ತನಿಖೆಗೆ ಇಳಿದ ಗಾಂಧಿನಗರ ಪೊಲೀಸರು ಯುವಕ ಸಂತೋಷನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಯುವಕ ಸಂತೋಷ ಮದ್ಯದ ಅಮಲಿನಲ್ಲಿ ಸಂದೇಶ ಕಳುಹಿಸಿರುವುದು ಧೃಡವಾಗಿದೆ. ಅದರೆ, ಯಾಕೆ ಈ ರೀತಿಯಾಗಿ ಸಂದೇಶ ಕಳುಹಿಸಿದ ಎಂಬುವುದು ಇನ್ನಷ್ಟೇ ತಿಳಿಯಬೇಕಿದೆ.

ರೈಲು ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ಇತ್ತೀಚಿಗೆ ಮೈಸೂರು ರೈಲು ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಬಂದಿತ್ತು. ಅನಾಮಿಕ ವ್ಯಕ್ತಿಯೋರ್ವ ಆಂಧ್ರ ಪ್ರದೇಶದಿಂದ ಕರೆ ಮಾಡಿ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಬಾಂಬ್ ಇಡುವಂತೆ ತಿಳಿಸಿದ್ದಾರೆ ಎಂದು ಹೇಳಿದ್ದನು. ಬೆದರಿಕೆ ಕರೆ ಬರುತ್ತಿದ್ದಂತೆ ಮೈಸೂರು ರೈಲ್ವೆ ನಿಲ್ದಾಣದ ಪೋಲೀಸರು, ರೈಲ್ವೆ ಅಧಿಕಾರಿಗಳು ಮತ್ತು ಬಾಂಬ್ ನಿಷ್ಕ್ರಿಯ ದಳ ಸಿಬ್ಬಂದಿ ಅಲರ್ಟ್ ಆಗಿದ್ದರು. ರೈಲ್ವೆ ಫ್ಲಾಟ್​ಫಾರಂ ಹಾಗೂ ರೈಲುಗಳನ್ನು ಪರಿಶೀಲನೆ ನಡೆಸಿದ್ದರು. ಯಾವುದೇ ಅನುಹಾತ ಸಂಭಿಸಿರಲಿಲ್ಲ.

ಇದನ್ನೂ ಓದಿ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಬೆಂಗಳೂರಿನಲ್ಲಿ ಎಚ್​ಎಸ್​ಬಿಸಿ ಬ್ಯಾಂಕ್​ಗೆ ಬಾಂಬ್ ಬೆದರಿಕೆ
ಬೆಂಗಳೂರಿನ ಮತ್ತೊಂದು ಶಾಲೆಗೆ ಬಾಂಬ್ ಬೆದರಿಕೆ ಸಂದೇಶ​
ಬೆಳಗಾವಿ ಜಿಲ್ಲಾ ಕೋರ್ಟ್​​ನಲ್ಲಿ ಪಾಕ್​ ಪರ ಘೋಷಣೆ ಕೂಗಿದ ಆರೋಪಿ

ಇದನ್ನೂ ಓದಿ: ಬೆಂಗಳೂರಿನ ಸೈನಿಕ ಶಾಲೆಗೆ ಬಾಂಬ್ ಬೆದರಿಕೆ ಇಮೇಲ್: ಬಾಂಬ್ ನಿಷ್ಕ್ರಿಯ ದಳ ದೌಡು!

10 ಪ್ರಕರಣಗಳು ದಾಖಲು

ಬಾಂಬ್​ ಬೆದರಿಕೆ ಕರೆ ಸಂಬಂಧ 2024ರಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್​ ಠಾಣೆಯಲ್ಲಿ 10 ಪ್ರಕರಣಗಳು ದಾಖಲಾಗಿದ್ದವು. ಈ ಎಲ್ಲ ಪ್ರಕರಣಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ವಿಮಾನಕ್ಕೆ ಬಾಂಬ್​ ಬೆದರಿಕೆ ಸಂದೇಶ ಕಳುಹಿಸಿದಕ್ಕೆ ದಾಖಲಾಗಿವೆ. 2024ರ ಅಕ್ಟೋಬರ್​ 22 ರಿಂದ 26ರವರೆಗೆ ನಿರಂತರವಾಗಿ ಬಾಂಬ್ ಬೆದರಿಕೆ ಸಂದೇಶ ಕಳಿಸಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 2:00 pm, Tue, 18 March 25