ಬಳ್ಳಾರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ (Helicopter) ಸಂಡೂರು ತಾಲೂಕಿನ ತೋರಣಗಲ್ ಬಳಿಯ ಜಿಂದಾಲ್ ಏರ್ಪೋರ್ಟ್ನಲ್ಲಿ ತುರ್ತುಭೂಸ್ಪರ್ಶವಾಗಿದೆ. ಸಿಎಂ ಬೊಮ್ಮಾಯಿ ರಾಯಚೂರಿನಿಂದ ಹೊಸಪೇಟೆಗೆ ಆಗಮಿಸುತ್ತಿದ್ದರು. ಹೆಲಿಕಾಪ್ಟರ್ ಬಳ್ಳಾರಿಯ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಲ್ಯಾಂಡಿಂಗ್ ಆಗಬೇಕಿತ್ತು. ಆದರೆ ಹವಾಮಾನ ವೈಪರೀತ್ಯ ಹಿನ್ನೆಲೆ ಹೆಲಿಕಾಪ್ಟರ್ ತುರ್ತುಭೂಸ್ಪರ್ಶ ಮಾಡಲಾಗಿದೆ. ಹೀಗಾಗಿ ಎಸ್ಕಾರ್ಟ್ ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ಅವರನ್ನು ಕರೆತರಲು ತೆರಳಿದ್ದಾರೆ. ಸಿಎಂ ಬೊಮ್ಮಾಯಿ, ಬಿಎಸ್ ಯಡಿಯೂರಪ್ಪ ರಾತ್ರಿ ಕಮಲಾಪುರದ ಈವಲ್ ಬ್ಯಾಕ್ ಹೋಟೆಲ್ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ