AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ: ಭಾರತೀಯ ಶೆರ್ಪಾ ಅಮಿತಾಬ್ ಕಾಂತ್

ಜಿ-20 ಸದಸ್ಯ ರಾಷ್ಟ್ರಗಳ ಸಾಲಿಗೆ ಆಫ್ರಿಕನ್ ಯೂನಿಯನ್ ಸಹ ಸೇರ್ಪಡೆಗೊಳಿಸಲು ಮಂಡಿಸಿದ ಪ್ರಸ್ತಾವನೆಗೆ 3ನೇ ಶೆರ್ಪಾ ಸಭೆಯಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳಿಂದ ಸಹಮತದೊಂದಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ ಎಂದು ಜಿ-20 ಭಾರತೀಯ ಶೆರ್ಪಾ ಅಮಿತಾಬ್ ಕಾಂತ್ ತಿಳಿಸಿದರು.

ಜಿ-20 ರಾಷ್ಟ್ರಗಳ ಗುಂಪಿಗೆ ಆಫ್ರಿಕನ್ ಯೂನಿಯನ್ ಸೇರ್ಪಡೆಗೆ ಸದಸ್ಯ ರಾಷ್ಟ್ರಗಳ ಬೆಂಬಲ: ಭಾರತೀಯ ಶೆರ್ಪಾ ಅಮಿತಾಬ್ ಕಾಂತ್
ಭಾರತೀಯ ಶೆರ್ಪಾ ಅಮಿತಾಬ್ ಕಾಂತ್
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 15, 2023 | 6:37 PM

Share

ವಿಜಯನಗರ-ಹಂಪಿ, ಜುಲೈ 15: ಭಾರತ ಜಿ-20 ಶೃಂಗ ಸಭೆಯ (G20 Summit) ಅಧ್ಯಕ್ಷತೆ ವಹಿಸಿಕೊಂಡ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಜಿ-20 ಸದಸ್ಯ ರಾಷ್ಟ್ರಗಳ ಸಾಲಿಗೆ ಆಫ್ರಿಕನ್ ಯೂನಿಯನ್ ಸಹ ಸೇರ್ಪಡೆಗೊಳಿಸಲು ಮಂಡಿಸಿದ ಪ್ರಸ್ತಾವನೆಗೆ 3ನೇ ಶೆರ್ಪಾ ಸಭೆಯಲ್ಲಿ ಎಲ್ಲಾ ಸದಸ್ಯ ರಾಷ್ಟ್ರಗಳಿಂದ ಸಹಮತದೊಂದಿಗೆ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ ಎಂದು ಜಿ-20 ಭಾರತೀಯ ಶೆರ್ಪಾ ಅಮಿತಾಬ್ ಕಾಂತ್ (Amitabh Kant) ತಿಳಿಸಿದರು.

ಹಂಪಿ ಎವಾಲ್ವೋ ಬ್ಯಾಕ್ ಖಾಸಗಿ ರೆಸಾರ್ಟ್ನಲ್ಲಿ ಶನಿವಾರ ಮೂರನೇ ದಿನದ ಸಭೆಯ ನಂತರ ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ‌ ಅವರು, ಈಗಾಗಲೇ ಯೂರೋಪ್ ಯೂನಿಯನ್ ರಾಷ್ಟ್ರಗಳು ಜಿ-20 ಸದಸ್ಯ ರಾಷ್ಟ್ರಗಳಾಗಿವೆ. ಆಫ್ರಿಕನ್ ರಾಷ್ಟ್ರಗಳ ಸೇರ್ಪಡೆಯಾಗುವುದರಿಂದ ಜಿ-20ಗೆ ಪ್ರಪಂಚದಲ್ಲಿ ಹೆಚ್ಚಿನ ರಾಷ್ಟçಗಳು ಸೇರ್ಪಡೆಯಾದಂತಾಗಿ ಇದು ಪ್ರಪಂಚದ ದೊಡ್ಡ ಆರ್ಥಿಕ ವೇದಿಕೆಯಾಗಲಿದೆ ಎಂದರು.

ಸೆಪ್ಟೆಂಬರ್ 9 ಹಾಗೂ 10 ರಂದು ದೆಹಲಿಯಲ್ಲಿ ನಡೆಯಲಿರುವ ಜಿ-20 ರಾಷ್ಟ್ರಗಳ ನಾಯಕರ ಅಂತಿಮ ಸಭೆಯಲ್ಲಿ ಕೈಗೊಳ್ಳಲಿರುವ ಒಪ್ಪಂದದ ಪೂರ್ಣ ಪ್ರಮಾಣದ ಕರಡು ಪ್ರತಿ ರೂಪಿಸುವಲ್ಲಿ ಹಂಪಿಯಲ್ಲಿ ನಡೆಯುತ್ತಿರುವ ಶೆರ್ಪಾ ಸಭೆ ಯಶಸ್ವಿಯಾಗಿದೆ. ಈ ಸಭೆಯಲ್ಲಿ ಭಾರತ ಹಲವಾರು ಪ್ರಸ್ತಾವನೆಗಳನ್ನು ಜಿ-20 ಸದಸ್ಯ ರಾಷ್ಟ್ರಗಳ ಮುಂದಿರಿಸಿದೆ. ಈ ಪ್ರಸ್ತಾವನೆಗಳು ಜಾಗತಿಕವಾಗಿ ಕಾರ್ಯಸೂಚಿಗಳನ್ನು ರೂಪಿಸುವಲ್ಲಿ ಹಾಗೂ ಪ್ರಸ್ತುತ ಜಾಗತಿಕ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಮಹತ್ವದ್ದಾಗಿವೆ.

ಇದನ್ನೂ ಓದಿ: ಹಂಪಿಯಲ್ಲಿ ಜಿ-20: 3ನೇ ಶೆರ್ಪಾ ಸಭೆ ಆರಂಭ, ನ್ಯೂ ದೆಹಲಿ ಘೋಷಣೆಗೆ ಅಂತಿಮ ರೂಪ!

ಜಿ-20 ರಾಷ್ಟ್ರಗಳ ಸದಸ್ಯರು ಭಾರತ ರೂಪಿಸಿದ ಕರಡು ಪ್ರತಿಗೆ ರಚನಾತ್ಮಕ ಸಲಹೆ, ಸೂಚನೆ ನೀಡುವುದರೊಂದಿಗೆ ತಾತ್ವಿಕ ಒಪ್ಪಿಗೆ ಸೂಚಿಸಿವೆ. ಭಾರತದ ಕ್ರಿಯಾತ್ಮಕ ಯೋಜನೆಗಳಿಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿವೆ ಎಂದು ತಿಳಿಸಿದರು.

ಹಿಂದೆ ನಡೆದ ಜಿ-20 ರಾಷ್ಟ್ರಗಳಲ್ಲಿ ಮೂಡಿಬಂದ ಒಪ್ಪಂದಗಳ ಘೋಷಣೆಗಳಿಗಿಂತಲೂ ಭಾರತದ ಘೋಷಣೆ ಮಹತ್ವಾಕಾಂಕ್ಷಿಯಾಗಿದೆ. ಈ ಘೋಷಣೆಗಳು ಅಭಿವೃದ್ಧಿ ಹಾಗೂ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳ ಆರ್ಥಿಕ ಬದಲಾವಣೆಗೆ ಸಹಕಾರಿಯಾಗಲಿದೆ. ಇದು ಜಿ-20 ಶೃಂಗ ಸಭೆಯ ಮುಖ್ಯ ಆಶಯವು ಆಗಿದೆ ಎಂದು ಹೇಳಿದರು.

ಮುಂದುವರಿಯುತ್ತಿರುವ ರಾಷ್ಟ್ರಗಳನ್ನು ಗಮನದಲ್ಲಿ ಇರಿಸಿಕೊಂಡು ಆರ್ಥಿಕತೆಯ ಅಂತರ ಕಡಿಮೆ ಮಾಡುವುದು, ಅಂತರಾಷ್ಟ್ರೀಯ ಸಾಲ ಮರುಪಾವತಿ, ವಿವಿಧ ರಾಷ್ಟ್ರಗಳ ನಡುವಿನ ಹಣಕಾಸು ಸಂಸ್ಥೆಗಳ ಸ್ಥಾಪನೆ, ಸುಸ್ಥಿರ ಅಭಿವೃದ್ಧಿಗೆ ಆದ್ಯತೆೆ ನೀಡಲಾಗುತ್ತಿದೆ. ಮಾನವ ಕಲ್ಯಾಣ, ಅಂತರಾಷ್ಟ್ರೀಯ ವ್ಯವಹಾರ, ಸಾರ್ವಜನಿಕ ಮೂಲಭೂತ ಸೌಕರ್ಯದ ಡಿಜಟಲೀಕರಣದ ಜೊತೆಗೆ ಆರ್ಥಿಕ ವ್ಯವಹಾರಗಳ ಡಿಜಟಲೀಕರಣಗೊಳಿಸಿ ಆರ್ಥಿಕತೆಯ ಲಾಭ ಎಲ್ಲಾ ಜನರಿಗೂ ತಲುಪುವಂತೆ ಮಾಡಲು ಶ್ರಮಿಸಲಾಗುತ್ತಿದೆ.

ಇದರೊಂದಿಗೆ ಅಂತರಾಷ್ಟ್ರೀಯ ಶಾಂತಿ, ಭಯೋತ್ಪಾದನೆ ನಿಗ್ರಹ, ಮಾದಕ ವಸ್ತುಗಳ ಸಾಗಾಣಿಕೆ, ಮಾರಾಟ ತಡೆ ಕುರಿತು ಮಹತ್ವದ ಚರ್ಚೆಗಳನ್ನು ನಡೆಸಲಾಗಿದೆ ಎಂದು ಹೇಳಿದರು. ಹಸಿವು ಹಾಗೂ ಅಪೌಷ್ಟಿಕತೆಯನ್ನು ಹೋಗಲಾಡಿಸಲು ಸಾರ್ವತ್ರಿಕ ಸ್ವಾಸ್ಥ್ಯ ರಕ್ಷಣೆ, ಕೋವಿಡ್ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದವರಿಗೆ ಸಹಾಯ, ಗುಣಮಟ್ಟದ ಶಿಕ್ಷಣ ನೀಡುವ ಕುರಿತಾದ ಪ್ರಮುಖ ವಿಷಯಗಳು, ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವ ಕ್ರಮಗಳ ಕುರಿತು ಶೆರ್ಪಾ ಸಭೆಗಳಲ್ಲಿ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದರು.

ಇದನ್ನೂ ಓದಿ: Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ

ಮುಕ್ತ ಜಾಗತಿಕ ವಹಿವಾಟು, ಸುಸ್ಥಿರ ಅಭಿವೃದ್ಧಿ, ಮುಂದಿನ ಜನಾಂಗದ ದೃಷ್ಟಿಯಿಂದ ಆಧುನಿಕ ನಗರಗಳ ನಿರ್ಮಾಣ, ಜಾಗತಿಕ ಆರ್ಥಿಕ ಸಹಕಾರ, ಜಾಗತಿಕ ವಹಿವಾಟು ಹಾಗೂ ಕೊಡುಕೊಳ್ಳುವಿಕೆ ಕುರಿತು ಅಂತರಾಷ್ಟ್ರೀಯ ಕಾನೂನು, ಭ್ರಷ್ಟಾಚಾರ ಹೋಗಲಾಡಿಸಲು ಕ್ರಮಗಳ ಕುರಿತು ಯೋಜನೆ ರೂಪಿಸಲಾಗಿದೆ.

ಹಣಕಾಸು ವಿಷಯಗಳಿಗೆ ಸಂಬಂಧಿಸಿದಂತೆ ಕ್ರಿಪ್ಟೋ ಕರೆನ್ಸಿ ಕುರಿತು ರೂಪು ರೇಶೆ, ಟ್ಯಾಕ್ಸ್ ಸೇರಿದಂತೆ ಹಲವಾರು ವಿಷಯಗಳನ್ನು ಶೆರ್ಪಾ ಸಭೆಯಲ್ಲಿ ಸರಳೀಕರಣಗೊಳಿಸಲು ಚರ್ಚಿಸಲಾಗಿದೆ. ಸುಸ್ಥಿರ ಅಭಿವೃದ್ಧಿಗಾಗಿ ಹಸಿರು ಒಪ್ಪಂದ, ಹವಾಮಾನ ಆರ್ಥಿಕತೆ, ನೀಲಿಸಾಗರ ಆರ್ಥಿಕತೆ, ಪರಿಸರ ಮೇಲೆ ಪ್ಲಾಸ್ಟಿಕ್‌ನಿಂದಾಗುವ ಮಾಲಿನ್ಯ ನಿಯಂತ್ರಣ, ಹವಾಮಾನ ವೈಪರೀತ್ಯ, ನೈಸರ್ಗಿಕ ವಿಕೋಪಗಳನ್ನು ಎದುರಿಸಲು ಯೋಜನೆಗಳನ್ನು ರೂಪಿಸಲಾಗುವುದು.

ತಂತ್ರಜ್ಞಾನದ ವಿನಿಮಯ: ಸಾರ್ವಜನಿಕ ಮೂಲಭೂತ ಸೌಕರ್ಯಗಳ ಡಿಜಿಟಲೀಕರಣ ಮಾಡುವ ಕ್ರಿಯಾ ಯೋಜನೆಗೆ ಅಂತಿಮ ರೂಪ ನೀಡಲಾಗುತ್ತದೆ. ಕೃತಕ ಬುದ್ದಿಮತ್ತೆಯನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿಯು ಚರ್ಚಿಸಲಾಗಿದೆ. ಲಿಂಗ ಸಮಾನತೆ, ಭಯೋತ್ಪಾದನೆಯ ವಿರುದ್ದ ಹೋರಾಟ, ಅಂತರಾಷ್ಟ್ರೀಯ ಶಾಂತಿ ಸ್ಥಾಪನೆಗೆ ಶೆರ್ಪಾ ಮಹತ್ವ ನೀಡಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:33 pm, Sat, 15 July 23

ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಸಿಎಂರನ್ನು ಉದ್ದೇಶಪೂರ್ವಕವಾಗಿ ಆಹ್ವಾನಿಸಿಲ್ಲವಾದರೆ ಖಂಡನಾರ್ಹ: ರಾಜಣ್ಣ
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು
ಟನಲ್ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ: ತೇಜಸ್ವಿ ಸೂರ್ಯಗೆ ಸಿಎಂ ತಿರುಗೇಟು