AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಚಲೋ ಪಾದಯಾತ್ರೆ: ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್!

ಬಳ್ಳಾರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ವೇಳೆ ಪೂರ್ವಾನುಮತಿ ಇಲ್ಲದೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಮಾಜಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ ಹಾಗೂ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ 22 ಬಿಜೆಪಿ ನಾಯಕರ ವಿರುದ್ಧ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಳ್ಳಾರಿ ಚಲೋ ಪಾದಯಾತ್ರೆ: ಸೋಮಶೇಖರ್ ರೆಡ್ಡಿ, ರೇಣುಕಾಚಾರ್ಯ ಸೇರಿ 22 ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್!
22 ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್
ವಿನಾಯಕ ಬಡಿಗೇರ್​
| Edited By: |

Updated on: Sep 13, 2026 | 1:07 PM

Share

ಮುಖ್ಯಾಂಶಗಳು

  • ಬಳ್ಳಾರಿ ಚಲೋ ವೇಳೆ ರಸ್ತೆ ತಡೆದ 22 ಬಿಜೆಪಿ ನಾಯಕರ ವಿರುದ್ಧ ಕೇಸ್.
  • ಸೋಮಶೇಖರ ರೆಡ್ಡಿ, ರೇಣುಕಾಚಾರ್ಯ ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲು.
  • ಬ್ಯಾನರ್ ತೆರವು ಖಂಡಿಸಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದ ನಾಯಕರು.

ಬಳ್ಳಾರಿ, ಸೆಪ್ಟೆಂಬರ್ 13: ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ವೇಳೆ ನಿಯಮ ಮೀರಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಮಾಜಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಎಂ.ಪಿ. ರೇಣುಕಾಚಾರ್ಯ ಸೇರಿದಂತೆ 22 ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ಸೆಪ್ಟೆಂಬರ್ 9ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ರಸ್ತೆ ಸಂಚಾರ ತಡೆದು ಸಾರ್ವಜನಿಕರಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿಜೆಪಿ ಬಾವುಟ ಮತ್ತು ಬ್ಯಾನರ್‌ಗಳ ಅಳವಡಿಕೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಮ್ಮರಚೇಡು ಗ್ರಾಮದಿಂದ ಬಳ್ಳಾರಿ ನಗರದವರೆಗೆ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯು ಸೆಪ್ಟೆಂಬರ್ 9 ರಂದು ಬಳ್ಳಾರಿ ನಗರವನ್ನು ತಲುಪಿ ಸಮಾರೋಪ ಗೊಂಡಿತ್ತು. ಪಾದಯಾತ್ರೆಯ ಮಾರ್ಗದುದ್ದಕ್ಕೂ ಪೂರ್ವಾನುಮತಿಯಿಲ್ಲದೆ ಬಿಜೆಪಿ ಬಾವುಟ ಮತ್ತು ಬ್ಯಾನರ್‌ಗಳನ್ನು ಅಳವಡಿಸಲಾಗಿತ್ತು. ಬಿಐಟಿಎಂ ಕಾಲೇಜುವರೆಗೆ ಮಾತ್ರ ಬಾವುಟ ಅಳವಡಿಕೆಗೆ ಅವಕಾಶ ನೀಡಿದ್ದ ಜಿಲ್ಲಾಧಿಕಾರಿಗಳು, ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ಅಳವಡಿಸದಂತೆ ನಿಷೇಧಾಜ್ಞೆ ಹೊರಡಿಸಿದ್ದರು.

ಸಮಾರೋಪ ಕಾರ್ಯಕ್ರಮದ ಒಂದು ದಿನ ಮುಂಚಿತವಾಗಿಯೇ ನಿಯಮ ಮೀರಿ ಅಳವಡಿಸಲಾಗಿದ್ದ ಬ್ಯಾನರ್ ಮತ್ತು ಬಾವುಟಗಳನ್ನು ಬಳ್ಳಾರಿ ಮಹಾನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದರು. ಇದು ಬಿಜೆಪಿ ನಾಯಕರ ಮತ್ತು ಆಡಳಿತ ಯಂತ್ರದ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು.

ಇದನ್ನೂ ಓದಿ ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ

ಹೆದ್ದಾರಿ ತಡೆದು ಪ್ರತಿಭಟನೆ

ಪಾಲಿಕೆ ಸಿಬ್ಬಂದಿ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ಆಕ್ರೋಶಗೊಂಡ ಬಿಜೆಪಿ ನಾಯಕರು, ಸೆಪ್ಟೆಂಬರ್ 9 ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ರಸ್ತೆ ಸಂಚಾರ ತಡೆದು ಧರಣಿ ನಡೆಸಿದ್ದರು. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ, ಪೂರ್ವಾನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು 22 ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವಿನಾಯಕ ಬಡಿಗೇರ್​
ವಿನಾಯಕ ಬಡಿಗೇರ್​
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ಹಾಸನದವರಿಗೆ ವಿಶೇಷ ಶಕ್ತಿ ಎಂದ ನಟ ರಂಗಾಯಣ ರಘು: ವಿಡಿಯೋ ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ರಚಿತಾರಾಮ್ ಹುಟ್ಟುಹಬ್ಬ: ಕೊರಗಜ್ಜನ ಹರಕೆ ಬಗ್ಗೆ ರಚಿತಾರಾಮ್ ಏನಂದ್ರು ನೋಡಿ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ
ಬಿಗ್​​ಬಾಸ್: ಸ್ಪರ್ಧಿಗಳ ವರ್ತನೆಗೆ ಬೇಸತ್ತು ಸ್ಟೇಜ್ ಬಿಟ್ಟು ತೆರಳಿದ ಕಿಚ್ಚ