AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ

ಜನಾರ್ದನ ರೆಡ್ಡಿ (Janardhana Reddy) ಮನೆ ಮುಂದೆ ನಡೆದ ಬ್ಯಾನರ್ ಗಲಭೆ (Banner Clash) ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣ ತೀವ್ರ ಸ್ವರೂಪ ಪಡೆದಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇನ್ನೊಂದೆಡೆ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ವಹಿಸಿದ್ದು, ಅಧಿಕಾರಿಗಳು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ಈ ಬೆಳವಣಿಗಳ ನಡುವೆ ಬಳ್ಳಾರಿಯಲ್ಲಿ ಮತ್ತೊಂದು ಕೃತ್ಯ ನಡೆದಿದೆ.

ಬಳ್ಳಾರಿ ಬ್ಯಾನರ್ ಗಲಾಟೆ ಮಾಸುವ ಮುನ್ನವೇ ರೆಡ್ಡಿ,ಶ್ರೀರಾಮುಲುಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ
Reddy And Sriramulu Model House
ವಿನಾಯಕ ಬಡಿಗೇರ್​
| Edited By: |

Updated on:Jan 23, 2026 | 8:39 PM

Share

ಬಳ್ಳಾರಿ, (ಜನವರಿ 22): ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ (Bellary Banner violence) ಕಾಂಗ್ರೆಸ್ ಕಾರ್ಯಕರ್ತ ಗುಂಡೇಟಿಗೆ ಬಲಿ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಕೃತ್ಯ ನಡೆದಿದೆ. ಹೌದು…ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (janardhan reddy) ಹಾಗೂ ಶ್ರೀರಾಮುಲುಗೆ (Sriramulu) ಸೇರಿದ ಸೇರಿದ ಜಿ ಸ್ಕೈರ್ ಲೇಔಟ್​ನಲ್ಲಿರುವ ಮಾಡೆಲ್ ಹೌಸ್​ನಲ್ಲಿ  (Model House) ಬೆಂಕಿ ಅವಘಡ ಸಂಭವಿಸಿದ್ದು,, ಕಾಂಗ್ರೆಸ್​​​ನವರೇ ಬೆಂಕಿ ಹಚ್ಚಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಇದರಿಂದ ಈ ಬೆಂಕಿ ಪ್ರಕರಣ ಮತ್ತೆ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುವ ಸಾಧ್ಯತೆಗಳಿವೆ.

ಈ ಮಾಡೆಲ್ ಹೌಸ್​ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ಇಬ್ಬರ ಹೆಸರಿನಲ್ಲಿದ್ದು, 13-14 ವರ್ಷಗಳ ಹಿಂದೆ ಮಾಡಲಾಗಿದೆ. ಈ ಹೌಸ್ ಒಟ್ಟು 109 ಎಕರೆ ಟೋಟಲ್ G ಸ್ವ್ಕೇರ್ ಹೊಂದಿದೆ.

ಇದನ್ನೂ ಓದಿ: ಬಳ್ಳಾರಿ ಬ್ಯಾನರ್ ಗಲಾಟೆ: ಭರತ್ ರೆಡ್ಡಿ ಬೆಂಬಲಿಗರಿಂದ ಜನಾರ್ದನ ರೆಡ್ಡಿ ವಿರುದ್ಧ ಸ್ಫೋಟಕ ಸಾಕ್ಷ್ಯ ಬಿಡುಗಡೆ

ಕೈ ಶಾಸಕ ಭರತ್ ರೆಡ್ಡಿ ವಿರುದ್ಧ ಆರೋಪ

ಈ ಘಟನೆ ಬಗ್ಗೆ ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಪ್ರತಿಕ್ರಿಯಿಸಿದ್ದು, ಬ್ಯಾನರ್ ಗಲಾಟೆ ವೇಳೆ ಬೆಂಕಿ ಹಚ್ಚುತ್ತೇನೆಂದು ಹೇಳಿದ್ದರು. ಅಂದಿನ ಘಟನೆಗೆ ಸಾಕ್ಷಿ ಎನ್ನುವಂತೆ ಈಗ ಬೆಂಕಿ ಹಚ್ಚಿದ್ದಾರೆ. ನಮಗೆ ಸೇರಿದ ಮಾಡೆಲ್ ಹೌಸ್​ಗೆ ಬೆಂಕಿ ಹಚ್ಚಿದ್ದಾರೆ. ನೂರು ಎಕರೆ ಪ್ರದೇಶದಲ್ಲಿ ಲೇಔಟ್ ಮಾಡಲಾಗಿತ್ತು. ಖರೀದಿದಾರರಿಗೆ ತೋರಿಸಲು ಮಾಡೆಲ್ ಹೌಸ್ ನಿರ್ಮಿಸಿದ್ದೆವು. ಇಂದು (ಜನವರಿ 23) ಸಂಜೆ ಆರೂವರೆ ಸುಮಾರಿಗೆ ಬೆಂಕಿ ಹಚ್ಚಲಾಗಿದೆ. ಬೆಂಕಿ ಹಚ್ಚಿದವರನ್ನ ಹಿಡಿಯಲು ಕೆಲವರು ಯತ್ನಿಸಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದ್ದಾರೆ.

ಮಾಡಲ್​ ಹೌಸ್​ಗೆ ಪೆಟ್ರೋಲ್​, ಡೀಸೆಲ್​ ಹಾಕಿ ಬೆಂಕಿ ಹಚ್ಚಿದ್ದಾರೆ. ಕಾಂಗ್ರೆಸ್ ಶಾಸಕ ಭರತ್​ ರೆಡ್ಡಿ ಬೆಂಬಲಿಗರೇ ಇದನ್ನ ಮಾಡಿರುವುದು. ಘಟನಾ ಸ್ಥಳಕ್ಕೆ ಪೊಲೀಸ್​ ಅಧಿಕಾರಿಗಳು ಕೂಡ ಬಂದಿದ್ದಾರೆ. ಇದನ್ನ ನಾವು ಬಿಡಲ್ಲ, ಪೊಲೀಸ್​ ಠಾಣೆಗೆ ದೂರು ನೀಡುತ್ತೇವೆ ಎಂದರು.

ಜನಾರ್ದನ ರೆಡ್ಡಿ ಹೇಳಿದ್ದಿಷ್ಟು

ಇನ್ನು ಈ ಅಗ್ನಿ ಅವಘಡದ ಬಗ್ಗೆ ಶಾಸಕ ಗಾಲಿ ಜನಾರ್ದನರೆಡ್ಡಿ ಟಿವಿ9 ಜೊತೆ ಮಾತನಾಡಿದ್ದು, ಬ್ಯಾನರ್​ ಗಲಾಟೆಯಾಗಿ ಇನ್ನೂ 15 ದಿನಗಳು ಸಹ ಆಗಿಲ್ಲ. ಆಗಲೇ ಇಂತಹ ಘಟನೆ ನಡೆದಿದೆ.ಘಟನೆ ಬಗ್ಗೆ ಬಳ್ಳಾರಿ ಎಸ್​ಪಿ ಜೊತೆ ನಾನು ಮಾತಾಡಿದ್ದೇನೆ ಎಂದು ಹೇಳಿದರು.

ಒಟ್ಟಿನಲ್ಲಿ ರೆಡ್ಡಿ ನಿವಾಸದ ಮುಂದೆ ನಡೆದ ಬ್ಯಾನರ್ ಗಲಾಟೆ ಬೆನ್ನಲ್ಲೇ ಇದೀಗ ಅದೇ ರೆಡ್ಡಿಗೆ ಸೇರಿದ ಮಾಡೆಲ್ ಹೌಸ್​​ಗೆ ಬೆಂಕಿ ಬಿದ್ದಿದ್ದು, ಇದು ಕಾಂಗ್ರೆಸ್​​ನವರ ಕೃತ್ಯ ಎಂದು ಅವರ ಸಹೋದರ ಸೋಮಶೇಖರ್ ರೆಡ್ಡಿ ಆರೋಪಿಸಿದ್ದಾರೆ. ಹೀಗಾಗಿ ಈ ಬೆಂಕಿ ರಾಜ್ಯಕಾರಣವನ್ನು ಆವರಿಸುವ ಸಾಧ್ಯತೆಗಳಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 8:24 pm, Fri, 23 January 26

‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು