ವಿಜಯನಗರ: ತಮ್ಮನನ್ನು ರಕ್ಷಣೆ ಮಾಡಲು ಹೋಗಿ ಮೂವರು ಅಕ್ಕಂದಿರು ನೀರು ಪಾಲು

ಮುಳುಗುತ್ತಿದ್ದ ತಮ್ಮನನ್ನು ರಕ್ಷಣೆ ಮಾಡಲು ಹೋಗಿ ತಮ್ಮ ಸೇರಿ ಮೂವರು ಅಕ್ಕಂದಿರು ಕೂಡ ಸಾವನ್ನಪ್ಪಿದ್ದಾರೆ.

ವಿಜಯನಗರ: ತಮ್ಮನನ್ನು ರಕ್ಷಣೆ ಮಾಡಲು ಹೋಗಿ ಮೂವರು ಅಕ್ಕಂದಿರು ನೀರು ಪಾಲು
ಮಕ್ಕಳಿಗಾಗಿ ಶೋಧ ಕಾರ್ಯ
Edited By:

Updated on: Nov 02, 2022 | 3:36 PM

ವಿಜಯನಗರ: ಮುಳುಗುತ್ತಿದ್ದ ತಮ್ಮನನ್ನು ರಕ್ಷಣೆ ಮಾಡಲು ಹೋಗಿ ತಮ್ಮ ಸೇರಿ ಮೂವರು ಅಕ್ಕಂದಿರು ಕೂಡ ಸಾವನ್ನಪ್ಪಿರುವ ಘಟನೆ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡಾದಲ್ಲಿ ನಡೆದಿದೆ. ಚನ್ನಹಳ್ಳಿ ತಾಂಡಾದಲ್ಲಿ ವಾಸವಿರುವ ಒಂದೇ ಕುಟುಂಬದ ಅಭಿ (13), ಅಶ್ವಿನಿ(14), ಕಾವೇರಿ(18), ಅಪೂರ್ವ(18) ಮೃತಪಟ್ಟಿದ್ದಾರೆ. ತಾಂಡಾದ ಅಭಿ ಹೊಂಡದಲ್ಲಿ ಮುಳುಗುತ್ತಿದ್ದನು, ಇದನ್ನು ಕಂಡ ಅಕ್ಕಂದಿರು ಒಬ್ಬರಾದಂತೆ ಒಬ್ಬರು ಹೋಗಿ ರಕ್ಷಣೆಗೆ ತೆರೆಳಿ ನೀರುಪಾಲಾಗಿದ್ದಾರೆ. ಮೂವರ ಶವ ಪತ್ತೆಯಾಗಿದ್ದಯ ಅಪೂರ್ವಾ ಶವಕ್ಕಾಗಿ ಹುಡುಕಾಟ ನಡೆದಿದೆ. ಹರಪನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಲಬುರಗಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಕೊಲೆ: ಆರೋಪಿ

ಕಲಬುರಗಿ: 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಘಟನೆ ಕಲಬುರಗಿ  ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ (ನ.1) ಸಂಜೆ ನಡೆದಿದೆ. ಈ ಬಗ್ಗೆ ಕಲಬುರಗಿ ಎಸ್ಪಿ ಇಶಾ ಪಂತ್ ಮಾತನಾಡಿ, ಆರೋಪಿ ಬಗ್ಗೆ ಕೆಲ ಮಾಹಿತಿ ಸಿಕ್ಕಿವೆ. ಆರೋಪಿ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಆದಷ್ಟು ಬೇಗನೆ ಆರೋಪಿಯನ್ನು ಪತ್ತೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಮದ್ಯಾಹ್ನದ ಊಟ ಮುಗಿಸಿಕೊಂಡು ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ

ಧಾರವಾಡ: ಮದ್ಯಾಹ್ನದ ಊಟ ಮುಗಿಸಿಕೊಂಡು ಕೆಲಸಕ್ಕೆ ಹೋಗುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಮೂವರು ಆರೋಪಿಗಳನ್ನು ಹುಬ್ಬಳ್ಳಿಯ ಕಸಬಾಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉಲ್ಪಥ್​ ಅಲಿಯಾಸ್​ ನಾಮ್​, ಮಲಿಕ್, ಮುಬಾರಕ್​ ಬಂಧಿತ ಆರೋಪಿಗಳು. ಬುಕ್ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡ್ತಿದ್ದ 36 ವರ್ಷದ ಮಹಿಳೆ ನಿನ್ನೆ (ನ.1) ಮದ್ಯಾಹ್ನ ಊಟಕ್ಕೆ ಬಂದು ವಾಪಸ್ ಹೋಗುತ್ತಿದ್ದರು. ಈ ವೇಳೆ ಆರೋಪಿಗಳು ಮಹಿಳೆಗೆ ಚಾಕು ತೋರಿಸಿ ಜೀವ ಬೆದರಿಕೆ ಹಾಕಿ ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.

ಈ ಸಂದರ್ಭದಲ್ಲಿ ಮಹಿಳೆ ಕಿರಿಚಾಡಿದಾಗ ಫ್ಯಾಕ್ಟರಿಯಲ್ಲಿ ಕೆಲಸ ಮಾಡ್ತಿದ್ದವರು ಓಡಿ ಬರುತ್ತಲೇ ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ದಾಖಲಿಸಿದ್ದಾಳೆ. ಮಹಿಳೆ ದೂರಿನ ಆಧಾರದ ಮೇಲೆ ಪೊಲೀಸರು ಐಪಿಸಿ ಸೆಕ್ಷನ್ 341, 323, 506, 354(ಬಿ), 375 ಅಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪೊಲೀಸರು ಪರಾರಿಯಾದವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ನೊಂದ ಮಹಿಳೆಗೆ ಕಿಮ್ಸ್​​ನಲ್ಲಿ ವೈದ್ಯಕೀಯ ತಪಾಸಣೆ ನಡೆಯುತ್ತಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Wed, 2 November 22