ವಿಜಯನಗರದಲ್ಲಿ ಎಸಿ ಸ್ಫೋಟಗೊಂಡು ಸ್ಥಳದಲ್ಲೇ ಒಂದೇ ಮನೆಯ ನಾಲ್ವರು ಸಾವು

ಶಾರ್ಟ್‌ಸರ್ಕ್ಯೂಟ್‌ನಿಂದ ಎಸಿ ಸ್ಫೋಟಗೊಂಡು ನಾಲ್ವರು ಮೃತಪಟ್ಟಿದ್ದಾರೆ. ಜೊತೆಗೆ ಎಸಿ ಸ್ಫೋಟಗೊಂಡು ಇಡೀ ಮನೆ ಧಗಧಗನೆ ಹೊತ್ತಿ ಉರಿದಿದೆ. ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯನಗರದಲ್ಲಿ ಎಸಿ ಸ್ಫೋಟಗೊಂಡು ಸ್ಥಳದಲ್ಲೇ ಒಂದೇ ಮನೆಯ ನಾಲ್ವರು ಸಾವು
ವಿಜಯನಗರದಲ್ಲಿ ಎಸಿ ಸ್ಫೋಟಗೊಂಡು ಸ್ಥಳದಲ್ಲೇ ಒಂದೇ ಮನೆಯ ನಾಲ್ವರು ಸಾವು
Follow us
TV9 Web
| Updated By: ಆಯೇಷಾ ಬಾನು

Updated on:Apr 08, 2022 | 10:54 AM

ವಿಜಯನಗರ: ಎಸಿ ಸ್ಫೋಟಗೊಂಡು ಸ್ಥಳದಲ್ಲೇ ನಾಲ್ವರು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಮರಿಯಮ್ಮನಹಳ್ಳಿಯ ರಾಘವೇಂದ್ರಶೆಟ್ಟಿ ಮನೆಯಲ್ಲಿ ನಡೆದಿದೆ. ಎಸಿ ಸ್ಫೋಟದಿಂದ ಮನೆಯಲ್ಲಿದ್ದ ಪತಿ, ಪತ್ನಿ, ಇಬ್ಬರು ಮಕ್ಕಳು ಮನೆಯಲ್ಲಿಯೇ ಮೃತಪಟ್ಟಿದ್ದಾರೆ. ಶಾರ್ಟ್‌ಸರ್ಕ್ಯೂಟ್‌ನಿಂದ ಎಸಿ ಸ್ಫೋಟಗೊಂಡು ದುರ್ಘಟನೆ ನಡೆದಿದೆ ಎನ್ನಲಾಗಿದೆ. ವೆಂಕಟ್ ಪ್ರಶಾಂತ್(42), ಪತ್ನಿ ಡಿ.ಚಂದ್ರಕಲಾ(38), ಮಕ್ಕಳಾದ H.A.ಅರ್ದ್ವಿಕ್(16), ಪ್ರೇರಣಾ(8) ಮೃತರು. ಶಾರ್ಟ್‌ಸರ್ಕ್ಯೂಟ್‌ನಿಂದ ಎಸಿ ಸ್ಫೋಟಗೊಂಡು ನಾಲ್ವರು ಮೃತಪಟ್ಟಿದ್ದಾರೆ. ಜೊತೆಗೆ ಎಸಿ ಸ್ಫೋಟಗೊಂಡು ಇಡೀ ಮನೆ ಧಗಧಗನೆ ಹೊತ್ತಿ ಉರಿದಿದೆ. ಸ್ಥಳಕ್ಕೆ ಮರಿಯಮ್ಮನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ತಹಸೀಲ್ದಾರ್ ವಿಶ್ವಜಿಜ್ ಮೆಹ್ತಾ ಭೇಟಿ ನೀಡಿ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಪದ್ಮಶ್ರೀ ಪುರಸ್ಕೃತ ಮಾತಾ ಮಂಜಮ್ಮ ಜೋಗತಿ ಅವರೂ ಘಟನೆ ಸ್ಥಳದಲ್ಲಿದ್ದು ಕುಟುಂಬಸ್ಥರಿಗೆ ಸಾಂತ್ವಾನಿಸಿದ್ದಾರೆ. ಘಟನೆಯಲ್ಲಿ ಡಿ ರಾಘವೇಂದ್ರ ಶೆಟ್ಟಿ. ರಾಜೇಶ್ವರಿ ಬಚಾವ್ ಆಗಿದ್ದಾರೆ. ರಾಘವೇಂದ್ರ ಶೆಟ್ಟಿ ಹಾಗೂ ಮೃತ ಪ್ರಶಾಂತ್ ಕಿರಾಣಿ ವರ್ತಕರು. ಮನೆಯ ಕೆಳಭಾಗದ ಹಾಲ್​ನಲ್ಲಿದ್ದ ಎಸಿ ಶಾರ್ಟ್‌ಸರ್ಕ್ಯೂಟ್‌ನಿಂದ ಸ್ಫೋಟಗೊಂಡಿದೆ. ಮನೆಯ ಮೇಲಿನ ಬೆಡ್ ರೂಂನಲ್ಲಿ ಮಲಗಿದ್ದ ಮೃತ ದಂಪತಿಗಳು ಹಾಗೂ ಮಕ್ಕಳು ಹಾಲ್ ನಲ್ಲಿ ಬೆಂಕಿ ಹೆಚ್ಚಾಗುತ್ತಿದ್ದಂತೆ ಬೆಡ್ ರೂಂನಲ್ಲಿ ಬಾಗಿಲು ಹಾಕಿಕೊಂಡು ರಕ್ಷಣೆಗೆ ಮುಂದಾಗಿದ್ದಾರೆ. ಆಗ ದಟ್ಟವಾದ ಹೊಗೆ ಆವರಿಸಿ ಬೆಡ್ ರೂಂನಲ್ಲಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಕಳೆದ ರಾತ್ರಿ 1 ಗಂಟೆ ಸಮಯದಲ್ಲಿ ಅವಘಡ ಸಂಭವಿಸಿದೆ.

ಬೈಕ್‌ಗೆ ಕಾರು ಡಿಕ್ಕಿ-ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಗ್ರಾಮದ ಬಳಿ ಭೀಕರ ಅಪಘಾತ ಸಂಭವಿಸಿದೆ. ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಸವಾರರಾದ ನಾಗರಾಜ್(40), ಮುಮ್ತಾಜ್(35) ಸಾವು. ಅಪಘಾತದ ಬಳಿಕ ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗದಗ ಜಿಲ್ಲಾ ಕಾರಾಗೃಹದಲ್ಲಿ ಖೈದಿ ಆತ್ಮಹತ್ಯೆ ಗದಗ ಜಿಲ್ಲಾ ಕಾರಾಗೃಹದಲ್ಲಿ ರಾಜು ಲಮಾಣಿ (19) ಎಂಬ ಖೈದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ತಾಲೂಕಿನ ಅಡವಿ ಸೋಮಾಪುರ ತಾಂಡಾದ ನಿವಾಸಿಯಾಗಿದ್ದ ರಾಜು, ಅಪ್ರಾಪ್ತ ಬಾಲಕಿಯ ಜೊತೆಗೆ ಲವ್ ಮಾಡ್ತಾಯಿದ್ದ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೋಕ್ಸೋ ಪ್ರಕರಣದ ಹಿನ್ನಲೆಯಲ್ಲಿ ಜೈಲು ಪಾಲಾಗಿದ್ದ. 20 ದಿನಗಳಿಂದ ಜೈಲಿನಲ್ಲಿದ್ದ. ಜೈಲಿಗೆ ಅಪ್ರಾಪ್ತ ಬಾಲಕಿ ಹಾಗೂ ಪೋಷಕರು ಭೇಟಿ ಮಾಡಿದ್ದರು. ಅವರು ಭೇಟಿ ಮಾಡಿದ ಬೆನ್ನಲ್ಲೇ ಯುವಕ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಖೈದಿ ಆತ್ಮಹತ್ಯೆಗೆ ಜೈಲು ಸಿಬ್ಬಂದಿಯ ನಿರ್ಲಕ್ಷ್ಯ ಎಂದು ಆಕ್ರೋಶ ವ್ಯಕ್ತವಾಗಿದೆ. ಜೈಲಿನ ಮುಂದೆ ಯುವಕನ ಪೋಷಕರು ಕಣ್ಣೀರು ಹಾಕಿದ್ದಾರೆ. ಗದಗ ಜೆಟಿ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷ ಓದುತ್ತಿದ್ದ ಯುವಕ ಅದೇ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುತ್ತಿದ್ದ.

ಇದನ್ನೂ ಓದಿ: ಕೃಷಿ ಆದಾಯ 10 ಲಕ್ಷ ಮೀರಿದರೆ ಕಟ್ಟುನಿಟ್ಟಿನ ಪರಿಶೀಲನೆ: ತೆರಿಗೆ ನಿಯಮ ಬಿಗಿಗೊಳಿಸಲು ಮುಂದಾದ ಸರ್ಕಾರ

Yoga Poses : ತಲೆನೋವು ಮತ್ತು ಮೈಗ್ರೇನ್​​ನಿಂದ ಮುಕ್ತಿ ಹೊಂದಲು ಈ 4 ಯೋಗಾಸನ ಸಹಕಾರಿ

Published On - 8:01 am, Fri, 8 April 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್