AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಮೂರ್ತಿ ಮೆರವಣಿಗೆ ವೇಳೆ ವಿದ್ಯುತ್ ಅವಘಡ: ಕಾಲುವೆಗೆ ಉರುಳಿದ ಟ್ರ್ಯಾಕ್ಟರ್; ಕೂದಲೆಳೆ ಅಂತರದಲ್ಲಿ ಇಬ್ಬರು ಪಾರು

ಅದ್ಧೂರಿಯಾಗಿ ಗಣೇಶ ಉತ್ಸವ ಆಚರಣೆ ವೇಳೆಯೇ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಅನಂತಶಯನಗುಡಿಯಲ್ಲಿ ಅವಘಡವೊಂದು ಸಂಭವಿಸಿದೆ. ವಿದ್ಯುತ್ ತಂತಿಗೆ ಬಿದಿರು ತಾಗಿ ಶಾರ್ಟ್ ಸರ್ಕ್ಯೂಟ್ ಆಗಿ ಟ್ರ್ಯಾಕ್ಟರ್ ಕಾಲುವೆಗೆ ಉರುಳಿದೆ. ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ಮೂರ್ತಿ ಮೆರವಣಿಗೆ ವೇಳೆ ವಿದ್ಯುತ್ ಅವಘಡ: ಕಾಲುವೆಗೆ ಉರುಳಿದ ಟ್ರ್ಯಾಕ್ಟರ್; ಕೂದಲೆಳೆ ಅಂತರದಲ್ಲಿ ಇಬ್ಬರು ಪಾರು
ಗಣೇಶ ಮೆರವಣಿಗೆ ವೇಳೆ ಅವಘಡImage Credit source: tv9 kannada
ವಿನಾಯಕ ಬಡಿಗೇರ್​
| Edited By: |

Updated on:Sep 14, 2026 | 7:49 PM

Share

ವಿಜಯನಗರ, ಸೆಪ್ಟೆಂಬರ್​ 14: ನಾಡಿನೆಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ ಜೋರಾಗಿದೆ. ಮನೆಯಲ್ಲೂ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಅದ್ಧೂರಿಯಾಗಿ ಗಣೇಶ ಉತ್ಸವ ಆಚರಣೆ ವೇಳೆ ಅವಘಡ ಕೂಡ ಸಂಭವಿಸಿವೆ. ಗಣೇಶ ಮೂರ್ತಿ ಸಾಗಿಸುವಾಗ ವಿದ್ಯುತ್ ಅವಘಡ ಸಂಭವಿಸಿದ್ದು, ಗಣಪತಿ ಮೂರ್ತಿ ಕೊಂಡೊಯ್ಯುತ್ತಿದ್ದ ಟ್ರ್ಯಾಕ್ಟರ್​ ಕಾಲುವೆಗೆ ಉರುಳಿಬಿದ್ದಿದೆ. ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಅನಂತಶಯನಗುಡಿ ಗ್ರಾಮದ ಹೊರವಲಯದಲ್ಲಿ ಗಣೇಶ ಮೂರ್ತಿಯನ್ನು ಟ್ರ್ಯಾಕ್ಟರ್‌ನಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ವಿದ್ಯುತ್ ಅವಘಡ ಸಂಭವಿಸಿದೆ. ಮೂರ್ತಿಯಲ್ಲಿದ್ದ ಬಿದಿರುಗಳು ಮಾರ್ಗಮಧ್ಯೆ ವಿದ್ಯುತ್ ಕಂಬದ ತಂತಿಗೆ ತಗುಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಈ ವೇಳೆ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಗಣಪತಿ ಮೂರ್ತಿ ಸಮೇತ ಕಾಲುವೆಗೆ ಉರುಳಿಬಿದ್ದಿದೆ.

ಅದೃಷ್ಟವಶಾತ್ ಇಬ್ಬರು ಪ್ರಾಣಾಪಾಯದಿಂದ ಪಾರು

ಇನ್ನು ದುರ್ಘಟನೆಯಲ್ಲಿ ಕಮಲಾಪುರ ಮೂಲದ ಹುಲುಗಪ್ಪ ಹಾಗೂ ದೀಪಕ್ ಎಂಬುವವರಿಗೆ ವಿದ್ಯುತ್ ಶಾಕ್ ಹೊಡೆದು ಗಾಯಗಳಾಗಿದ್ದು, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ ಖರ್ಗೆ ಗರಂ

ಗಾಯಾಳುಗಳನ್ನು ತಕ್ಷಣವೇ ಹೊಸಪೇಟೆ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

LIVE TV

ಘಟನೆ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ: ಪರಿಶೀಲನೆ

ಅವಘಡ ಸಂಭವಿಸಿದ ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಹೊಸಪೇಟೆ ಡಿವೈಎಸ್​​ಪಿ ಮುರಳೀಧರ್ ಹಾಗೂ ಪೊಲೀಸ್ ಇನ್‌ಸ್ಪೆಕ್ಟರ್‌ಗಳಾದ ಹುಲುಗಪ್ಪ ಮತ್ತು ಗುರುರಾಜ್ ಕಟ್ಟಿಮನಿ ಅವರು ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:47 pm, Mon, 14 September 26

Follow Us
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಬಿಗ್ ಬಾಸ್ ಮನೆಯಲ್ಲಿ ಮಿತಿ ಮೀರಿದ ಜಗಳ: ಸೌಂದರ್ಯಾ-ಮಂಜು ನಡುವೆ ಗಲಾಟೆ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಹುಬ್ಬಳ್ಳಿಯಲ್ಲಿ ಈದ್ಗಾ ಮೈದಾನದಲ್ಲಿ ಎಲ್ಲರ ಗಮನ ಸೆಳೆದ ಕೇಸರಿ ಗಣೇಶ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಮೈಸೂರಿನಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶೋತ್ಸವ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಬಿಜೆಪಿ ಹೇಳಿದಂಗೆ ಇನ್ಸ್​ಪೆಕ್ಟರ್​ ಧನಂಜಯ್​ನ ಸಸ್ಪೆಂಡ್ ಮಾಡೋಕ್ಕಾಗಲ್ಲ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ಡಿಕೆಶಿ ನೇತೃತ್ವದ ಸರ್ಕಾರಕ್ಕೆ ಶತದಿನದ ಸಂಭ್ರಮ: ವಿಧಾನಸೌಧಕ್ಕೆ ದೀಪಾಲಂಕಾರ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ತಿರುಪತಿ ಎಕ್ಸ್‌ಪ್ರೆಸ್ ಹೋರಿ ಜನ್ಮದಿನ: ಕೇಕ್ ಕತ್ತರಿಸಿ ಸಂಭ್ರಮಾಚರಣೆ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಪಕ್ಕದ ರಾಜ್ಯದಿಂದ ವಿದ್ಯತ್ ಖರೀದಿ ಅನಿವಾರ್ಯತೆ ಸೃಷ್ಟಿ: ಸಿಎಂ ಡಿಕೆಶಿ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಭಿಕ್ಷುಕನ ವೇಷ ತೊಟ್ಟ ಬಿಜೆಪಿ ಶಾಸಕ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆಶಿ ಸ್ಪಷ್ಟನೆ : ಅಂತೆ ಕಂತೆಗಳಿಗೆ ತೆರೆ
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!
ರೇಷನ್ ಕಾರ್ಡ್ ಕೆವೈಸಿಗೆ ತಾಂತ್ರಿಕ ಸಮಸ್ಯೆ ಬಗ್ಗೆ ಡಿಸಿಎಂ ಹೇಳಿದ್ದಿಷ್ಟು!