ವಿಎಸ್​ಕೆ‌ ವಿವಿ ಹೊಸ ಕಟ್ಟಡಗಳ ಉದ್ಘಾಟಣೆ: ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​

| Updated By: ಗಂಗಾಧರ​ ಬ. ಸಾಬೋಜಿ

Updated on: Jul 13, 2023 | 6:54 PM

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯಲ್ಲಿ ಗುರುವಾರ ಹಲವು ಹೊಸ ಕಟ್ಟಡಗಳನ್ನು ರಾಜ್ಯಪಾಲ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು. ಬಳಿಕ ಗೌರವ ಡಾಕ್ಟರೇಟ್ ಪ್ರದಾನ ಮಾಡಿದ್ದಾರೆ.

ವಿಎಸ್​ಕೆ‌ ವಿವಿ ಹೊಸ ಕಟ್ಟಡಗಳ ಉದ್ಘಾಟಣೆ: ಗೌರವ ಡಾಕ್ಟರೇಟ್ ಪ್ರದಾನ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​​
ಹೊಸ ಕಟ್ಟಡ ಉದ್ಘಾಟಿಸಿದ ರಾಜ್ಯಪಾಲರು
Follow us on

ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ (VSK University) ದಲ್ಲಿ ಆಡಳಿತ ಕಟ್ಟಡದ ಮೊದಲನೇ ಮಹಡಿ, ಸೆಂಟರ್ ಆಫ್‌ ಎಕ್ಸಲೆನ್ಸ್ ಫಾರ್ ಮಲ್ಟಿಡಿಸಿಪ್ಲಿನರಿ ಅಡ್ವಾನ್ಸ್ ರಿಸರ್ಚ್ ಫೆಸಿಲಿಟಿ, ಸಾಮಾನ್ಯ ವಿದ್ಯಾರ್ಥಿಗಳ ವಸತಿ ನಿಲಯವನ್ನು ರಾಜ್ಯಪಾಲರು ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಕುಲಾಧಿಪತಿ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.

ದೇಶದ ಆರ್ಥಿಕ ಸ್ಥಿತಿ 3ನೇ ಸ್ಥಾನಕ್ಕೆ ಬರಬೇಕಿದೆ

ಭಾರತ ಆರ್ಥಿಕವಾಗಿ ಸುಸ್ಥಿರದಲ್ಲಿದೆ, ವಿಶ್ವದಲ್ಲಿ ಐದನೇ ಸ್ಥಾನದಲ್ಲಿದ್ದು. ಮೂರನೇ ಸ್ಥಾನಕ್ಕೆ ತರಲು ಶ್ರಮಿಸಬೇಕಿದೆ ಅದಕ್ಕಾಗಿ ಯುವ ಜನತೆ ದೇಶದ ಪ್ರಗತಿಯಲ್ಲಿ ಪಾಲ್ಗೊಳ್ಳಬೇಕು. ಸ್ವಾಭಿಮಾನಿ, ಆತ್ಮನಿರ್ಭರ ಭಾರತದ ಅಭಿವೃದ್ಧಿಯಲ್ಲಿ ಸಹ ಭಾಗಿತ್ವ ಅಗತ್ಯ ಎಂದು ರಾಜ್ಯಪಾಲ ಥಾವರಚಂದ್ ಗೆಹ್ಲೋಟ ಹೇಳಿದ್ದಾರೆ.

ಇದನ್ನೂ ಓದಿ: ಹಂಪಿಯಲ್ಲಿ ಜಿ-20: 3ನೇ ಶೆರ್ಪಾ ಸಭೆ ಆರಂಭ, ನ್ಯೂ ದೆಹಲಿ ಘೋಷಣೆಗೆ ಅಂತಿಮ ರೂಪ!

ನಗರದ ವಿಎಸ್ ಕೆವಿವಿಯ ಘಟಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಿವಿಗಳ ಬೋಧಕ ಸಿಬ್ಬಂದಿ ಬದಲಾಗುತ್ತಿರುವ ತಂತ್ರಜ್ಞಾನವನ್ನು ಅಧ್ಯಯನ ಮಾಡಿಕೊಂಡು ಬೋಧಿಸುವ ಕಾರ್ಯ ಆಗಬೇಕು ಎಂದರು.

ಎಲ್ಲಾ ವಿವಿಗಳಿಗೆ ಪತ್ರ ಬರೆದು ಜಲ, ವಾಯು ವನ ಸಂರಕ್ಷಣೆ ಮಾಡಿ ಸ್ವಚ್ಚ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡುವಂತೆ ತಿಳಿಸಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: Hampi: ಐತಿಹಾಸಿಕ ಹಂಪಿಯಲ್ಲಿ ಜುಲೈ 12ರವರೆಗೂ ಜಿ20 ಸಿಡಬ್ಲ್ಯುಜಿ ಸಭೆ; 29 ದೇಶಗಳ 50 ಪ್ರತಿನಿಧಿಗಳು ಭಾಗಿ

ಈ ಸಂದರ್ಭಧಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ನಾಗೇಂದ್ರ, ಇಂಡಿಯನ್ ಕೌನ್ಸಿಲ್ ಆಫ್ ಸೋಶಿಯಲ್ ಸೈನ್ಸ್ ರಿಸರ್ಚ್ ನವದೆಹಲಿ ಅಧ್ಯಕ್ಷ ಡಾ. ಜೆ. ಕೆ., ಬಜಾಜ್, ಕುಲಪತಿ ಪ್ರೋ ಸಿದ್ದು ಪಿ ಆಲಗೂರು, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ, ಜಿಪಂ ಸಿಇಒ ರಾಹುಲ್ ಸಂಕನೂರ ಸೇರಿದಂತೆ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:52 pm, Thu, 13 July 23