ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ(Hampi Kannada University) ನೀಡಲಾಗುವ ಪ್ರತಿಷ್ಠಿತ ನಾಡೋಜ ಗೌರವ(Nadoja Award) ಪದವಿ ಈ ಬಾರಿ ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್(Dr CN Manjunath), ಹಿರಿಯ ಸಾಹಿತಿ ಕೃಷ್ಣಪ್ಪ ಜಿ(Krishnappa G). ಹಾಗೂ ಲೇಖಕ ಎಸ್. ಷಡಕ್ಷರಿ(S Shadakshari) ಅವರಿಗೆ ಒಲಿದಿದೆ.
ಕನ್ನಡ ವಿಶ್ವವಿದ್ಯಾಲಯದಲ್ಲಿ ಡಿ.8 ರಂದು ಆಯೋಜಿಸಿರುವ ‘ನುಡಿಹಬ್ಬ’ (ಘಟಿಕೋತ್ಸವ)ದಲ್ಲಿ ಮೂವರು ಗಣ್ಯರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ನಾಡೋಜ ಪ್ರದಾನ ಮಾಡುವರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಶ್ವತ್ಥನಾರಾಯಣ ಅವರು ಡಿ.ಲಿಟ್ ಹಾಗೂ ಪಿಎಚ್.ಡಿ ಪದವಿ ಪ್ರದಾನ ಮಾಡಲಿದ್ದು, ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ ಘಟಿಕೋತ್ಸವ ಭಾಷಣ ಮಾಡುವರು.
ಇದನ್ನೂ ಓದಿ: ಹಂಪಿ ಕನ್ನಡ ವಿಶ್ವವಿದ್ಯಾಲಯಕ್ಕೆ 2 ಕೋಟಿ ರೂ. ಬಿಡುಗಡೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹಾಸನ ಮೂಲದ ಡಾ.ಸಿ.ಎನ್. ಮಂಜುನಾಥ್ ಅವರಿಗೆ ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ, ಸಾಹಿತ್ಯ ಕೃಷಿಯನ್ನು ಗುರುತಿಸಿ ಬೆಂಗಳೂರಿನ ಕೃಷ್ಣಪ್ಪ ಜಿ. ಅವರಿಗೆ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ತುಳವನೂರು ಗ್ರಾಮದ ಎಸ್. ಷಡಕ್ಷರಿ ಅವರಿಗೆ ಸಾಹಿತ್ಯ ಮತ್ತು ಸಮಾಜ ಸೇವೆಯನ್ನು ಗುರುತಿಸಿ ನಾಡೋಜಾ ಗೌರವ ಪದವಿಗೆ ಆಯ್ಕೆ ಮಾಡಲಾಗಿದೆ ಎಂದು ಆಹ್ವಾನ ಪತ್ರಿಕೆಯಲ್ಲಿ ತಿಳಿಸಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 9:40 am, Tue, 6 December 22