AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hampi Utsav 2023: ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಇಂದು ಸಿಎಂ ಬೊಮ್ಮಾಯಿ ಚಾಲನೆ

ಹಂಪಿ ಉತ್ಸವ 2023: ಇಂದಿನಿಂದ 3 ದಿನಗಳ ಕಾಲ ಹಂಪಿ ಉತ್ಸವ ಆರಂಭವಾಗಲಿದೆ. ಇಂದು ಸಂಜೆ 5.30ಕ್ಕೆ ಸಿಎಂ ಬೊಮ್ಮಾಯಿಯವರು ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.

Hampi Utsav 2023: ವಿಶ್ವ ವಿಖ್ಯಾತ ಹಂಪಿ ಉತ್ಸವಕ್ಕೆ ಇಂದು ಸಿಎಂ ಬೊಮ್ಮಾಯಿ ಚಾಲನೆ
ಹಂಪಿ ಉತ್ಸವಕ್ಕೆ ಸಿದ್ದವಾಗುತ್ತಿರುವ ವೇದಿಕೆ
TV9 Web
| Edited By: |

Updated on:Jan 27, 2023 | 2:22 PM

Share

ವಿಜಯನಗರ: ವಿಶ್ವ ವಿಖ್ಯಾತ ಹಂಪಿಯಲ್ಲಿ(Hampi Utsav 2023) ಇಂದಿನಿಂದ 3 ದಿನಗಳ ಕಾಲ ಹಂಪಿ ಉತ್ಸವ ಆರಂಭವಾಗಲಿದೆ. ಇಂದು ಸಂಜೆ 5.30ಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು(Basavaraj Bommai) ಹಂಪಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಚಿವರಾದ ಆನಂದ್ ಸಿಂಗ್, ಶ್ರೀರಾಮುಲು ಸೇರಿ ಹಲವು ಗಣ್ಯರು ಭಾಗಿಯಾಗಲಿದ್ದಾರೆ. ಹಂಪಿ ಉತ್ಸವ ಕಾರ್ಯಕ್ರಮ ಹಿನ್ನೆಲೆ ಹಂಪಿಯ ಎಲ್ಲಾ ಸ್ಮಾರಕಗಳಿಗೆ ದೀಪಾಲಂಕಾರ ಮಾಡಲಾಗಿದೆ. ಉತ್ಸವಕ್ಕೆ ನಾಲ್ಕು ವೇದಿಕೆಗಳನ್ನು ಸಿದ್ಧಪಡಿಸಲಾಗಿದೆ. ಬಾಲಿವುಡ್ ಮತ್ತು ಸ್ಯಾಂಡಲ್‌ವುಡ್ ಸೇರಿದಂತೆ ಸುಮಾರು 6,000 ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಟಿ ವೆಂಕಟೇಶ್ ಮಾತನಾಡಿ, ಉತ್ಸವಕ್ಕೆ ಸುಮಾರು 9 ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದ್ದು, ಸುಮಾರು 15 ಕೋಟಿ ರೂ ವೆಚ್ಚವಾಗಲಿದೆ. ಜಲಕ್ರೀಡೆ, ಕುಸ್ತಿ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಮತ್ತು ಧ್ವನಿ ಕಾರ್ಯಕ್ರಮಗಳು ಪ್ರಮುಖ ಆಕರ್ಷಣೆಯಾಗಲಿವೆ.

ಖ್ಯಾತ ಸಂಗೀತಗಾರರಾದ ಕೈಲಾಶ್ ಕೇರ್, ಅರ್ಮಾನ್ ಮಲೀಕ್, ಅಂಕಿತ್ ತೀವಾರಿ, ಅರ್ಜುನ್ ಜನ್ಯಾ, ರಘು ದೀಕ್ಷಿತ್, ವಿಜಯ್ ಪ್ರಕಾಶ್ ಸೇರಿದಂತೆ ಅನೇಕ ಕಲಾವಿದರಿಂದ ಸಂಗೀತ-ನೃತ್ಯ ಕಾರ್ಯಕ್ರಮ ನಡೆಯಲಿದೆ.

ಕರೊನಾ ಬಳಿಕ ಇದೇ ಮೊದಲ ಬಾರಿಗೆ ಹಂಪಿ ಉತ್ಸವ ನಡೆಯುತ್ತಿದ್ದು ಸುಮಾರು 9ಲಕ್ಷದಷ್ಟು ಜನ ಬರುವ ನಿರೀಕ್ಷೆ ಇದೆ. ಹಂಪಿ ಉತ್ಸವಕ್ಕೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಹಂಪಿ ಉತ್ಸವ ಕಾರ್ಯಕ್ರಮಗಳ ವಿವರ

ಹಂಪಿ ಬೈ ಸ್ಕೈ: ಬೆಳಿಗ್ಗೆ 10 ಗಂಟೆಯಿಂದ ಕಮಲಾಪುರದ ಹೋಟಲ್ ಮಯೂರ ಭುವನೇಶ್ವರಿ ಆವರಣದಿಂದ ಆರಂಭವಾಗುತ್ತದೆ. ಫಲಪುಷ್ಪ ಪ್ರದರ್ಶನ: ಹಂಪಿ ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ನಡೆಯಲಿದೆ. ಆಹಾರ ಮೇಳ: ಮುಖ್ಯ ವೇದಿಕೆ ಗಾಯತ್ರಿ ಪೀಠ ಹಾಗೂ ಹಂಪಿ ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದ ಹತ್ತಿರ ನಡೆಯಲಿದೆ. ಕೃಷಿ, ಕರಕುಶಲ, ಕೈಗಾರಿಕೆ ಹಾಗೂ ಪುಸ್ತಕ ಪ್ರದರ್ಶನ: ಹಂಪಿ ಗ್ರಾಮ ಪಂಚಾಯತಿ ಮುಂಭಾಗದ ಮಾತಂಗ ಪರ್ವತ ಮೈದಾನದಲ್ಲಿ ನಡೆಯಲಿವೆ. ಗ್ರಾಮೀಣ ಕ್ರೀಡೆಗಳು (ಕುಸ್ತಿ, ಗುಂಡು/ಚೀಲ ಎತ್ತುವುದು ಹಾಗೂ ಇತರೆ ಕ್ರೀಡೆಗಳು): ಹೊಸ ಮಲಪನಗುಡಿ ಗ್ರಾಮದ ವಿದ್ಯಾರಣ್ಯ ಸರ್ಕಾರಿ ಶಾಲೆಯ ಆವರಣದಲ್ಲಿ ನಡೆಯಲಿವೆ. ಸಾಹಸ ಕ್ರೀಡೆಗಳು: ಸಾಸಿವೆ ಕಾಳು ಗಣಪತಿ ಮಂಟಪದ ಮುಂಭಾಗದಲ್ಲಿ ನಡೆಯಲಿವೆ. ಧ್ವನಿ ಮತ್ತು ಬೆಳಕು ಪ್ರದರ್ಶನ: ಸಂಜೆ 7 ಗಂಟೆಗೆ ಕಮಲಮಹಲ್ ಸಮೀಪದ ಗಜಶಾಲೆ ಆವರಣದಲ್ಲಿ ನಡೆಯಲಿದೆ. ಜಲ ಕ್ರೀಡೆಗಳು : ಕಮಲಾಪುರ ಕೆರೆಯಲ್ಲಿ ನಡೆಯಲಿವೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:53 am, Fri, 27 January 23

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ