AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೇ ಸುಮ್ಮನೆ ಇರಲ್ಲ: ಬಳ್ಳಾರಿ ಕಾಂಗ್ರೆಸ್​ ಶಾಸಕನಿಗೆ ಜನಾರ್ದನ ರೆಡ್ಡಿ ಪರೋಕ್ಷ ಎಚ್ಚರಿಕೆ

ರಾಜಕೀಯ ಕುತಂತ್ರದಿಂದ ಬಳ್ಳಾರಿಯಿಂದ ಹೊರಗೆ ಕಳುಹಿಸಲಾಯ್ತು. ಯಾರನ್ನು ನಾನು ಬೆಳೆಸಿದ್ದೇನೆ ಅವರು ನನಗೆ ಮೋಸ ಮಾಡಿದರು. ಹೀಗಾಗಿ ಅವರನ್ನು ಕಳೆದ ಚುನಾವಣೆಯಲ್ಲಿ ಜನರು ಸೋಲಿಸಿದರು ಎಂದು ಪರೋಕ್ಷವಾಗಿ ಶ್ರೀರಾಮುಲು, ಸೋಮಶೇಖರ್ ರೆಡ್ಡಿ ವಿರುದ್ಧ ಜನಾರ್ದನ ರೆಡ್ಡಿ ವಾಗ್ದಾಳಿ ಮಾಡಿದರು.

ಕಾರ್ಯಕರ್ತರಿಗೆ ಕಿರುಕುಳ ಕೊಟ್ಟರೇ ಸುಮ್ಮನೆ ಇರಲ್ಲ: ಬಳ್ಳಾರಿ ಕಾಂಗ್ರೆಸ್​ ಶಾಸಕನಿಗೆ ಜನಾರ್ದನ ರೆಡ್ಡಿ ಪರೋಕ್ಷ ಎಚ್ಚರಿಕೆ
ಶಾಸಕ ಜನಾರ್ದನ ರೆಡ್ಡಿ
Follow us
ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Updated By: ವಿವೇಕ ಬಿರಾದಾರ

Updated on:Aug 25, 2023 | 1:51 PM

ಬಳ್ಳಾರಿ: ನಮ್ಮ ಕೆಆರ್​ಪಿಪಿ (KRPP) ಪಕ್ಷದವರು ಸರ್ಕಾರಿ ಕಚೇರಿಗಳಿಗೆ ಬಂದರೇ ಕೆಲಸ ಮಾಡಬೇಡಿ ಎಂದು ಹೇಳುತ್ತಿದ್ದಾರೆ. ಇದು ಸರಿಯಲ್ಲ. ಬಳ್ಳಾರಿ (Ballari) ಅಭಿವೃದ್ಧಿ ಮಾಡಿಮಾಡಿಲ್ಲ ಅಂದರೇ ಕೆಆರ್​​ಪಿಪಿ ಪಕ್ಷದ ವತಿಯಿಂದ ಹೋರಾಟ ಮಾಡುತ್ತವೆ. ಕೆಆರ್​​​​​ಪಿಪಿ ಪಕ್ಷದ ಕಾರ್ಯಕರ್ತರಿಗೆ ಕಿರುಕುಳ ತೊಂದರೆ ಕೊಟ್ಟರೇ ಸುಮ್ಮನೆ ಇರುವ ಮಾತಿಲ್ಲ. ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೇ ವಿಧಾನಸೌಧದ ಒಳಗೆ ಹೊರಗೆ ಹೋರಾಟ ಮಾಡುತ್ತೇನೆ. ಎಂದು ಪರೋಕ್ಷವಾಗಿ ಬಳ್ಳಾರಿ ನಗರ ಕಾಂಗ್ರೆಸ್ ಶಾಸಕ ಮತ್ತು ಉಸ್ತುವಾರಿ ಸಚಿವರಿಗೆ,ಕೆಆರ್​ಪಿಪಿ ಶಾಸಕ ಜನಾರ್ದನ ರೆಡ್ಡಿ (Janardhan Reddy) ಎಚ್ಚರಿಕೆ ನೀಡಿದ್ದಾರೆ.

ವರಮಹಾಲಕ್ಷ್ಮೀ ಹಬ್ಬದ ಹಿನ್ನಲೆಯಲ್ಲಿ ಇಂದು (ಆ.25) ಬಳ್ಳಾರಿಯಲ್ಲಿ ಕೆಆರ್​​ಪಿಪಿ ಪಕ್ಷದ ವತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಜನಾರ್ದನ ರೆಡ್ಡಿ ವರ್ಚ್ಯುಯಲ್ ಮೂಲಕ ಭಾಗವಹಿಸಿ ಮಾತನಾಡಿದ ಅವರು ರಾಜಕೀಯ ಕುತಂತ್ರದಿಂದ ಬಳ್ಳಾರಿಯಿಂದ ಹೊರಗೆ ಕಳುಹಿಸಲಾಯ್ತು. ಯಾರನ್ನು ನಾನು ಬೆಳೆಸಿದ್ದೇನೆ ಅವರು ನನಗೆ ಮೋಸ ಮಾಡಿದರು. ಹೀಗಾಗಿ ಅವರನ್ನು ಕಳೆದ ಚುನಾವಣೆಯಲ್ಲಿ ಜನರು ಸೋಲಿಸಿದರು ಎಂದು ಪರೋಕ್ಷವಾಗಿ ಶ್ರೀರಾಮುಲು, ಸೋಮಶೇಖರ್ ರೆಡ್ಡಿ ವಿರುದ್ಧ ವಾಗ್ದಾಳಿ ಮಾಡಿದರು.

ಇದನ್ನೂ ಓದಿ:  ಅಂಜನಾದ್ರಿ ಹೆಸರಿನಲ್ಲಿ ರಾಜಕೀಯ: ಬಿಜೆಪಿ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಅಸಮಾಧಾನ

ನನ್ನ ಪತ್ನಿ ಲಕ್ಷ್ಮೀ ಅರುಣಾ ಸೋಲಿಸಲು ಹೋಗಿ ಮನೆಯಲ್ಲಿ ಕುಳಿತಿದ್ದಾರೆ. ಲಕ್ಷ್ಮೀ ಅರುಣಾ ಮತ್ತು ಜನಾರ್ದನ ರೆಡ್ಡಿ ನಿಮ್ಮ ಜೊತೆಗೆ ಇರುತ್ತಾರೆ. ನಮ್ಮವರೇ ವಿರೋಧಿಗಳ ಜೊತೆಗೆ ಸೇರಿ ನಮ್ಮನ್ನು ಸೋಲಿಸಿದರು ಎಂದು ಅಸಮಾಧಾನ ಹೊರಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 1:50 pm, Fri, 25 August 23

ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ