ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಸಚಿವ ಶ್ರೀರಾಮುಲು, ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು!

| Updated By: ಸಾಧು ಶ್ರೀನಾಥ್​

Updated on: Feb 05, 2022 | 1:58 PM

ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಸಾರಿಗೆ ಸಚಿವ ಬಿ. ಶ್ರೀರಾಮುಲು (b sriramulu) ಈ ಹಿಂದಿನಿಂದಲೂ ಹಿಜಾಬ್ ಬಗ್ಗೆ ಚರ್ಚೆ ನಡೆಯುತ್ತಿದೆ. ಹಿಜಾಬ್ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ.

ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಸಚಿವ ಶ್ರೀರಾಮುಲು, ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು!
ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ರಾಮುಲು; ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು!
Follow us on

ಬಳ್ಳಾರಿ: ರಾಜ್ಯದಲ್ಲಿ ಬಿರುಗಾಳಿ ಎಬ್ಬಿಸಿರುವ ಶಾಲಾ ಮಕ್ಕಳು ಹಿಜಾಬ್ ಧರಿಸುವ (hijab controversy) ವಿಚಾರವಾಗಿ ಆಡಳಿತಾರೂಢ ಪಕ್ಷದ ಸಚಿವರೊಬ್ಬರು ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ್ದು, ಆ ವಿಷಯದಲ್ಲಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದಿದ್ದಾರೆ. ಹಿಜಾಬ್ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ ಸಾರಿಗೆ ಸಚಿವ ಬಿ. ಶ್ರೀರಾಮುಲು (b sriramulu) ಈ ಹಿಂದಿನಿಂದಲೂ ಹಿಜಾಬ್ ಬಗ್ಗೆ ಚರ್ಚೆ ನಡೆಯುತ್ತಿದೆ. ಹಿಜಾಬ್ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ, ನಮ್ಮ ಸಂಸ್ಕೃತಿಯನ್ನು ನಾವು ಉಳಿಸಿಕೊಳ್ಳಲು ಪ್ರಯತ್ನ ಮಾಡಬೇಕಿದೆ. ಈಗಾಗಲೇ ಗೃಹ ಸಚಿವರು ಈ ಬಗ್ಗೆ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ನಾ ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದು ಬಳ್ಳಾರಿಯಲ್ಲಿ (bellary) ಹೇಳಿದ್ದಾರೆ.

ನಾನು ಹಿಜಾಬ್ ಧರಿಸಿಯೇ ವಿಧಾನಸೌಧದಲ್ಲಿ ಕೂರುತ್ತೇನೆ: ಶಾಸಕಿ ಖನೀಜ್ ಫಾತೀಮಾ ಸರ್ಕಾರಿ ಸವಾಲ್
ಕಲಬುರಗಿ: ನಾನು ವಿಧಾನಸೌಧದಲ್ಲಿ(vidhana soudha) ಹಿಜಾಬ್(Hijab) ಧರಿಸಿಯೇ ಕೂರುತ್ತೇನೆ. ಧೈರ್ಯವಿದ್ದರೆ ಯಾರಾದರೂ ತಡೆಯಲಿ. ರಾಜ್ಯದಲ್ಲಿ ಅಭಿವೃದ್ಧಿಯಾಗುತ್ತಿಲ್ಲ. ಅದಕ್ಕಾಗಿ ಈ ರೀತಿಯ ವಿಚಾರಗಳನ್ನು ಮುನ್ನಲೆಗೆ ತರಲಾಗುತ್ತಿದೆ. ನಾನು ಸಾಧ್ಯವಾದರೆ ಉಡುಪಿಗೆ ಹೋಗಿ ವಿದ್ಯಾರ್ಥಿಗಳ(Students) ಹೋರಾಟಕ್ಕೆ ಬೆಂಬಲ ನೀಡುತ್ತೇನೆ ಎಂದು ಕಲಬುರಗಿ ಉತ್ತರ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಖನೀಜ್ ಪಾತೀಮಾ ಹಿಜಾಬ್ ಬೆಂಬಲಸಿ ಹೇಳಿಕೆ ನೀಡಿದ್ದಾರೆ.

ಸಿಎಂ ಬೊಮ್ಮಾಯಿ ಕೂಡ ಹಿಜಾಬ್ ಹಾಕಿಕೊಂಡಿದ್ದಾರೆ: ಸಿ.ಎಂ ಇಬ್ರಾಹಿಂ
ಮೈಸೂರು ಮಹಾರಾಜ ಕಾಲದಿಂದಲೂ ಜಾರಿಯಲ್ಲಿದೆ. ಹೆಣ್ಣು ಮಕ್ಕಳು ತೆರಳುವ ಚಕ್ಕಡಿ ಗಾಡಿಗೂ ಪರದೆ ಹಾಕಿರುವ ಇತಿಹಾಸ ಇದೆ. ಇದು ಕೋವಿಡ್ ಸಮಯದಲ್ಲಿ ಹಾಕಿಕೊಳ್ಳುವಂತೆ. ನಾನು ಹಾಕೊಂಡಿದ್ದೀನಿ. ಸಿಎಂ ಬೊಮ್ಮಾಯಿ ಕೂಡ ಹಿಜಾಬ್ ಹಾಕಿಕೊಂಡಿದ್ದಾರೆ. ಇನ್ನು ಆ ಪ್ರಾಂಶುಪಾಲರು ಪಾಠ ಮಾಡುವವರು. ಅವರಿಗೆ ಬುದ್ದಿ ಇದೆಯಾ? ಈ ಹಿಂದೆ ಪೋಲಿಸರಿಗೂ ಸಮವಸ್ತ್ರ ಹಾಕಿಸಿ ಬಿಟ್ಟರು. ಎಲ್ಲಿಗೆ ತೆಗೆದುಕೊಂಡು ಹೋಗುತ್ತಾ ಇದಿರಿ? ಅಧಿಕಾರಿಗಳಿಗೆ ಹೇಳುತ್ತಾ ಇದ್ದೀನಿ ಹುಷಾರ್. ಬಿಜೆಪಿ ಇದೇ ಕೊನೆ ಬಾರಿ ಗಮನಿಸಿ , ಗಾಳಿ ಬದಲಾಗುತ್ತಿದೆ ಎಂದು ಮೈಸೂರಿನಲ್ಲಿ ಸಿ. ಎಂ. ಇಬ್ರಾಹಿಂ ಹೇಳಿದ್ದಾರೆ.

ಹಿಜಾಬ್​ಗಾಗಿ ಹೈಕೋರ್ಟ್ ಮೆಟ್ಟಿಲೇರಿರುವ ಮುಸ್ಲಿಂ ವಿದ್ಯಾರ್ಥಿ:
ಉಡುಪಿ: ಹಿಜಾಬ್​ಗಾಗಿ ಮುಸ್ಲಿಂ ವಿದ್ಯಾರ್ಥಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹಿಜಾಬ್ ಧರಿಸುವುದು ಮೂಲಭೂತ ಹಕ್ಕೆಂದು ವಾದ ಮಾಡಿ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಉಡುಪಿಯ ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಸಂವಿಧಾನದಡಿ ಧಾರ್ಮಿಕ ಹಕ್ಕುಗಳನ್ನು ನೀಡಲಾಗಿದೆ. ಹಿಜಾಬ್ ಧರಿಸುವುದೂ ಧಾರ್ಮಿಕ ಹಕ್ಕಿನ ಭಾಗ ಆಗಿದೆ. ಆದರೆ ಹಿಜಾಬ್ ಧರಿಸಲು ಕಾಲೇಜು ಅನುಮತಿಸಿಲ್ಲ. ಹೀಗಾಗಿ ಸರ್ಕಾರಕ್ಕೆ ಸೂಕ್ತ ನಿರ್ದೇಶನ ನೀಡಲು ಮನವಿ ಮಾಡಿದ್ದಾರೆ.

ಉಡುಪಿಯ ಸರ್ಕಾರಿ ಮಹಿಳಾ ಕಾಲೇಜು ಹಿಜಾಬ್ ವಿವಾದಕ್ಕೆ ಸಂಬಂಧಿಸಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಸೋಮವಾರ ಕಾಲೇಜಿನಲ್ಲಿ ಸಭೆ ನಡೆಸಲಾಗಿತ್ತು. ಬ್ಯಾರಿ ಸಾಹಿತ್ಯ ಅಕಾಡೆಮಿ ಸದಸ್ಯರು ಕಾಲೇಜಿನ ಆಡಳಿತ ಮಂಡಳಿ, ಡಿಡಿಪಿಯು ಸಭೆಯಲ್ಲಿ ಭಾಗಿ ಆಗಿದ್ದರು. ಒಂದೂವರೆ ತಿಂಗಳುಗಳ ಕಾಲ ಈ ವಿವಾದ ನಡೆಯಿತು. ಹಿಜಾಬ್ ಧರಿಸದೆ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ ಇದೆ. ಕಾಲೇಜಿಗೆ ಬರದಿದ್ದರೆ ಆನ್ಲೈನ್ ಕ್ಲಾಸ್ ಅವಕಾಶ ಮಾಡಲಾಗಿದೆ. ಇನ್ನು ವಿದ್ಯಾರ್ಥಿಗಳು ಹೆಸರಿಗಾಗಿ ಹಠ ಮಾಡುವುದು ಸರಿಯಲ್ಲ. ಹಿಜಾಬ್​ಗೆ ನಮ್ಮ ವಿರೋಧ ಇಲ್ಲ ಅದು ಇಸ್ಲಾಂನ ಪದ್ಧತಿ. ಶರಿಯತ್ ಆಧಾರಿತ ರಾಷ್ಟ್ರ ಬೇರೆ, ಪ್ರಜಾಪ್ರಭುತ್ವ ರಾಷ್ಟ್ರ ಬೇರೆ. ಭಾರತದಲ್ಲಿ ಸರ್ಕಾರದ ಆದೇಶ ಪಾಲಿಸಬೇಕು ಎಂದು ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ ಹೇಳಿಕೆ ನೀಡಿದ್ದರು.

Published On - 1:51 pm, Sat, 5 February 22