AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ವಿಜಯನಗರ ರಾಜಧಾನಿ ಆಗುತ್ತೆ -ಸಚಿವ ಆನಂದ್ ಸಿಂಗ್

ವಿಜಯನಗರ ಸಾಮ್ರಾಜ್ಯ ನೆಲದ ಗುಣವೇ ವಿಶೇಷ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಮಾತಿನ ಭರದಲ್ಲಿ ಸಚಿವ ಆನಂದ್ ಸಿಂಗ್ ಹೇಳಿಕೆ ನೀಡಿದ್ದಾರೆ.

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ವಿಜಯನಗರ ರಾಜಧಾನಿ ಆಗುತ್ತೆ -ಸಚಿವ ಆನಂದ್ ಸಿಂಗ್
ಸಚಿವ ಆನಂದ್ ಸಿಂಗ್
TV9 Web
| Updated By: ಆಯೇಷಾ ಬಾನು|

Updated on:Dec 16, 2022 | 1:49 PM

Share

ಒಳ್ಳಾರಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬೇಕು ಎಂಬ ಕೂಗು ಮತ್ತೆ ಮುನ್ನೆಲೆಗೆ ಬಂದಿದೆ. ಉ.ಕರ್ನಾಟಕ ಪ್ರತ್ಯೇಕ ರಾಜ್ಯವಾದ್ರೆ ವಿಜಯನಗರ ರಾಜಧಾನಿ ಆಗುತ್ತೆ ಎಂದು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭಟ್ಟರಳ್ಳಿಯಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್(Anand Singh) ಹೇಳಿಕೆ ನೀಡಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭಟ್ಟರಳ್ಳಿ ಗ್ರಾಮದ ಆಂಜನೇಯ ದೇಗುಲದ ಬಳಿ ನಿನ್ನೆ(ಡಿ.15) ಬಿಜೆಪಿ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಮಾತನಾಡಿದ ಆನಂದ್ ಸಿಂಗ್ ಅವರು, ಜಿಲ್ಲಾ ಕೇಂದ್ರದಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಜಿಲ್ಲಾ ಕಚೇರಿ ಕಾಮಗಾರಿ ಆರಂಭವಾಗಿದೆ. ವಿಜಯನಗರ ಸಾಮ್ರಾಜ್ಯ ನೆಲದ ಗುಣವೇ ವಿಶೇಷ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಮಾತಿನ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ-ತೆಲಂಗಾಣ ಗಡಿಭಾಗದ ಗ್ರಾಮವೊಂದರಲ್ಲಿರುವ ಈ ಮನೆ ಎರಡೂ ರಾಜ್ಯಗಳ ಅರ್ಧರ್ಧ ಭಾಗವಾಗಿದೆ!

ಈ ಹಿಂದೆ ಉಮೇಶ್ ಕತ್ತಿ ಅವರು ಕೂಡ ಆಗಾಗ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಹೇಳುತ್ತಿದ್ರು. ಉಮೇಶ್ ಕತ್ತಿ ಅವರ ಬಳಿಕ ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯದ ಕುರಿತು ಆನಂದ್ ಸಿಂಗ್ ಕೂಡ ಧ್ವನಿ ಎತ್ತಿದ್ದಾರೆ. ಇನ್ನು ವಿಜಯನಗರವನ್ನು ಕರ್ನಾಟಕದ 31ನೇ ಜಿಲ್ಲೆಯಾಗಿಸಿದ ಕೀರ್ತಿ ಸಚಿವ ಆನಂದ್ ಸಿಂಗ್‌ ಅವರಿಗೆ ಸಲ್ಲುತ್ತದೆ. ಹೀಗಾಗಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬಹುದಾ ಎಂಬ ಚರ್ಚೆಗಳು ನಡೆಯುತ್ತಿವೆ.

2020ರಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಿಂದ ಬೇರ್ಪಡಿಸಿ 2021ರ ಫೆಬ್ರವರಿ 8ರಂದು ಕರ್ನಾಟಕದಲ್ಲಿ 31ನೇ ಜಿಲ್ಲೆಯನ್ನಾಗಿ ವಿಜಯನಗರ ಜಿಲ್ಲೆಯನ್ನು ರಚಿಸಲಾಯಿತು. ಅಂದು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಿಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರವು 2020ರ ನವೆಂಬರ್‌ 18ರಂದು ಜಿಲ್ಲೆಯ ರಚನೆಗೆ ಅನುಮೋದನೆ ನೀಡಿ ಅಧಿಸೂಚನೆ ಹೊರಡಿಸಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:48 pm, Fri, 16 December 22