AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sandur: ಚಾಲುಕ್ಯರ ಕಾಲದ ಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ! ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್​

Sandur Kumaraswamy Temple: ಗಣಿ ಸ್ಪೋಟದಿಂದ ದೇವಸ್ಥಾನದ ಕಲ್ಲಿನ ಕಂಬಗಳಲ್ಲಿ ಬಿರುಕು ಮೂಡಿದ್ದು, ಗೋಪುರ ವಾಲಿದೆ. ಸ್ಥಳೀಯ ಗ್ರಾಮಗಳ ಕುಡಿಯುವ ನೀರಿನ ಮೂಲ ಕಲುಷಿತವಾಗಿದೆ. ಗಣಿ ಧೂಳಿನಿಂದ ದೇವಸ್ಥಾನ ಸಂಪೂರ್ಣವಾಗಿ ಮುಚ್ಚಿ ಹೋಗಿದೆ.

Sandur: ಚಾಲುಕ್ಯರ ಕಾಲದ ಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ! ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್​
ಕುಮಾರಸ್ವಾಮಿ ದೇವಸ್ಥಾನದ ಸುತ್ತ ಗಣಿಗಾರಿಕೆ!
TV9 Web
| Edited By: |

Updated on:Jan 07, 2023 | 5:24 PM

Share

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಪುರಾತನ ಕುಮಾರಸ್ವಾಮಿ ದೇವಸ್ಥಾನ (Sri Kumaraswamy Temple) ಸುತ್ತಲಿನ ಸ್ವಾಮಿಮಲೈ ಬೆಟ್ಟದಲ್ಲಿ (Swamimalai hills) ಅವ್ಯಾಹತವಾಗಿ ನಡೆಯುತ್ತಿರುವ ಗಣಿಗಾರಿಕೆ ತಡೆಯುವಂತೆ ಕೋರಿದ್ದ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ರಾಜ್ಯ ಉಚ್ಛ ನ್ಯಾಯಾಲಯ (High Court) ನೋಟಿಸ್ ಜಾರಿಗೊಳಿಸಿದೆ. ಸಂಡೂರಿನ ಶ್ರೀಶೈಲ ಆಲದಹಳ್ಳಿ ಸೇರಿದಂತೆ ಐವರು ನಿವಾಸಿಗಳು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಮುಖ್ಯ ನ್ಯಾಯಮೂರ್ತಿಗಳಾದ ಪಿ ಬಿ ವರ್ಲೆ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಸರ್ಕಾರಕ್ಕೆ ನೋಟಿಸ್ (Notice) ಜಾರಿಗೊಳಿಸಿದೆ.

ಅರ್ಜಿದಾರರ ವಾದ ಆಲಿಸಿದ ಬಳಿಕ ನ್ಯಾಯಪೀಠವು ಕೇಂದ್ರ ಸಂಸ್ಕತಿ ಸಚಿವಾಲಯ, ರಾಜ್ಯ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕರು, ಭಾರತೀಯ ಸರ್ವೆಕ್ಷಣಾ ಇಲಾಖೆ ಹಾಗೂ ಐದು ಖಾಸಗಿ ಗಣಿ ಕಂಪನಿಗಳು ಸೇರಿ ಒಟ್ಟು 17 ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ ನಾಲ್ಕು ವಾರದಲ್ಲಿ ಆಕ್ಷೇಪಣೆ ಸಲ್ಲಿಸಲು ನಿರ್ದೇಶಿಸಲಾಗಿದೆ.

Illegal Mining near Kumaraswamy temple in Sandur High Court issues Notice to Karnataka Government 1

ಅರ್ಜಿದಾರರ ಪರ ವಕೀಲರು 7ನೇ ಶತಮಾನದ ಬಾದಾಮಿ ಚಾಲುಕ್ಯರ ಅವಧಿಯಲ್ಲಿ ( 1200 year old Badami Chalukyan era temple) ಕುಮಾರಸ್ವಾಮಿ ದೇವಸ್ಥಾನ ನಿರ್ಮಾಣವಾಗಿದ್ದು, ದೇವಸ್ಥಾನದ ಸುತ್ತಲಿನ ಬೆಟ್ಟದಲ್ಲಿ ಜೀವ ವೈವಿಧ್ಯ ಮತ್ತು ಔಷಧೀಯ ಗುಣವುಳ್ಳ ಸಸ್ಯಗಳನ್ನ ಸ್ವಾಮಿಮಲೈ ಅರಣ್ಯ ಪ್ರದೇಶ ಹೊಂದಿದೆ. ಈ ಬೆಟ್ಟದಲ್ಲಿ 2.5 ಎಕರೆ ಜಾಗದಲ್ಲಿ ಕುಮಾರಸ್ವಾಮಿ ದೇವಸ್ಥಾನವನ್ನು ರಾಷ್ಟ್ರೀಯ ಸಂರಕ್ಷಿತ ಮತ್ತು ಪುರಾತನ ಸ್ಮಾರಕವಾಗಿ ಕೇಂದ್ರ ಸರ್ಕಾರ ಘೋಷಿಸಿದೆ. ದಕ್ಷಿಣ ಪ್ರಸ್ಥಭೂಮಿಯ ಪಶ್ಚಿಮಘಟ್ಟವೆಂದೇ ಸ್ವಾಮಿಮಲೈ ಅರಣ್ಯ ಪ್ರದೇಶ ಬೆಟ್ಟ ಪ್ರಸಿದ್ದಿ ಪಡೆದಿದೆ ಎಂದು ವಾದ ಮಂಡಿಸಿದ್ದರು.

Illegal Mining near Kumaraswamy temple in Sandur High Court issues Notice to Karnataka Government 1

ಗಣಿ ಸ್ಪೋಟದಿಂದ ದೇವಸ್ಥಾನದ ಕಲ್ಲಿನ ಕಂಬಗಳಲ್ಲಿ ಬಿರುಕು ಮೂಡಿದ್ದು, ಗೋಪುರ ವಾಲಿದೆ. ಸ್ಥಳೀಯ ಗ್ರಾಮಗಳ ಕುಡಿಯುವ ನೀರಿನ ಮೂಲ ಕಲುಷಿತವಾಗಿದೆ. ಕಬ್ಬಿಣದ ಅದಿರು ಕಣಗಳಿಂದ ವಾಯುಮಾಲಿನ್ಯ ಪ್ರಮಾಣ ಹೆಚ್ಚುತ್ತಿದೆ. ಗಣಿ ಧೂಳಿನಿಂದ ದೇವಸ್ಥಾನ ಸಂಪೂರ್ಣವಾಗಿ ಮುಚ್ಚಿ ಹೋಗಿದೆ. ಹೀಗಾಗಿ ಸ್ವಾಮಿಮಲೈ ಬೆಟ್ಟದಲ್ಲಿ ನಡೆಯುತ್ತಿರುವ ಗಣಿಗಾರಿಕೆ ನಿಲ್ಲಿಸಬೇಕು. ಐತಿಹಾಸಿಕ ಸ್ಮಾರಕವಾದ ದೇವಸ್ಥಾನ ಸಂರಕ್ಷಣೆ ಮಾಡುವಂತೆ ಸರ್ಕಾರಗಳಿಗೆ ಆದೇಶಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ.

ವರದಿ: ವೀರೇಶ್ ದಾನಿ, ಟಿವಿ 9, ಬಳ್ಳಾರಿ

Published On - 5:07 pm, Sat, 7 January 23

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು