ಬಳ್ಳಾರಿ: ಟಿಪ್ಪರ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು

ಬಳ್ಳಾರಿ(Ballari) ತಾಲೂಕಿನ‌ ಅಮರಾಪುರ ಗ್ರಾಮದ ಬಳಿ ಟಿಪ್ಪರ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಅದೃಷ್ಟವಶಾತ್ 8 ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಇತ್ತ ಚಿತ್ರದುರ್ಗದಲ್ಲೂ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿದ್ದಾನೆ.

ಬಳ್ಳಾರಿ: ಟಿಪ್ಪರ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು
ಬಳ್ಳಾರಿಯಲ್ಲಿದ ಟಿಪ್ಪರ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವು
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jun 18, 2024 | 7:44 PM

ಬಳ್ಳಾರಿ, ಜೂ.18: ಟಿಪ್ಪರ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಳ್ಳಾರಿ(Ballari) ತಾಲೂಕಿನ‌ ಅಮರಾಪುರ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ 8 ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿದೆ. ಹೊಸ ದರೋಜಿ ಗ್ರಾಮದ ನಾಗರಾಜ್ (40) ಹಾಗೂ ಪಾರ್ವತಿ (37) ಮೃತರು. ಪತ್ನಿ ಹಾಗೂ 8 ವರ್ಷದ ಗಂಡು ಮಗುವಿನೊಂದಿಗೆ ನಾಗರಾಜ್ ಬಳ್ಳಾರಿಗೆ ಬರುತ್ತಿದ್ದ. ಚಳಗುರ್ಕಿ ಗ್ರಾಮದಿಂದ ಬಳ್ಳಾರಿ ವಾಪಾಸ್ ಆಗುವ ವೇಳೆ ವೇಗವಾಗಿ ಬಂದ ಟಿಪ್ಪರ್ ಲಾರಿ ಬೈಕ್‍ಗೆ ಡಿಕ್ಕಿಯಾಗಿದೆ.

ಗಾಯಗೊಂಡ ಮಗುವಿಗೆ ಬಳ್ಳಾರಿ ವಿಮ್ಸ್‌ನಲ್ಲಿ ಚಿಕಿತ್ಸೆ

ಈ ವೇಳೆ ನಾಗರಾಜ್ ಹಾಗೂ ಪಾರ್ವತಿ ತಲೆ ಭಾಗಕ್ಕೆ ಬಲವಾದ ಗಾಯವಾಗಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಗಾಯಗೊಂಡ ಮಗುವಿಗೆ ಬಳ್ಳಾರಿ ವಿಮ್ಸ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ತಂದೆ-ತಾಯಿ ಕಳೆದುಕೊಂಡು ಮಗು ಅನಾಥವಾದಂತಾಗಿದೆ.

ಇದನ್ನೂ ಓದಿ:ಪ್ರಿಯಕರನ ಜತೆ ಸೇರಿ ಗಂಡನ ಕೊಲೆಗೆ ಸಂಚು, ಅಪಘಾತದಲ್ಲೂ ಸಾಯ್ಲಿಲ್ಲ ಕೊನೆಗೆ ಗುಂಡು ಹಾರಿಸಿ ಕೊಂದ ಪತ್ನಿ

ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಸಾವು

ಚಿತ್ರದುರ್ಗ: ನಗರದ ಜೈಲ್ ರಸ್ತೆಯಲ್ಲಿ ಎರಡು ಬೈಕ್​ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮತ್ತಿಬ್ಬರಿಗೆ ಗಂಭೀರ ಗಾಯವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಚಿತ್ರದುರ್ಗ ತಾಲೂಕಿನ ಮಾಳಪ್ಪನಹಟ್ಟಿಯ ಕಲ್ಲೇಶ್(23) ಮೃತ‌ ದುರ್ದೈವಿ. ಈ ಕುರಿತು ಚಿತ್ರದುರ್ಗ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ