ಸರ್ಕಾರದ ನಿರ್ಲಕ್ಷ್ಯ: ಬಳ್ಳಾರಿಯಲ್ಲಿನ ಒಂದು ಕಾಲದ ಚಿತ್ರಮಂದಿರ ಈಗ ಬಾಲಕಿಯರ ಸರ್ಕಾರಿ ವಸತಿ ಶಾಲೆ

ಬಳ್ಳಾರಿಯಲ್ಲಿ ಚಿತ್ರಮಂದಿರದಲ್ಲಿ ಬಾಲಕಿಯರ ವಸತಿ ಶಾಲೆ ನಡೆಯುತ್ತಿದೆ. ಸರಕಾರ ಈ ಚಿತ್ರಮಂದಿರ ಮಾಲೀಕರಿಗೆ ವರ್ಷಕ್ಕೆ 1.20 ಲಕ್ಷ ರೂ. ಬಾಡಿಗೆ ನೀಡುತ್ತಿದೆ. ಎರಡ್ಮೂರು ತರಗತಿಗಳು ಏಕಕಾಲಕ್ಕೆ ನಡೆಯುವುದರಿಂದ ವಿದ್ಯಾರ್ಥಿನಿಯರಲ್ಲಿ ಗೊಂದಲ ಉಂಟಾಗುತ್ತಿದೆ. ಆಟದ ಮೈದಾನವಿಲ್ಲದೆ, ವಿದ್ಯಾರ್ಥಿನಿಯರು ಮುಖ್ಯರಸ್ತೆಯ ಬಳಿ ಆಟವಾಡುತ್ತಿದ್ದಾರೆ.

ಸರ್ಕಾರದ ನಿರ್ಲಕ್ಷ್ಯ: ಬಳ್ಳಾರಿಯಲ್ಲಿನ ಒಂದು ಕಾಲದ ಚಿತ್ರಮಂದಿರ ಈಗ ಬಾಲಕಿಯರ ಸರ್ಕಾರಿ ವಸತಿ ಶಾಲೆ
ಚಿತ್ರಮಂದಿರದಲ್ಲಿ ಪಾಠ ಕೇಳುತ್ತಿರುವ ಮಕ್ಕಳು
Follow us
|

Updated on:Dec 08, 2023 | 8:11 AM

ಬಳ್ಳಾರಿ, ಡಿಸೆಂಬರ್​ 08: ಕುರುಗೋಡು ಪಟ್ಟಣದಲ್ಲಿನ ಒಂದು ಕಾಲದಲ್ಲಿ ಚಲನಚಿತ್ರ (Film theatre) ಮಂದಿರ ಈಗ ಬಾಲಕಿಯರ ಸರ್ಕಾರಿ ವಸತಿ ಶಾಲೆಯಾಗಿದೆ (Girls government residential school). ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು (Backward Classes Welfare Department) ಮೂರು ವರ್ಷಗಳ ಹಿಂದೆ 6 ರಿಂದ 10 ನೇ ತರಗತಿಯ ವಸತಿ ಶಾಲೆಯನ್ನು ಪ್ರಾರಂಭಿಸಿದೆ. ವಸತಿ ಶಾಲೆಯಲ್ಲಿ 226 ಬಾಲಕಿಯರಿದ್ದಾರೆ. ಮೊದಲು ಚಿಕ್ಕ ಕಟ್ಟಡದಿಂದ ಶಾಲೆ ನಡೆಯುತ್ತಿತ್ತು. ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾದಾಗ ಶಾಲಾ ಆಡಳಿತ ಸಮಿತಿ ದೊಡ್ಡ ಕಟ್ಟಡಕ್ಕಾಗಿ ಸರ್ಕಾರಕ್ಕೆ ಅರ್ಜಿಸಲ್ಲಿಸಿತು.

ಸಮಿತಿಯು ಶಾಲಾ ಕಟ್ಟಡ ನಿರ್ಮಿಸಲು ನಿವೇಶನ ಗುರುತಿಸಿದ್ದರೂ ಸರಕಾರದಿಂದ ಯಾವುದೇ ನೆರವು ಬಂದಿಲ್ಲ ಎಂದು ಶಾಲೆಯ ಕೆಲ ಶಿಕ್ಷಕರು ಆರೋಪಿಸಿದ್ದಾರೆ. ಹೀಗಾಗಿ ಸಮಿತಿ ಸದಸ್ಯರು ಕಳೆದ ಐದು ವರ್ಷಗಳಿಂದ ಮುಚ್ಚಿದ್ದ ಚಿತ್ರಮಂದಿರದಲ್ಲೇ ಶಾಲೆ ನಡೆಸುತ್ತಿದ್ದಾರೆ.

ಸರ್ಕಾರದ ನಿರ್ಲಕ್ಷ್ಯದಿಂದ ಹಳೆ ಚಿತ್ರಮಂದಿರಲ್ಲೇ ವಾಸಿಸುವ ಮತ್ತು ಓದುವ ಅನಿವಾರ್ಯತೆ ಮಕ್ಕಳಿಗಿದೆ. ಈ ಹಿಂದೆ ಶಾಲೆಯನ್ನು ಚಿಕ್ಕ ಹಳೆಯ ಕಟ್ಟಡದಲ್ಲಿ ನಡೆಸಲಾಗುತ್ತಿತ್ತು. ವಿದ್ಯಾರ್ಥಿನಿಯರ ಪೋಷಕರು ಪ್ರತಿಭಟನೆ ನಡೆಸಿದಾಗ ಶಾಲೆಯನ್ನು ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಹೊಸ ಕಟ್ಟಡವಿಲ್ಲದ ಕಾರಣ ತೆರಳದೆ ಸಮಿತಿ ಸದಸ್ಯರು ಹಳೆಯ ಚಿತ್ರಮಂದಿರದಲ್ಲೇ ಶಾಲೆ ನಡೆಸುತ್ತಿದ್ದಾರೆ ಎಂದು ಕುರುಗೋಡು ನಿವಾಸಿಯಾದ ಸಾಮಾಜಿಕ ಕಾರ್ಯಕರ್ತ ಬಸವರಾಜ ಎಮ್​ ಹೇಳಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ 5 ವರ್ಷಗಳಲ್ಲಿ 92 ವಸತಿ ಶಾಲೆಯ ವಿದ್ಯಾರ್ಥಿಗಳು ಆತ್ಮಹತ್ಯೆ

ಚಿತ್ರಮಂದಿರದ ಮಾಲೀಕರಿಗೆ ಸರಕಾರ ವರ್ಷಕ್ಕೆ 1.20 ಲಕ್ಷ ರೂ. ಬಾಡಿಗೆ ನೀಡುತ್ತಿದೆ. ಎರಡ್ಮೂರು ತರಗತಿಗಳು ಏಕಕಾಲಕ್ಕೆ ನಡೆಯುವುದರಿಂದ ವಿದ್ಯಾರ್ಥಿನಿಯರಿಗೆ ಗೊಂದಲ ಉಂಟಾಗುತ್ತಿದೆ. ಆಟದ ಮೈದಾನವಿಲ್ಲ, ಮುಖ್ಯರಸ್ತೆಯ ಬಳಿ ವಿದ್ಯಾರ್ಥಿನಿಯರು ಆಟವಾಡುತ್ತಾರೆ ಎಂದರು.

ನಾವು ಹಲವು ಬಾರಿ ಜ್ಞಾಪಕ ಪತ್ರ ನೀಡಿದರೂ ಸಂಬಂಧಪಟ್ಟ ಅಧಿಕಾರಿಗಳು ಶಾಲೆಯನ್ನು ದೊಡ್ಡ ಕಟ್ಟಡಕ್ಕೆ ಸ್ಥಳಾಂತರಿಸಲು ಇನ್ನೂ ಕ್ರಮ ಕೈಗೊಂಡಿಲ್ಲ. ಇದರಿಂದ ಬೇಸತ್ತ ಪೋಷಕರು ತಮ್ಮ ಮಕ್ಕಳನ್ನು ಬೇರೆ ಶಾಲೆಗಳಿಗೆ ದಾಖಲು ಮಾಡಿದರು ಎಂದು ತಿಳಿಸಿದರು.

ಕುರುಗೋಡು ಪಟ್ಟಣದ ಹೊರವಲಯದಲ್ಲಿ ಶಾಲಾ ಕಟ್ಟಡ ನಿರ್ಮಿಸಲು ನಾಲ್ಕು ಎಕರೆ ಜಾಗ ಮಂಜೂರಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಶಾಲೆಯ ಕಟ್ಟಡವನ್ನು ಶೀಘ್ರದಲ್ಲೇ ನಿರ್ಮಿಸಲಾಗುವುದು ಎಂದು ಕರ್ನಾಟಕ ರೆಸಿಡೆನ್ಶಿಯಲ್ ಎಜುಕೇಶನಲ್ ಇನ್‌ಸ್ಟಿಟ್ಯೂಶನಲ್ ಸೊಸೈಟಿಯ (ಕೆಆರ್‌ಇಐಎಸ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:05 am, Fri, 8 December 23

ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ