ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಬಳ್ಳಾರಿ ಜಿಲ್ಲೆಯ ಸಿರಗುಪ್ಪ(Siruguppa) ಪಟ್ಟಣದಲ್ಲಿ ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧಿಸಿದ ಹಿನ್ನಲೆ ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಸಿರಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ; ಮನನೊಂದ ಪ್ರೇಮಿಗಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣು
ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
Follow us
ವಿನಾಯಕ ಬಡಿಗೇರ್​, ಉತ್ತರ ಕನ್ನಡ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 02, 2024 | 2:47 PM

ಬಳ್ಳಾರಿ, ಆ.02: ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧಿಸಿದ ಹಿನ್ನಲೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ(Siruguppa) ಪಟ್ಟಣದಲ್ಲಿ ನಡೆದಿದೆ. ರಾಜು (23) ಹಾಗೂ ಪವಿತ್ರಾ(20) ಮೃತ ದುರ್ಧೈವಿಗಳು. ಮೃತರಿಬ್ಬರೂ ಸಿರಗುಪ್ಪ ಪಟ್ಟಣದ ನಿವಾಸಿಗಳಾಗಿದ್ದು, ಅನ್ಯ ಜಾತಿಯವರಾಗಿದ್ದಕ್ಕೆ ಎರಡೂ ಮನೆಯಲ್ಲಿ ಮದುವೆಗೆ ವಿರೋಧ ಇತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ತಡ ರಾತ್ರಿ ಮನೆ ಬಿಟ್ಟು ಹೊರ ಬಂದಿದ್ದ ರಾಜು ಹಾಗೂ ಪವಿತ್ರಾ, ಪೋಷಕರ ವಿರೋಧಕ್ಕೆ ಮನನೊಂದು ಬೆಳಗಿನ ಜಾವ ಜಮೀನೊಂದರಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಸಿರಗುಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ವಿದ್ಯಾರ್ಥಿ ಸಾವು

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ವಿದ್ಯಾರ್ಥಿ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ತಮಟಂಪಲ್ಲಿ ಗ್ರಾಮದ ಭಾರ್ಗವ್ ರೆಡ್ಡಿ(18) ಮೃತ ರ್ದುದೈವಿ. ಮೃತ ವಿದ್ಯಾರ್ಥಿ ಚಿಂತಾಮಣಿ ಖಾಸಗಿ ಕಾಲೇಜು ವಿದ್ಯಾರ್ಥಿಯಾಗಿದ್ದು, ಬೆಳಿಗ್ಗೆ ಕಾಲೇಜಿಗೆ ತೆರಳುವಾಗ ದುರಂತ ಸಂಭವಿಸಿದೆ. ಈ ಘಟನೆ ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇನ್ನು ಮಗನ ಮೃತ ದೇಹ ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ:ಬೆಂಗಳೂರು: ಅಶ್ಲೀಲ ಮೆಸೇಜ್​ ಮಾಡಿ ಕಿರುಕುಳ ಆರೋಪ; ಮನನೊಂದ ಮಹಿಳೆ ಆತ್ಮಹತ್ಯೆಗೆ ಶರಣು

ಲಾರಿ ಹರಿದು 33 ಕುರಿಗಳು ಸಾವು

ಬಾಗಲಕೋಟೆ: ಇಳಕಲ್​ ಹೊರವಲಯದಲ್ಲಿ ಲಾರಿ ಹರಿದು 33 ಕುರಿಗಳು ಸಾವನ್ನಪ್ಪಿವೆ. ಸುರಪುರ ತಾಲೂಕಿನ ಕೊಡಕೇಲ್ ಗ್ರಾಮದ ಕುರಿಗಾಹಿ ರಾಯಪ್ಪಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಲಾರಿ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಇಳಕಲ್ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ