AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾಗೇಂದ್ರರನ್ನು ಪುನಃ ಮಂತ್ರಿ ಮಾಡಿದ್ದು ಇದೇ ಕಾರಣಕ್ಕೆ’: ಸ್ಫೋಟಕ ಆರೋಪ ಮಾಡಿದ ಜನಾರ್ದನ ರೆಡ್ಡಿ

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ಆರೋಪ ಎದುರಿಸಿ ಈ ಹಿಂದೆ ರಾಜೀನಾಮೆ ನೀಡಿದ್ದ ಬಳ್ಳಾರಿ ಗ್ರಾಮಾಂತರ ಶಾಸಕ ಬಿ. ನಾಗೇಂದ್ರ ಅವರನ್ನು ಸಿಎಂ ಡಿ.ಕೆ. ಶಿವಕುಮಾರ್ ಅವರ ನೂತನ ಸಂಪುಟಕ್ಕೆ ಮತ್ತೆ ಸೇರ್ಪಡೆಗೊಳಿಸಿರುವುದಕ್ಕೆ ವಿರೋಧ ಪಕ್ಷಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ಸೇರಿದಂತೆ ಬಿಜೆಪಿ ನಾಯಕರು ಸರ್ಕಾರದ ಈ ನಡೆಗೆ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ.

'ನಾಗೇಂದ್ರರನ್ನು ಪುನಃ ಮಂತ್ರಿ ಮಾಡಿದ್ದು ಇದೇ ಕಾರಣಕ್ಕೆ': ಸ್ಫೋಟಕ ಆರೋಪ ಮಾಡಿದ ಜನಾರ್ದನ ರೆಡ್ಡಿ
ಸ್ಫೋಟಕ ಆರೋಪ ಮಾಡಿದ ಜನಾರ್ದನ ರೆಡ್ಡಿ Image Credit source: PTI
ವಿನಾಯಕ ಬಡಿಗೇರ್​
| Edited By: |

Updated on:Aug 04, 2026 | 7:47 PM

Share

ಮುಖ್ಯಾಂಶಗಳು

  • ಸಿಎಂ ಡಿಕೆಶಿ ಸಂಪುಟದಲ್ಲಿ ನಾಗೇಂದ್ರಗೆ ಮಂತ್ರಿ ಸ್ಥಾನ
  • ಗಂಭೀರ ಆರೋಪ ಮಾಡಿದ ಶಾಸಕ ಜನಾರ್ದನ ರೆಡ್ಡಿ
  • ವಾಲ್ಮೀಕಿ ನಿಗಮದ ಅಕ್ರಮ ಪ್ರಸ್ತಾಪಿಸಿ ತೀವ್ರ ವಾಗ್ದಾಳಿ

ಬಳ್ಳಾರಿ, ಆಗಸ್ಟ್​​ 04: ಸಿಎಂ ಡಿಕೆ ಶಿವಕುಮಾರ್​​ ಅವರ ಸಚಿವ ಸಂಪುಟ ವಿಸ್ತರಣೆ ನಿನ್ನೆಯಷ್ಟೇ (ಆ.03) ನಡೆದಿದ್ದು, 19 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆ ಪೈಕಿ ಈ ಹಿಂದೆ ವಾಲ್ಮೀಕಿ ನಿಗಮದ ಹಗರಣ ಸಂಬಂಧ ತಲೆದಂಡವಾಗಿದ್ದ ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ. ನಾಗೇಂದ್ರ ಕೂಡ ಮಂತ್ರಿಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ ಗಾಲಿ ಜನಾರ್ದನ ರೆಡ್ಡಿ, ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ಮಾತ್ರವಲ್ಲದೇ ಬಹುತೇಕ ಪಾಲುದಾರ ಇದ್ದಾರೆ ಎಂದು ತಾನು ಹೇಳಿದ್ದು ಈಗ ನಿಜವಾಗಿದೆ. ನಾಗೇಂದ್ರ ಮುಖಕ್ಕೆ ಬೆಣ್ಣೆ ಹಚ್ಚಿರೋದು ತೋರಿಸಿ, ಉಳಿದವರು ಹಿಂದೆ ಲೂಟಿ ಹೊಡೆದಿದ್ದಾರೆ. ನಾಗೇಂದ್ರರಿಗೆ 10-20 ಪರ್ಸೆಂಟ್ ಕೊಟ್ಟು, ಉಳಿದ ಹಣವನ್ನು ಬಳ್ಳಾರಿ, ತೆಲಂಗಾಣ ಮತ್ತು ಗೋವಾ ಚುನಾವಣೆಗಳಿಗೆ ಬಳಸಿದ್ದಾರೆ. ಒಂದೊಮ್ಮೆ ನಾಗೇಂದ್ರರಿಗೆ ಮಂತ್ರಿ ಸ್ಥಾನ ನೀಡದಿದ್ದರೆ ಅವರು ಅಪ್ರೂವಲ್ ಆಗಿ ಬಿಡುತ್ತಿದ್ದರು ಎಂಬ ಕಾರಣಕ್ಕೆ ಹುದ್ದೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಸತ್ಯ ಹೇಳಬಹುದೆಂಬ ಭಯಕ್ಕೆ ಮಂತ್ರಿಗಿರಿ ನೀಡಿದ್ದಾರೆ’

ಹಗರಣದ ದುಡ್ಡು ಕಾಂಗ್ರೆಸ್ ಪಕ್ಷದವರು ತಿಂದು ತನ್ನ ಜೈಲಿಗೆ ಹಾಕಿಸಿದ್ರು ಎಂದು ಕೋರ್ಟ್ ಮುಂದೆ ನಾಗೇಂದ್ರ ಹೇಳುತ್ತಿದ್ದರು. ಇದೇ ಭಯಕ್ಕೆ ಅವರನ್ನು ಮಂತ್ರಿ ಮಾಡಿದ್ದಾರೆ. ನಾಗೇಂದ್ರ ಬಗ್ಗೆ ತನಗೂ ಅನುಕಂಪ ಇದೆ. ಪಾಪ 10-20 ಪರ್ಸೆಂಟ್ ದುಡ್ಡು ತಿಂದು ಜೈಲಿಗೆ ಹೋದರು. ಆದರೆ ಅವರು ಬುದ್ಧಿವಂತರಾಗಿದ್ದು, ಯಾರ್ಯಾರು ಹಣ ತಿಂದಿದ್ದಾರೆ ಎಂಬ ಬಗ್ಗೆ ಪಟ್ಟಿ ಮಾಡಿ ಕೋರ್ಟ್​​ಗೆ ಕೊಡುತ್ತೇನೆ ಎಂದಿದ್ದಾರೆ. ಹೀಗಾಗಿಯೇ ಕಾಂಗ್ರೆಸ್​​ ಅವರಿಗೆ ಮತ್ತೆ ಮಣೆ ಹಾಕಿದೆ ಎಂದು ಜನಾರ್ದನ ರೆಡ್ಡಿ ಸ್ಫೋಟಕ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ನಮ್ಮಲ್ಲಿ ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಿಲ್ಲ ಎಂದ ಬಿ‌ಕೆ ಹರಿಪ್ರಸಾದ್

ಬಿಜೆಪಿಯಿಂದ ಪ್ರತಿಭಟನೆ

ಮತ್ತೊಂದೆಡೆ ಇದೇ ವಿಚಾರವಾಗಿ ವಿಧಾನಸಭೆ ವಿಪಕ್ಷ ನಾಯಕ ಆರ್​​. ಅಶೋಕ್​​ ಕೂಡ ಕಿಡಿ ಕಾರಿದ್ದಾರೆ. ವಾಲ್ಮೀಕಿ ನಿಗಮದಲ್ಲಿನ ಹಗರಣ ಸಂಬಂಧ ಹೋರಾಟ ಮಾಡಿ ನಾವು ನಾಗೇಂದ್ರ ಅವರ ರಾಜೀನಾಮೆ ಕೊಡಿಸಿದ್ದೆವು. ಆದರೆ ಈಗ ಅವರನ್ನು ವಾಷಿಂಗ್​​ ಮಷಿನ್​​ಗೆ ಹಾಕಿ ಕ್ಲೀನ್​​ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರೆ. ಇನ್ನು ನೂತನ ಸಚಿವ ನಾಗೇಂದ್ರರನ್ನು ವಜಾ ಮಾಡುವಂತೆ ಆಗ್ರಹಿಸಿ ಪರಿಷತ್ ಸದಸ್ಯ ಲಿಂಗರಾಜ್ ಪಾಟೀಲ್ ನೇತೃತ್ವದಲ್ಲಿ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಬಿಜೆಪಿಗರು ಪ್ರತಿಭಟನೆ ಕೂಡ ನಡೆಸಿದ್ದಾರೆ. ವಾಲ್ಮೀಕಿ ನಿಗಮದ 187ಕೋಟಿ ನುಂಗಿದವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್​​ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 3:38 pm, Tue, 4 August 26

Follow Us
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ಬಳಸಿ ಪೋಸ್ಟ್​: ಓರ್ವನ ಬಂಧನ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
H1N1 ಫ್ಲೂ ಆತಂಕ: ಪೋಷಕರು, ಶಾಲೆಗಳಿಗೆ ಆರೋಗ್ಯ ಸಚಿವರಿಂದ ಮಹತ್ವದ ಮಾಹಿತಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ನೀರು ಸಂಸ್ಕರಣಾ ಘಟಕದಲ್ಲಿ ವಿಷಾನಿಲ ಸೋರಿಕೆ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ