AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೂವಿನಹಡಗಲಿ ಭಾಗದ ರೈತರ ನೀರಿನ ಬವಣೆಯನ್ನು ನೀಗಿಸಲಾಗಿದೆ: ಬೊಮ್ಮಾಯಿ

ಹೂವಿನಹಡಗಲಿಯ 42 ಸಾವಿರ ಎಕರೆಗೆ ನೀರಾವರಿ ಮಾಡಲಾಗಿದೆ ಎಂದು ಹೂವಿನಹಡಗಲಿ ನಡೆದ ಜನ ಸಂಕಲ್ಪ ಯಾತ್ರೆಯಲ್ಲಿ ಬೊಮ್ಮಾಯಿ ಹೇಳಿದ್ದಾರೆ,

ಹೂವಿನಹಡಗಲಿ ಭಾಗದ ರೈತರ ನೀರಿನ ಬವಣೆಯನ್ನು ನೀಗಿಸಲಾಗಿದೆ:  ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Oct 13, 2022 | 10:10 PM

Share

ಬಳ್ಳಾರಿ: ಹೂವಿನಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸುವ ಮೂಲಕ ಈ ಭಾಗದ ರೈತರ ನೀರಿನ ಬವಣೆಯನ್ನು ನೀಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು(ಅಕ್ಟೋಬರ್.13) ಹೂವಿನಹಡಗಲಿ ಜನಸಂಕಲ್ಪ ಯಾತ್ರೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ನಾನು ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಳೆದ ಸಾರಿ ಇಲ್ಲಿ ಭೇಟಿ ನೀಡಿದ ಸಂದರ್ಭದಲ್ಲಿ ಸಿಂಗಟಾಲೂರು ಏತ ನೀರಾವರಿ ಪೂರ್ಣ ಮಾಡಬೇಕು ಎಂದು ಜನ ಬೇಡಿಕೆ ಇಟ್ಟಿದ್ದರು‌. ನಾನು ಜಲ ಸಂಪನ್ಮೂಲ ಸಚಿವನಾಗಿದ್ದಾಗ ಹೂವಿನ ಹಡಗಲಿಯ 42 ಸಾವಿರ ಎಕರೆ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಯಿತು. ಹೂವಿನಹಡಗಲಿಯಲ್ಲಿ ಕೆರೆ ತುಂಬಿಸುವ ಕೆಲಸವನ್ನೂ ಮಾಡಲಾಗಿದೆ. ಹೂವಿನ ಹಡಗಲಿಯ ಅಂತರ್ಜಲ ಹೆಚ್ಚಿಸಲು ಕೆಲಸ ಮಾಡಲಾಗಿದೆ ಎಂದರು.

BDA, BBMP ಆಯುಕ್ತರು ಗೈರು, ವಿಧಾನಸಭೆ ಅರ್ಜಿಗಳ ಸಮಿತಿ ಗರಂ: ಮುಖ್ಯ ಕಾರ್ಯದರ್ಶಿಗೆ ದೂರು

ಈ ಭಾಗದ ರೈತರಿಗೆ ನೀರಿನ ಬರ ನಿವಾರಿಸಲು ಬಿಜೆಪಿ ಸರ್ಕಾರ ಮತ್ತು ಯಡಿಯೂರಪ್ಪ ಅವರು ಕಾರಣ. ಹುಲಿಗುಡ್ಡದ ಯೋಜನೆ ತಾವು ಮಾಡಿದ್ದೇವೆ ಅಂತ ಕೆಲವರು ಹೇಳಿಕೊಳ್ಳುತ್ತಿದ್ದರು. ಅದನ್ನು ರದ್ದು ಮಾಡಿ ಸಿಂಗಟಾಲೂರು ಯೋಜನೆಗೆ ಜೋಡಿಸಿ ರೂಪಿಸಲಾಯಿತು. ತಡಕಲ್ಲ ನೀರಾವರಿ ಯೊಜನೆಯನ್ನು ಪೂರ್ಣ ಮಾಡಿ ಲೋಕಾರ್ಪಣೆ ಮಾಡಲಾಗುವುದು ಭರವಸೆ ನೀಡಿದರು.

ಹೂವಿನಹಡಗಲಿಯ ಸಮಗ್ರ ಅಭಿವೃದ್ಧಿ ಮಾಡಿ, ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಏರ್ಪಡಿಸುವ ಈ ಭಾಗಕ್ಕೆ ನಾನು ನೀಡಿದ ಯೋಜನೆಗಳನ್ನು ನಿಮ್ಮ ಮುಂದೆ ರಿಪೋರ್ಟ್ ಕಾರ್ಡ್ ಇಟ್ಡು ಮತ್ತೆ ಅಧಿಕಾರಕ್ಕೆ ಬಂದು ಕನ್ನಡ ನಾಡಿನಲ್ಲಿ ಕಮಲ ಅರಳಿಸಿ ಕಾಂಗ್ರೆಸ್ ನ್ನು ಬೇರು ಸಮೇತ ಕಿತ್ತು ಹಾಕಬೇಕು. ನಮ್ಮ ನೆಚ್ಚಿನ ನಾಯಕರಾದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ 150 ಸ್ಥಾನ ಗೆಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಶಶಿಕಲಾ ಜೊಲ್ಲೆ, ಬಿ.ಶ್ರೀರಾಮುಲು, ಆನಂದಸಿಂಗ್ ಹಾಗೂ ಮತ್ತಿತರರು ಹಾಜರಿದ್ದರು.

Published On - 10:09 pm, Thu, 13 October 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್