AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Janardhana Reddy: ಪತಿ ಜನಾರ್ದನ ರೆಡ್ಡಿ ಪರ ಬಳ್ಳಾರಿಯಲ್ಲಿ ಪತ್ನಿ ಪ್ರಚಾರ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದ ಬಾವುಟ ಬಿಡುಗಡೆ

ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ (Aruna Lakshmi) ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಕುರಿತಾಗಿ ಪ್ರಚಾರ ಆರಂಭಿಸಿದ್ದು, ಪಕ್ಷದ ಬಾವುಟ ಬಿಡುಗಡೆ ಮಾಡಿದ್ದಾರೆ.

Janardhana Reddy: ಪತಿ ಜನಾರ್ದನ ರೆಡ್ಡಿ ಪರ ಬಳ್ಳಾರಿಯಲ್ಲಿ ಪತ್ನಿ ಪ್ರಚಾರ: ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ದ ಬಾವುಟ ಬಿಡುಗಡೆ
ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಪ್ರಚಾರ
TV9 Web
| Edited By: |

Updated on:Jan 01, 2023 | 1:11 PM

Share

ಬಳ್ಳಾರಿ: ಮಾಜಿ ಸಚಿವ ಹಾಗೂ ಗಣಿಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಬಳ್ಳಾರಿ (Bellary) ಜಿಲ್ಲೆಯ ಪ್ರವೇಶ ನಿರ್ಬಂಧವಿದೆ. ಹಾಗಾಗಿ ಅವರು ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ (Kalyan Rajya pragathi paksha) ಸ್ಥಾಪಿಸಿ ಕೊಪ್ಪಳ ಕ್ಷೇತ್ರದಲ್ಲಿ ರಾಜಿಕೀಯವಾಗಿ ತೊಡಗಿಕೊಂಡಿದ್ದಾರೆ. ಇತ್ತ ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ (Aruna Lakshmi) ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಕುರಿತಾಗಿ ಪ್ರಚಾರ ನಡೆಸಿದ್ದಾರೆ. ಇದರ ನಡುವೆ ಬಳ್ಳಾರಿ ಕ್ಷೇತ್ರದಿಂದ ಅರುಣಾ ಲಕ್ಷ್ಮಿ ಅವರನ್ನು ಕಣಕ್ಕಿಳಿಯೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸದ್ಯ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಬಾವುಟ ಬಿಡುಗಡೆ ಮಾಡಿ ಅವರು ಮಾತನಾಡಿದ್ದಾರೆ. ಜನರಿಂದ ಜನಾರ್ದನ ರೆಡ್ಡಿ ದೂರ ಮಾಡಲು ಯಾರಿಂದಲೂ ಆಗಲ್ಲ ಎಂದರು.

ನಾವು ಯಾವತ್ತೂ ಬೆಣಕಲ್​ ಗ್ರಾಮದ ಜನರ ಋಣ ಮರೆಯಲ್ಲ

ಗಾಲಿ ಜನಾರ್ದನ ರೆಡ್ಡಿಗೆ ಬಳ್ಳಾರಿ ಜಿಲ್ಲೆಯ ಪ್ರವೇಶ ನಿರ್ಬಂಧವಿದೆ. ಅವರ ಬದಲು ನಾನು ಬಳ್ಳಾರಿಯಿಂದ ಪ್ರಚಾರ ಆರಂಭಿಸುತ್ತಿದ್ದೇನೆ. ಬೆಣಕಲ್ ಗ್ರಾಮದಲ್ಲಿ ನನಗೆ ಮನೆ ಮಗಳ ಪ್ರೀತಿ ತೋರಿಸಿದ್ದೀರಿ. ನಾವು ಯಾವತ್ತೂ ಬೆಣಕಲ್​ ಗ್ರಾಮದ ಜನರ ಋಣ ಮರೆಯಲ್ಲ. ರೆಡ್ಡಿಗೆ ನೋವು, ಅವಮಾನವಾದ್ರೂ ಜನರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಕಲ್ಯಾಣ ರಾಜ್ಯ ನಿರ್ಮಾಣ ಮಾಡಲು ಶ್ರಮಿಸೋಣ ಎಂದು ಹೇಳಿದರು.

ಇದನ್ನೂ ಓದಿ: Breaking News: ಹೊಸ ರಾಜಕೀಯ ಪಕ್ಷ ಘೋಷಿಸಿದ ಜನಾರ್ದನ ರೆಡ್ಡಿ

ಜನಾರ್ದನ ರೆಡ್ಡಿಯನ್ನ ದೂರ ಮಾಡಲು ಆಗಲ್ಲ

ಜನಾರ್ದನ ರೆಡ್ಡಿಗೆ ರಾಜ್ಯ ಕಲ್ಯಾಣ ರಾಜ್ಯ ಆಗಬೇಕು. ಬಳ್ಳಾರಿ ರಾಜ್ಯಮಟ್ಟದಲ್ಲಿ ಅಭಿವೃದ್ಧಿಯಾಗಬೇಕು. ಜನಾರ್ದನ ರೆಡ್ಡಿಯವರು ಎನೇ ಕೆಲಸ ಮಾಡಿದ್ರು ಕುರುಬ ಸಮಾಜದ ಮನೆಯವರಿಂದ ಆರಂಭ ಮಾಡಿದ್ದಾರೆ. ಮದುವೆ ಆಗಿ 30 ವರ್ಷದ ನಂತರ ಬೆಣಕಲ್ ಗ್ರಾಮಕ್ಕೆ ಆಗಮಿಸಿರುವ ನನಗೆ ಮನೆ ಮಗಳ ಪ್ರೀತಿ ತೋರಿಸಿದ್ದೀರಿ. ಜನಾರ್ದನ ರೆಡ್ಡಿಗೆ ನೋವು, ಅವಮಾನ ಆದ್ರು ಅವರು ಜನರ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ. ಹುಟ್ಟಿದ ಸೂರ್ಯನನ್ನ ಯಾರಿಂದಲೂ ತಡೆಯಲು ಆಗಲ್ಲ. ಜನರಿಂದ ಜನಾರ್ದನ ರೆಡ್ಡಿಯನ್ನ ದೂರ ಮಾಡಲು ಆಗಲ್ಲ. ತಂದೆ ತಾಯಿ ಬಂಧು ಬಳಗ ನೀವು ಎಂದು ಅರುಣಾ ಲಕ್ಷ್ಮೀ ಹೇಳಿದರು.

ಇದನ್ನೂ ಓದಿ: ಪಕ್ಷ ಏನೇ ಹೇಳಿದ್ರು ಮಾಡುವೆ; ಪರೋಕ್ಷವಾಗಿ ಗೆಳೆಯ ಜನಾರ್ದನ ರೆಡ್ಡಿ ವಿರುದ್ಧ ಪ್ರಚಾರಕ್ಕೂ ಸಿದ್ಧ ಎಂದ ರಾಮುಲು

ಬಳ್ಳಾರಿಯಲ್ಲಿ ರೆಡ್ಡಿ ಪರ ಪ್ರಚಾರ ಆರಂಭ; ಅಲ್ಲಲ್ಲಿ ಬ್ಯಾನರ್​ಗಳ ಅಳವಡಿಕೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಎಂಬ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಪರ ನಗರದಲ್ಲಿ ಪ್ರಚಾರ ಆರಂಭಗೊಂಡಿದೆ. ಹಲವು ಕಡೆಗಳಲ್ಲಿ ಜನಾರ್ದನ ರೆಡ್ಡಿ ಹೊಸ‌ ಪಕ್ಷದ‌ ಬ್ಯಾನರ್​ಗಳು ರಾರಾಜಿಸಲು ಆರಂಭವಾಗಿದೆ. ಹೊಸ ಪಕ್ಷ ಕಟ್ಟಿರುವ ಜನಾರ್ದನ ರೆಡ್ಡಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಲು ಅಭಿಮಾನಿಗಳು ಬ್ಯಾನರ್​ಗಳನ್ನು ಹಾಕುತ್ತಿದ್ದಾರೆ. ಪ್ರಮುಖ ನಾಯಕರ ಪೋಟೋ ಇಲ್ಲದೇ ಕೇವಲ ಸಣ್ಣಪುಟ್ಟ ಕಾರ್ಯಕರ್ತರ ಫೋಟೋ ಇರುವ ಬ್ಯಾನರ್ ಹಾಕಲಾಗಿದೆ. ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ಹೊರತುಪಡಿಸಿ ಯಾವೊಬ್ಬ ಪ್ರಮುಖ ನಾಯಕರ ಪೋಟೋ ಬ್ಯಾನರ್​ನಲ್ಲಿ ಇಲ್ಲ. ಭಾನುವಾರವೇ ಪಕ್ಷ ಘೋಷಣೆಯಾದರೂ ಇಂದು ಅಭಿಮಾನಿಗಳು ಬ್ಯಾನರ್ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:10 pm, Sun, 1 January 23

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ