Jeans Park in Ballari: ಬಳ್ಳಾರಿಯಲ್ಲಿ ಜೀನ್ಸ್​​ ಪಾರ್ಕ್​ಗೆ ಭೂಮಿ ಗುರುತಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

|

Updated on: Aug 09, 2023 | 6:17 PM

ವಿಧಾನಸಭೆ ಚುನಾವಣೆಗೆ ಮುನ್ನ ಐದು ಉಚಿತ ಗ್ಯಾರಂಟಿಗಳ ಹೊರತಾಗಿ, ಬಳ್ಳಾರಿಯಲ್ಲಿ 5,000 ಕೋಟಿ ರೂ. ವೆಚ್ಚದಲ್ಲಿ ಜೀನ್ಸ್ ಅಪರಲ್ ಪಾರ್ಕ್ ಸ್ಥಾಪಿಸುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಈ ಸಂಬಂಧ ಅವರು ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆ ನಂತರ ಬಳ್ಳಾರಿಯ ಎಲ್ಲಾ ಶಾಸಕರ ಜೊತೆ ಸಿದ್ದರಾಮಯ್ಯ ಸಭೆ ನಡೆಸಿದ್ದರು.

Jeans Park in Ballari: ಬಳ್ಳಾರಿಯಲ್ಲಿ ಜೀನ್ಸ್​​ ಪಾರ್ಕ್​ಗೆ ಭೂಮಿ ಗುರುತಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us on

ಬಳ್ಳಾರಿ: ಬಳ್ಳಾರಿಯನ್ನು (Ballari) ಭಾರತದ ಜೀನ್ಸ್ ರಾಜಧಾನಿಯನ್ನಾಗಿ ಮಾಡುವುದಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿಧಾನಸಭೆ ಚುನಾವಣಾ ಪೂರ್ವ ಭರವಸೆ ನೀಡಿದ್ದರು. ಅದನ್ನು ಈಗ ಈಡೇರಿಸುವತ್ತ ಕಾಂಗ್ರೆಸ್ ಸರ್ಕಾರ ಒಲವು ತೋರಿದೆ. ಜಿಲ್ಲೆಯಲ್ಲಿ ಜೀನ್ಸ್ ಜವಳಿ ಪಾರ್ಕ್ ಸ್ಥಾಪಿಸಲು ಭೂಮಿ ಆಯ್ಕೆ ಮಾಡುವಂತೆ ಕರ್ನಾಟಕ ಸರ್ಕಾರವು (Karnataka Government) ಬಳ್ಳಾರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬಳ್ಳಾರಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಜೀನ್ಸ್ ಜವಳಿ ಪಾರ್ಕ್ ನಿರ್ಮಿಸಲು ಜಾಗವನ್ನು ಪತ್ತೆ ಹಚ್ಚಿ ವಿವರವಾದ ಯೋಜನಾ ವರದಿಯನ್ನು ಸಿದ್ಧಪಡಿಸುವಂತೆ ಜಿಲ್ಲಾ ಸಚಿವ ಬಿ.ನಾಗೇಂದ್ರ ಮತ್ತು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರಿಗೆ ಸೂಚಿಸಿದ್ದಾರೆ.

ವಿಧಾನಸಭೆ ಚುನಾವಣೆಗೆ ಮುನ್ನ ಐದು ಉಚಿತ ಗ್ಯಾರಂಟಿಗಳ ಹೊರತಾಗಿ, ಬಳ್ಳಾರಿಯಲ್ಲಿ 5,000 ಕೋಟಿ ರೂ. ವೆಚ್ಚದಲ್ಲಿ ಜೀನ್ಸ್ ಅಪರಲ್ ಪಾರ್ಕ್ ಸ್ಥಾಪಿಸುವುದಾಗಿ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಈ ಸಂಬಂಧ ಅವರು ಇತ್ತೀಚೆಗೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು. ಆ ನಂತರ ಬಳ್ಳಾರಿಯ ಎಲ್ಲಾ ಶಾಸಕರ ಜೊತೆ ಸಿದ್ದರಾಮಯ್ಯ ಸಭೆ ನಡೆಸಿ ಜಿಲ್ಲೆಯಲ್ಲಿ ಜಾರಿಯಾಗುತ್ತಿರುವ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​​ಪ್ರೆಸ್’ ವರದಿ ಮಾಡಿದೆ.

ಜಿಲ್ಲೆಯಲ್ಲಿ ಪ್ರತ್ಯೇಕ ಜವಳಿ ಪಾರ್ಕ್ ಮಾಡಬೇಕು ಎಂಬುದು ಜೀನ್ಸ್ ತಯಾರಕರ ಬಹುದಿನಗಳ ಬೇಡಿಕೆಯಾಗಿದೆ ಎಂದು ಶಾಸಕರು ತಿಳಿಸಿದ್ದಾರೆ.

ಇದನ್ನೂ ಓದಿ: ಏನು ಗ್ಯಾರಂಟಿ ಕೊಡಬೇಕೆಂಬುದು ರಾಹುಲ್​ಗೇ ಗೊತ್ತಿಲ್ಲ; ಬಿಜೆಪಿ ನಾಯಕರು ವ್ಯಂಗ್ಯವಾಡಿದ್ದು ಈ ಕಾರಣಕ್ಕೆ ನೋಡಿ

ಬಳ್ಳಾರಿಯನ್ನು ಜೀನ್ಸ್ ರಾಜಧಾನಿಯನ್ನಾಗಿ ಮಾಡಲು ನಮ್ಮ ಸರ್ಕಾರ ಸರಿಯಾದ ಕ್ರಮಗಳನ್ನು ತೆಗೆದುಕೊಂಡಿದೆ. ಬಳ್ಳಾರಿ ನಗರದಲ್ಲಿ ಜವಳಿ ಪಾರ್ಕ್‌ ನಿರ್ಮಾಣಕ್ಕೆ ಸೂಕ್ತ ಜಾಗ ಹುಡುಕುವಂತೆ ಡಿಪಿಆರ್‌ ಸಿದ್ಧಪಡಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ. ನಾವು ಆದಷ್ಟು ಬೇಗ ಡಿಪಿಆರ್ ಸಲ್ಲಿಸುತ್ತೇವೆ. ಈ ಬಗ್ಗೆ ಜಿಲ್ಲಾಡಳಿತದೊಂದಿಗೆ ಚರ್ಚಿಸಿ ಖಾಲಿ ಇರುವ ಸರ್ಕಾರಿ ಜಾಗ ಪಟ್ಟಿ ಸಿದ್ಧಪಡಿಸುತ್ತೇನೆ ಎಂದು ಶಾಸಕರು ತಿಳಿಸಿದ್ದಾರೆ.

ಈ ಮಧ್ಯೆ, ಹಲವಾರು ಜೀನ್ಸ್ ತಯಾರಕರು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ. ಸರ್ಕಾರವು ಶೀಘ್ರದಲ್ಲೇ ಯೋಜನೆಯನ್ನು ಜಾರಿಗೊಳಿಸುತ್ತದೆ ಎಂದು ನಾವು ಭಾವಿಸುತ್ತೇವೆ. ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ನಾವು ಕಾಯುತ್ತಿದ್ದೇವೆ, ಏಕೆಂದರೆ ಇದು ನಮ್ಮ ಉತ್ಪನ್ನಗಳನ್ನು ಒಂದೇ ಸ್ಥಳದಲ್ಲಿ ಮಾರಾಟ ಮಾಡಲು ಅನುವು ಮಾಡಿಕೊಡುತ್ತದೆ ಇದು ಬಳ್ಳಾರಿಯನ್ನು ದೇಶದ ಜೀನ್ಸ್ ರಾಜಧಾನಿಯನ್ನಾಗಿ ಮಾಡುತ್ತದೆ ಎಂದು ಜೀನ್ಸ್ ತಯಾರಕರು ‘ದಿ ನ್ಯೂ ಇಂಡಿಯನ್ ಎಕ್ಸ್​​​ಪ್ರೆಸ್’ಗೆ ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ