AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು ಮಾಡಿದ ಬಳ್ಳಾರಿ ಪಾಲಿಕೆ, ಕಾಂಗ್ರೆಸ್ ನಾಯಕರ ಆಕ್ರೋಶ

ನಿನ್ನೆ ಮೊನ್ನೆ ಚಿತ್ರದುರ್ಗದಲ್ಲಿ ಬಿಜೆಪಿಯವರು ಹಾಕಿದ್ದ ಬ್ಯಾನರ್ ತೆಗೆಯಲಿಲ್ಲ. ಆದ್ರೆ ಈಗ ‘ಕೈ’ ಕಾರ್ಯಕರ್ತರು ಹಾಕಿದ್ದ ಬ್ಯಾನರ್​​ ತೆಗೆಯುತ್ತಿದ್ದಾರೆ ಎಂದು ಜೆ.ಎಸ್.ಆಂಜನೇಯಲು ಆಕ್ರೋಶ ಹೊರ ಹಾಕಿದರು.

ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು ಮಾಡಿದ ಬಳ್ಳಾರಿ ಪಾಲಿಕೆ, ಕಾಂಗ್ರೆಸ್ ನಾಯಕರ ಆಕ್ರೋಶ
ಭಾರತ್ ಜೋಡೋ ಯಾತ್ರೆ ಬ್ಯಾನರ್ ತೆರವು ಮಾಡಿದ ಬಳ್ಳಾರಿ ಪಾಲಿಕೆ
TV9 Web
| Edited By: ಆಯೇಷಾ ಬಾನು|

Updated on:Oct 12, 2022 | 8:39 AM

Share

ಬಳ್ಳಾರಿ: ಕೋಟೆನಾಡು ಚಿತ್ರದುರ್ಗದಲ್ಲಿ ಚಳ್ಳಕೆರೆ ಪಟ್ಟಣದಿಂದ ಭಾರತ್ ಜೋಡೋ ಯಾತ್ರೆ ಮುಂದುವರೆದಿದೆ. ಆದ್ರೆ ಮತ್ತೊಂದು ಕಡೆ ರಾಹುಲ್ ಗಾಂಧಿ ಐಕ್ಯತಾ ಯಾತ್ರೆಯ ಸ್ವಾಗತಕ್ಕಾಗಿ ಬಳ್ಳಾರಿಯಲ್ಲಿ ಹಾಕಿದ್ದ ಬ್ಯಾನರ್​ಗಳನ್ನು ತೆರವು ಮಾಡಲಾಗಿದೆ. ಜಿಲ್ಲಾಡಳಿತದ ಸೂಚನೆ ಮೇರೆಗೆ ಪಾಲಿಕೆ ಸಿಬ್ಬಂದಿ ಬ್ಯಾನರ್ ತೆರವು ಮಾಡಿದ್ದಾರೆ.

ನಗರದ ತುಂಬೆಲ್ಲಾ ಅನಧಿಕೃತವಾಗಿ ಹಾಕಿದ ಬ್ಯಾನರ್ ತೆರವಿಗೆ ಪಾಲಿಕೆ ಮುಂದಾಗಿದ್ದು ಪಾಲಿಕೆಯ ವರ್ತನೆ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಸೌಂದರ್ಯಕರಣ‌ಕ್ಕೆ ಅಡ್ಡಿ ಹಾಗೂ ಪ್ಲಾಸ್ಟಿಕ್ ಬಳಕೆ ಹಿನ್ನಲೆಯಲ್ಲಿ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದಿದ್ದು ಜೆಸಿಬಿ ಬಳಸಿ ಬ್ಯಾನರ್ ತೆರವು ಮಾಡುತ್ತಿದ್ದಾರೆ. ಪಾಲಿಕೆ ಸಿಬ್ಬಂದಿ ರಾಶಿ ರಾಶಿ ಬ್ಯಾನರ್ ಗಳನ್ನ ಟ್ಯಾಕ್ಟರ್ ನಲ್ಲಿ ತಗೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ‘ಅವರಿದ್ದರೆ ಉಸಿರುಗಟ್ಟಿದಂತಾಗುತ್ತೆ’; ಸಂಜುನ ನೋಡಿದ ಅನುಗೆ ನೆನಪಾಗುತ್ತಿದ್ದಾನೆ ಆರ್ಯವರ್ಧನ್​

ಪಾಲಿಕೆಯ ಕಮಿಷನರ್ ರುದ್ರೇಶ್ ನೇತೃತ್ವದಲ್ಲಿ ಸುಮಾರು 400 ಸಿಬ್ಬಂದಿಯಿಂದ ಬ್ಯಾನರ್​ಗಳ ತೆರವು ಕಾರ್ಯಾಚರಣೆ ನಡೆಯುತ್ತಿದೆ. ರಾತ್ರೋ ರಾತ್ರಿ ಸಿಬ್ಬಂದಿ ದೊಡ್ಡ ದೊಡ್ಡ ಬ್ಯಾನರ್​ಗಳನ್ನು ನೆಲಕ್ಕೆ ಉರುಳಿಸಿ ಅವುಗಳನ್ನು ಬೇರೆಡೆಗೆ ತೆಗೆದುಕೊಂಡು ಹೋಗಿದ್ದಾರೆ. ಪರ್ಮಿಷನ್ ಇಲ್ಲದೇ ಬ್ಯಾನರ್ ಹಾಕಿದ್ದಾರೆ, ಪಕ್ಷಾತೀತವಾಗಿ ಎಲ್ಲ ಬ್ಯಾನರ್ ತೆಗೆದಿದ್ದೇವೆ ಎಂದು ಪಾಲಿಕೆ ಕಮಿಷನರ್ ರುದ್ರೇಶ್ ತಿಳಿಸಿದ್ದಾರೆ.

ಬಳ್ಳಾರಿಯಲ್ಲಿ ಕಾಂಗ್ರೆಸ್​ ಬ್ಯಾನರ್​​ ತೆರವಿಗೆ ತೀವ್ರ ಆಕ್ರೋಶ

ಇನ್ನು ಬಳ್ಳಾರಿಯಲ್ಲಿ ಕಾಂಗ್ರೆಸ್​​ ಯಾತ್ರೆಯ ಬ್ಯಾನರ್ ತೆರವು ಮಾಡಿದಕ್ಕೆ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯದರ್ಶಿ ಜೆ.ಎಸ್.ಆಂಜನೇಯಲು ಆಕ್ರೋಶ ಹೊರ ಹಾಕಿದ್ದಾರೆ. ಸರ್ಕಾರ ಅಧಿಕಾರಿಗಳನ್ನ ಬಳಸಿಕೊಂಡು ಬ್ಯಾನರ್ ತೆರವು ಮಾಡಿದ್ದಾರೆ. ನಿನ್ನೆ ಮೊನ್ನೆ ಚಿತ್ರದುರ್ಗದಲ್ಲಿ ಬಿಜೆಪಿಯವರು ಹಾಕಿದ್ದ ಬ್ಯಾನರ್ ತೆಗೆಯಲಿಲ್ಲ. ಆದ್ರೆ ಈಗ ‘ಕೈ’ ಕಾರ್ಯಕರ್ತರು ಹಾಕಿದ್ದ ಬ್ಯಾನರ್​​ ತೆಗೆಯುತ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದರು. ಬಳ್ಳಾರಿಯನ್ನ ಮತ್ತೆ ರಿಪಬ್ಲಿಕ್ ಆಫ್ ಬಳ್ಳಾರಿ‌ ಮಾಡುತ್ತಿದ್ದಾರೆ. ಬಿಜೆಪಿಯವರಿಗೆ ಭಾರತ್​ ಜೋಡೋ ಭಯ ಶುರುವಾಗಿದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:01 am, Wed, 12 October 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ