ದುಷ್ಕರ್ಮಿಗಳಿಂದ ಖಬರಸ್ತಾನದಲ್ಲಿನ ನೂರಾರು ಸಮಾಧಿಗಳು ನೆಲಸಮ : ಮುಸ್ಲಿಂ ಸಮುದಾಯದವರಿಂದ ಆಕ್ರೋಶ

ಖಬರಸ್ಥಾನ ನೆಲಸಮಗೊಳಿಸಿದ ಕೃತ್ಯದಿಂದ ಮುಸ್ಲಿಂ ಸಮಾಜದವರಿಗೆ ಮಾನಸಿಕ‌ ಹಿಂಸೆಯಾಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು - ಮಹಮ್ಮದ್ ಗೌಸ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು

ದುಷ್ಕರ್ಮಿಗಳಿಂದ ಖಬರಸ್ತಾನದಲ್ಲಿನ ನೂರಾರು ಸಮಾಧಿಗಳು ನೆಲಸಮ : ಮುಸ್ಲಿಂ ಸಮುದಾಯದವರಿಂದ ಆಕ್ರೋಶ
ಖಬರಸ್ತಾನದಲ್ಲಿನ ನೂರಾರು ಸಮಾಧಿಗಳು ನೆಲಸಮ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 28, 2022 | 2:06 PM

ಬಳ್ಳಾರಿ: ವಿಜಯನಗರ (Vijayanagara) ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕೊಂಡನಾಯಕನಹಳ್ಳಿಯಲ್ಲಿ ಮುಸ್ಲಿಂ ಸಮಾಜದ ಖಬರಸ್ತಾನದಲ್ಲಿನ (Kabrastan) ನೂರಕ್ಕೂ ಹೆಚ್ಚು ಸಮಾಧಿಗಳನ್ನು ಸಂಪೂರ್ಣ ನೆಲಸಮಗೊಳಿಸಿರುವ (Demolition) ಘಟನೆ ನಡೆದಿದೆ. ಸುಮಾರು ವರ್ಷಗಳಿಂದ ಮುಸ್ಲಿಮರು ಈ ಖಬರಸ್ತಾನದಲ್ಲಿ ಮೃತರ ಅಂತ್ಯಕ್ರಿಯೆ ಮಾಡುತ್ತ ಬಂದಿದ್ದು. ಅವರ ನೆನಪಲ್ಲಿ ಸಮಾಧಿ ನಿರ್ಮಿಸಿದ್ದಾರೆ. ಆದರೆ ಯಾರೋ ದುಷ್ಕರ್ಮಿಗಳು ಭಾನುವಾರ ತಡರಾತ್ರಿ ಜೆಸಿಬಿಯಿಂದ ಸಮಾಧಿಗಳನ್ನೆಲ್ಲ (Burial Ground) ನೆಲಸಮಗೊಳಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಖಬರಸ್ಥಾನ ನೆಲಸಮಗೊಳಿಸಿದ ಕೃತ್ಯದಿಂದ ಮುಸ್ಲಿಂ ಸಮಾಜದವರಿಗೆ ಮಾನಸಿಕ‌ ಹಿಂಸೆಯಾಗಿದ್ದು, ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ರಾಜ್ಯ ವಕ್ಫ್ ಬೋರ್ಡ್ ಅಡಿಯಲ್ಲಿ ಬರುವ ಮುಸ್ಲಿಂ ಖಬರಸ್ತಾನ (ಸುನ್ನಿ) ಆಡಿಷನಲ್‌ ಪ್ರಾಪರ್ಟಿ ಆಫ್ ಮಸೀದಿ-ಇ-ಫಿರ್ದೋಸ್ ನ ಅಧ್ಯಕ್ಷ ಮಹಮ್ಮದ್ ಗೌಸ್ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಈ ಸಂಬಂಧ ಸೋಮವಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ದುಷ್ಕಮಿಗಳಿಗಾಗಿ ಬಲೆ ಬೀಸಿದ್ದಾರೆ.

ನೂರಲ್ಲ, ನಾಲ್ಕೈದು ಸಮಾಧಿಗಳು ನೆಲಸಮ- ಎಸ್ ಪಿ ಸ್ಪಷ್ಟನೆ

Kabrastan Demolished in Hospet taluk in Vijayanagara SP clarification

ಕೊಂಡನಾಯಕನಹಳ್ಳಿಯಲ್ಲಿ ಮುಸ್ಲಿಂ ಸಮಾಜದ ಖಬರಸ್ತಾನದಲ್ಲಿನ ನೂರು ಅಲ್ಲ, ನಾಲ್ಕೈದು ಸಮಾಧಿಗಳನ್ನು ನೆಲ ಸಮಗೊಳಿಸಲಾಗಿದೆ. ಅಮರೇಶ ಎಂಬುವರಿಗೆ ಸೇರಿದ ಎಂಟು ಸೇಂಟ್ಸ್ ಖಾಸಗಿ ಜಾಗದಲ್ಲಿ ಮುಸ್ಲಿಮರ ಸಮಾಧಿಗಳನ್ನು ನಿರ್ಮಿಸಲಾಗಿತ್ತು. ಅವರು ಅದಕ್ಕೆ ಹಣ ಕೇಳಿದರೆ ಕೊಟ್ಟಿರಲಿಲ್ಲ. ಅದಕ್ಕಾಗಿ ಅವರು ಬೇರೆಯವರ ಮೂಲಕ ಅದನ್ನು ತೆರವುಗೊಳಿಸಿದ್ದಾರೆ. ಇದು ಸಿವಿಲ್ ವಿಷಯ. ಈ ಕುರಿತು ಸಂಬಂಧಿಸಿದ ಇಲಾಖೆಯ ಗಮನಕ್ಕೆ ಈ ವಿಷಯ ತರಲಾಗಿದೆ. ಅವರು ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಜರುಗಿಸುವರು ಎಂದು ಎಸ್ಪಿ ಶ್ರೀಹರಿಬಾಬು ತಿಳಿಸಿದ್ದಾರೆ.

ಈ ವಿವಾದಿತ ಜಾಗ ವಕ್ಫ್ ಬೋರ್ಡ್ ಗೆ ಸೇರಿದ್ದಲ್ಲ. ಅದರ ಸಮೀಪದ ಜಾಗ ವಕ್ಫ್ ಬೋರ್ಡಿನದ್ದಾಗಿದೆ‌. ಒಟ್ಟಿನಲ್ಲಿ ಖಬರಸ್ತಾನದಲ್ಲಿನ ಸಮಾಧಿಗಳನ್ನ ನೆಲಸಮಗೊಳಿಸಿರುವುದು ಮುಸ್ಲಿಂ ಸಮದಾಯದ ಆಕ್ರೋಶ ಕಾರಣವಾಗಿದ್ದು. ಹೊಸಪೇಟೆ ಪಟ್ಟಣದ ಮುಸ್ಲಿಂ ಸಮುದಾಯದ ಮುಖಂಡರು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ವರದಿ: ವೀರೇಶ ದಾನಿ, ಟಿವಿ 9, ವಿಜಯನಗರ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:54 pm, Wed, 28 December 22

ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ